ಮುಂಬೈ | ಅಪ್ರಾಪ್ತ ಬಾಲಕಿಗೆ ‘ಹಾಟ್’ ಎಂದವನಿಗೆ ಮೂರು ವರ್ಷ ಜೈಲು ಶಿಕ್ಷೆ

Date:

ಅಪ್ರಾಪ್ತ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಲ್ಲದೇ, ಆಕೆಯನ್ನು ‘ಹಾಟ್’ ಎಂದು ಕರೆದ 50 ವರ್ಷದ ವ್ಯಕ್ತಿಯೊಬ್ಬನಿಗೆ ಮುಂಬೈನ ವಿಶೇಷ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಯು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಉದ್ದೇಶ ಹೊಂದಿದ್ದ ಎಂದು ನ್ಯಾಯಾಲಯವು ಅಭಿಪ್ರಾಯ ಪಟ್ಟಿದೆ.

- Advertisement -

ವಿಶೇಷ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಎಸ್ ಸಿ ಜಾಧವ್ ಅವರು ಡಿಸೆಂಬರ್ 14 ರಂದು ಆರೋಪಿಗಳಿಗೆ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಹಿಂಬಾಲಿಸುವುದು ಮತ್ತು ಕಿರುಕುಳ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ದೋಷಿ ಎಂದು ತೀರ್ಪು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಪ್ರಕರಣವು ಮೇ 24, 2016 ರಂದು ನಡೆದಿದ್ದು, ಆಗ ಸಂತ್ರಸ್ತ ಬಾಲಕಿಗೆ 13 ವರ್ಷ ವಯಸ್ಸಾಗಿತ್ತು.

ಸಾಕ್ಷಿಗಳ ಹೇಳಿಕೆ ಮತ್ತು ಸಂತ್ರಸ್ತೆಯ ಹೇಳಿಕೆಗಳನ್ನು ವಿವರವಾಗಿ ಪರಿಶೀಲಿಸಿದಾಗ, ಮೇ 24, 2016ರಂದು ಬಾಲಕಿ ತನ್ನ ಸ್ನೇಹಿತನೊಂದಿಗೆ ಮಸೀದಿಯ ಬಳಿ ನಿಂತಿದ್ದ ಸಂದರ್ಭದಲ್ಲಿ ಆರೋಪಿಯು ಬಾಲಕಿಯನ್ನು ಅನುಚಿತ ಸ್ಥಳದಲ್ಲಿ ಸ್ಪರ್ಶಿಸಿರುವುದು ಸಾಬೀತಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಆರೋಪಿಯು ಮುಂದುವರೆದು, ‘ನೀನು ತುಂಬಾ ಪ್ರಚೋದನಕಾರಿಯಾಗಿ ಇದ್ದೀಯಾ. ನಿನ್ನ ಕೆನ್ನೆಗೆ ಮುತ್ತು ಕೊಡುವ ಆಸೆಯಾಗುತ್ತಿದೆ’ ಎಂದಿದ್ದೂ ಅಲ್ಲದೇ ಆಕೆಯನ್ನು ತನ್ನೊಂದಿಗೆ ಕರೆದೊಯ್ಯಲು ಬಯಸಿದ್ದಾಗಿಯೂ ಕೋರ್ಟ್ ತಿಳಿಸಿದೆ.

ಆರೋಪಿಯು ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸುವುದು ಮತ್ತು ಅಂತಹ ಪದಗಳನ್ನು ಆಡಿರುವುದರ ಹಿಂದೆ ಇರುವುದು ಲೈಂಗಿಕ ದೌರ್ಜನ್ಯದ ಉದ್ದೇಶವಲ್ಲದೇ ಬೇರೇನಲ್ಲ ಎಂದು ನ್ಯಾಯಾಲಯವು ಅಭಿಪ್ರಾಯ ಪಟ್ಟಿದೆ.

ಆರೋಪಿಗಳು ಬಾಲಕಿಯನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂಬುದು ಸಾಬೀತಾಗಿದೆ ಎಂದು ನ್ಯಾಯಾಲಯ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...