ಮುಂಬೈ | ಮ್ಯಾನ್‌ಹೋಲ್‌ಗೆ ಇಳಿದ ಓರ್ವ ಕಾರ್ಮಿಕ ಸಾವು, ಮತ್ತೊಬ್ಬರು ಗಂಭೀರ

Date:

ಮ್ಯಾನ್‌ಹೋಲ್ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ವಿಷಕಾರಿ ಅನಿಲದಿಂದ ಅಸ್ವಸ್ಥಗೊಂಡು, ಓರ್ವ ಮೃತಪಟ್ಟಿರುವ ಘಟನೆ ಮುಂಬೈನ ಸಾಂತಾಕ್ರೂಜ್‌ (ಪೂರ್ವ)ದಲ್ಲಿ ನಡೆದಿದೆ. ಮತ್ತೊಬ್ಬ ಕಾರ್ಮಿಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

ಸಾಂತಾಕ್ರೂಜ್‌ ಪೂರ್ವದ ವಿ.ಎನ್. ದೇಸಾಯಿ ಆಸ್ಪತ್ರೆ ಎದುರಿನ ಗೋಲಿಬಾರ್ ರಸ್ತೆ ಸಂಖ್ಯೆ 8ರಲ್ಲಿರುವ ‘ಭವ್ಯ ನಿಕೇತನ’ ವಸತಿ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ. ಸೊಸೈಟಿಯ ಮ್ಯಾನ್‌ಹೋಲ್‌ ಸ್ವಚ್ಛಗೊಳಿಸಲು ಇಬ್ಬರು ಕಾರ್ಮಿಕರನ್ನು ನೇಮಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸ್ವಚ್ಛತಾ ಕಾರ್ಯದ ವೇಳೆ ಬಿಎಂಸಿ ಅಧಿಕಾರಿಗಳಿಗೆ ಮಾಹಿತಿ ನೀಡದೆ ಕಾರ್ಮಿಕರು ಮ್ಯಾನ್‌ಹೋಲ್‌ಗೆ ಇಳಿದಿದ್ದರು. ಕೆಲವೇ ಸಮಯದಲ್ಲಿ ಇಬ್ಬರೂ ಅಸ್ವಸ್ಥರಾಗಿ ಮ್ಯಾನ್‌ಹೋಲ್‌ನೊಳಗೆ ಬಿದ್ದಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಇಬ್ಬರನ್ನೂ ಹೊರತೆಗೆದಿದ್ದಾರೆ ಎಂದು ವರದಿಯಾಗಿದೆ.

ನಂತರ ಇಬ್ಬರನ್ನೂ ವಿ.ಎನ್. ದೇಸಾಯಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಓರ್ವ ಕಾರ್ಮಿಕ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮತ್ತೊಬ್ಬನನ್ನು MICUಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಕಾರ್ಮಿಕರ ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು, ಆಂಬ್ಯುಲೆನ್ಸ್‌ಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.

ಮ್ಯಾನ್‌ಹೋಲ್‌ಗಳಲ್ಲಿ ವಿಷಕಾರಿ ಅನಿಲಗಳು ಸಂಗ್ರಹವಾಗಿರುವ ಸಾಧ್ಯತೆ ಹಾಗೂ ಆಮ್ಲಜನಕದ ಕೊರತೆಯಿಂದ ಉಸಿರುಗಟ್ಟುವ ಅಪಾಯವಿದ್ದರೂ, ಸ್ವಚ್ಛಗೊಳಿಸುವ ಕೆಲಸಕ್ಕೆ ಮನುಷ್ಯರನ್ನೇ ನೇರವಾಗಿ ಮ್ಯಾನ್‌ಹೋಲ್‌ಗೆ ಇಳಿಸುವುದು ಅಮಾನವೀಯ. ಕಾರ್ಮಿಕರ ಜೀವಕ್ಕೆ ಅಪಾಯವಿರುವುದು ಗೊತ್ತಿದ್ದರೂ ಸೂಕ್ತ ಸುರಕ್ಷತಾ ಸಾಧನಗಳು ಮತ್ತು ಯಂತ್ರೋಪಕರಣಗಳಿಲ್ಲದೆ ಅವರನ್ನು ಒಳಗೆ ಕಳುಹಿಸುವುದು ಗಂಭೀರ ನಿರ್ಲಕ್ಷ್ಯ.

ಇದನ್ನೂ ಓದಿ: ಒಡಿಶಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಮಲದ ಗುಂಡಿಗೆ ಇಳಿದ 6 ಮಂದಿ ದಾರುಣ ಸಾವು

ಮುಂಬೈ ಉಪನಗರದ ಸಾರ್ವಜನಿಕ ಶೌಚಾಲಯವೊಂದರಲ್ಲಿ ವಿಷಕಾರಿ ರಾಸಾಯನಿಕ ಅನಿಲದಿಂದ ಉಸಿರುಗಟ್ಟಿ ಇಬ್ಬರು ಮೃತಪಟ್ಟ ಘಟನೆ ನಡೆದ ಕೇವಲ ಒಂದು ದಿನದ ಬಳಿಕ ಈ ಘಟನೆ ನಡೆದಿದೆ. ಸತತವಾಗಿ ನಡೆಯುತ್ತಿರುವ ಇಂತಹ ಘಟನೆಗಳು ಮ್ಯಾನ್‌ಹೋಲ್ ಮತ್ತು ಒಳಚರಂಡಿ ಸ್ವಚ್ಛತಾ ಕಾರ್ಯದಲ್ಲಿ ಸುರಕ್ಷತಾ ನಿಯಮಗಳ ಪಾಲನೆ ಕುರಿತು ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಎತ್ತಿವೆ.

ಸುಪ್ರೀಂ ಕೋರ್ಟ್ ಹಾಗೂ ಭಾರತೀಯ ಕಾನೂನಿನ ಪ್ರಕಾರ ಮ್ಯಾನ್‌ಹೋಲ್‌ಗಳನ್ನು ಮನುಷ್ಯರಿಂದ ಸ್ವಚ್ಛಗೊಳಿಸುವುದನ್ನು (Manual Scavenging) ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕಠಿಣ ನಿಯಮವಿದ್ದರೂ, ಬಿಎಂಸಿ ಅಥವಾ ಸ್ಥಳೀಯ ಆಡಳಿತಕ್ಕೆ ಮಾಹಿತಿ ನೀಡದೆ ಕಾರ್ಮಿಕರನ್ನು ನೇರವಾಗಿ ಚರಂಡಿಗೆ ಇಳಿಸುವುದು ಅಪರಾಧವಾಗಿದೆ. ಈ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಸಿಇಸಿ ಗ್ಯಾನೇಶ್‌ ಕುಮಾರ್‌ ಮನೆ ಮುಂದೆ ಕಾಂಗ್ರೆಸ್‌ ಪ್ರತಿಭಟನೆ; ‘ಗದ್ದಾರ್‌ ಗ್ಯಾನೇಶ್‌’ ಎಂದು ಗೋಡೆಗೆ ಬಣ್ಣ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರ ಆಗ್ರಾದ ವಿಜಯನಗರದಲ್ಲಿರುವ...

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...