ಮುಂಬೈ | ಬಿರುಗಾಳಿ, ಮಳೆಯಿಂದ ಅಸ್ತವ್ಯಸ್ತಗೊಂಡ ಜನಜೀವನ; 8 ಮಂದಿ ಮೃತ್ಯು; ಹಲವರಿಗೆ ಗಾಯ

Date:

ದೇಶದ ವಾಣಿಜ್ಯ ನಗರಿ ಮುಂಬೈಯಲ್ಲಿ ಅಬ್ಬರಿಸುತ್ತಿರುವ ಬಿರುಗಾಳಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಕಬ್ಬಿಣದ ಹೋರ್ಡಿಂಗ್‌ವೊಂದು ಪೆಟ್ರೋಲ್ ಪಂಪ್ ಮೇಲೆ ಕುಸಿದು ಬಿದ್ದ ಪರಿಣಾಮ ಈವರೆಗೆ ಎಂಟು ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

- Advertisement -

ಭಾರತೀಯ ಹವಾಮಾನ ಇಲಾಖೆ ಈ ಹಿಂದೆ ಮೇ 13ರಂದು ನಗರದ ಕೆಲವು ಭಾಗಗಳಿಗೆ ಯೆಲ್ಲೊ ಅಲರ್ಟ್​ ಎಚ್ಚರಿಕೆ ನೀಡಿತ್ತು. ವಿಶೇಷವಾಗಿ ಥಾಣೆ ಮತ್ತು ರಾಯಗಡ್ ಜಿಲ್ಲೆಗಳಲ್ಲಿ ಭಾರಿ ಮಳೆ, ಗುಡುಗು ಮತ್ತು ಶುಷ್ಕ, ವೇಗದ ಗಾಳಿಯ ಎಚ್ಚರಿಕೆ ನೀಡಿತ್ತು. ವಿವಿಧ ಭಾಗಗಳಲ್ಲಿ ನಡೆದ ಕೆಲವು ದುರಂತ ಘಟನೆಗಳಿಗೆ ಸಂಬಂಧಿಸಿ ಎನ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ನಡೆಸುತ್ತಿದೆ. ಧೂಳು ಗಾಳಿಗೆ ಅನೇಕ ಕಡೆ ಅನಾಹುತಗಳು ಸಂಭವಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

ಕಬ್ಬಿಣದ ಹೋರ್ಡಿಂಗ್‌ವೊಂದು ಪೆಟ್ರೋಲ್ ಪಂಪ್ ಮೇಲೆ ಕುಸಿದು ಬಿದ್ದ ಘಟನೆ ಘಾಟ್ಕೋಪರ್ ಪ್ರದೇಶದಲ್ಲಿ ಸೋಮವಾರ ನಡೆದಿದೆ. ಪಾಂತ್ನಾಗರ್‌ನ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಪೊಲೀಸ್ ಗ್ರೌಂಡ್ ಪೆಟ್ರೋಲ್ ಪಂಪ್‌ನಲ್ಲಿ ಈ ಘಟನೆ ನಡೆದಿದೆ. ಹೋರ್ಡಿಂಗ್ ಬಿದ್ದ ಕಾರಣ ಪೂಜಾ ಜಂಕ್ಷನ್ (ವಡಾಲಾ) ನಾರ್ತ್ ಬೌಂಡ್ ಮತ್ತು ಫ್ರೀವೇ ಟನಲ್ ಟ್ರಾಂಬೆ ಸೌತ್ ನಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಮುಂಬೈ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯ ಬಗ್ಗೆ ಮಾಹಿತಿ ನೀಡಿರುವ ಬಿಎಂಸಿ ಕಮಿಷನರ್ ಭೂಷಣ್ ಗಗ್ರಾನಿ, “ಘಾಟ್ಕೋಪರ್ ಹೋರ್ಡಿಂಗ್ ಕುಸಿತ ಘಟನೆಯಲ್ಲಿ ಇನ್ನೂ 20-30 ಜನರು ಸಿಲುಕಿರುವ ಶಂಕೆ ಇದೆ. ಘಟನೆಯಲ್ಲಿ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ತೆಂಗಿನ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೇಘವಾಡಿ ನಾಕಾದಲ್ಲಿ ನಡೆದಿದೆ. ಕೂಡಲೇ ಸ್ಥಳೀಯರು ಆಟೋ ಚಾಲಕ ಹಯಾತ್ ಖಾನ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತನ ಪರಿಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ದಾದರ್, ಕುರ್ಲಾ, ಮಾಹಿಮ್, ಘಾಟ್‌ಕೋಪರ್, ಮುಲುಂಡ್ ಮತ್ತು ವಿಖ್ರೋಲಿ ಉಪನಗರಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು, ದಕ್ಷಿಣ ಮುಂಬೈನ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ.

ಥಾಣೆ, ಅಂಬರ್ ನಾಥ್, ಬದ್ಲಾಪುರ್, ಕಲ್ಯಾಣ್ ಮತ್ತು ಉಲ್ಲಾಸ್‌ನಗರದಲ್ಲಿಯೂ ಸಹ ಬಿರುಸಿನ ಗಾಳಿಯೊಂದಿಗೆ ಸಾಧಾರಣ ಮಳೆಯಾಗಿದೆ. ಮುಂಬೈನ ಅಲಲ್ಲಿ ಮುಂದಿನ 3-4 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿರುಗಾಳಿ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ15 ವಿಮಾನಗಳ ಮಾರ್ಗವನ್ನು ಬದಲಿಸಲಾಯಿತು. ಸಂಜೆ 5-30 ರಿಂದ ಮತ್ತೆ ವಿಮಾನ ಹಾರಾಟ ಆರಂಭವಾಗಿದೆ ಎಂದು ವರದಿಯಾಗಿದೆ.

ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 66 ನಿಮಿಷಗಳ ಕಾಲ ವಿಮಾನ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು ಎಂದು ವಿಮಾನ ನಿಲ್ದಾಣ ನಿರ್ವಾಹಕರು ಮಾಹಿತಿ ನೀಡಿದ್ದಾರೆ.

ಭಾರೀ ಮಳೆ, ಗಾಳಿಗೆ ತಂತಿಯ ಮೇಲೆ ಬ್ಯಾನರ್ ಬಿದ್ದ ನಂತರ ಆರೆ ಮತ್ತು ಅಂಧೇರಿ ಪೂರ್ವ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೆಟ್ರೋ ರೈಲಿನ ವಕ್ತಾರರು ತಿಳಿಸಿದ್ದಾರೆ. ಥಾಣೆ ಜಿಲ್ಲೆಯ ಕಲ್ವಾ ಮತ್ತು ಇತರ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತದ ವರದಿಯಾಗಿದೆ. ಇದಲ್ಲದೇ ಕೆಲವೆಡೆ ಮರಗಳು ಉರುಳಿದ ಘಟನೆಯೂ ವರದಿಯಾಗಿದೆ.

 

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...