ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

Date:

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಕರು ಹಾಗೂ 400 ರಿಂದ 500 ವ್ಯಕ್ತಿಗಳ ವಿರುದ್ಧ ಮುಂಬೈನ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

- Advertisement -

ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಂಡ ಆರೋಪ ಹೊಂದಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅಕ್ಟೋಬರ್ 2 ರಂದು ಶಿವಾಜಿ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ಆದರೆ ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಆದರೆ ಈಗ ಸಿಜೆಪಿ ಈ ಪ್ರತಿಭಟನೆಗೆ ಯಾವುದೇ ಮುಂಚಿತ ಅನುಮತಿ ಪಡೆದಿರಲಿಲ್ಲ ಎಂದು ಪೊಲೀಸರು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಇದನ್ನೂ ಓದಿ: ದೆಹಲಿ ಸಿಜೆಪಿ ಪ್ರತಿಭಟನೆ ಬೆನ್ನಲ್ಲೇ ಹೋರಾಟಗಾರರ ವಿರುದ್ಧ ಮೂರು ಎಫ್‌ಐಆರ್ ದಾಖಲು

ಇನ್ನು “ಅಕ್ಟೋಬರ್ 2 ರಂದು ನಮ್ಮ ಪ್ರತಿಭಟನೆಗೆ ಮುಂಬೈ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ನಾಗರಿಕರ ಧ್ವನಿಯನ್ನು ಅಡಗಿಸಲು ಪೊಲೀಸರು ಇಂತಹ ತಂತ್ರಗಳನ್ನು ಬಳಸುವುದು ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ” ಎಂದು ಪೊಲೀಸರ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದ್ದರು.

ಹಾಗೆಯೇ “ಶಾಂತಿಯುತವಾಗಿ ಪ್ರತಿಭಟಿಸುವುದು ದೇಶದ ಪ್ರತಿಯೊಬ್ಬ ನಾಗರಿಕನ ಸಂವಿಧಾನಾತ್ಮಕ ಹಕ್ಕು” ಎಂದು ಹೇಳಿದ್ದ ಅವರು, ಅನುಮತಿ ಸಿಗದಿದ್ದರೂ ಆಯೋಜಿಸಲಾದ ‘ಜೈಲ್ ಭರೋ ಆಂದೋಲನ’ವನ್ನು ಮುಂದುವರಿಸುವುದಾಗಿ ಘೋಷಿಸಿದ್ದರು.

ಇದೀಗ ಅನುಮತಿ ರಹಿತವಾಗಿ ಗುಂಪುಗೂಡಿರುವುದು, ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿರುವುದು ಹಾಗೂ ಕಾನೂನು ಉಲ್ಲಂಘಿಸಿರುವ ಆರೋಪಗಳ ಅಡಿಯಲ್ಲಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೂಕ್ತ ಕಾಯ್ದೆಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ, ಪ್ರಮುಖ ವಕ್ತಾರ ಸೌರವ್ ದಾಸ್ ಹಾಗೂ ಕಾರ್ಯಕ್ರಮ ಸಂಘಟಕ ಅಜಿಂಕ್ಯ ಶಿಂದೆ ಸೇರಿದಂತೆ ಪ್ರಮುಖರ ಹೆಸರುಗಳನ್ನು ಪ್ರಕರಣದಲ್ಲಿ ಸೇರಿಸಲಾಗಿದ್ದು, ಇತರ 400-500 ಭಾಗವಹಿಸಿದವರ ವಿರುದ್ಧ ಪ್ರಕರಣ ಹೂಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...

ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...