ಮುಂಬೈ | ಸಿಜೆಪಿ ಪ್ರತಿಭಟನೆಗೆ ಬೆಂಬಲ; ಬಾಲಿವುಡ್ ನಟ ಇಮ್ರಾನ್ ಖಾನ್ ಸೇರಿ 400ಕ್ಕೂ ಹೆಚ್ಚು ಮಂದಿ ವಶಕ್ಕೆ

Date:

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮುಂಬೈನಲ್ಲಿ ನಡೆದ ಪ್ರತಿಭಟನೆಗಳಿಗೆ ಬೆಂಬಲ ಸೂಚಿಸಿದ ಕಾರಣಕ್ಕೆ ಬಾಲಿವುಡ್ ನಟ ಇಮ್ರಾನ್ ಖಾನ್ ಸೇರಿದಂತೆ 400ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನುಮತಿಯಿಲ್ಲದೆ ಗುಂಪು ಸೇರುವುದನ್ನು ತಡೆಯಲು ಆಗಸ್ಟ್ ಕ್ರಾಂತಿ ಮೈದಾನ ಸೇರಿದಂತೆ ನಗರದ ವಿವಿಧೆಡೆ ‌ಕ್ರಮ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

- Advertisement -

ದಿನದ ಆರಂಭದಲ್ಲಿ ಆಗಸ್ಟ್ ಕ್ರಾಂತಿ ಮೈದಾನದಿಂದಲೇ ಕಾರ್ಯಕರ್ತ ತುಷಾರ್ ಗಾಂಧಿ ನೇತೃತ್ವದ ‘ಹಮ್ ಭಾರತ್ ಕೆ ಲೋಗ್’ ಸಂಘಟನೆಯ ಸದಸ್ಯರು ಹಾಗೂ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೆಂಬಲಿಗರು ಸೇರಿದಂತೆ ಕನಿಷ್ಠ 200 ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿದ್ದ ಪ್ರತಿಭಟನೆಗೆ ಬೆಂಬಲ ಸೂಚಿಸಲು ಇವರು ಅನುಮತಿಯಿಲ್ಲದೆ ಸಭೆ ಸೇರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಶಕ್ಕೆ ಪಡೆದವರ ವಿರುದ್ಧ ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಇನ್ನೊಂದೆಡೆ, ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಆಘಾಡಿ (ವಿಬಿಎ) ಕಾರ್ಯಕರ್ತರು ದಕ್ಷಿಣ ಮುಂಬೈನ ಹುತಾತ್ಮ ಚೌಕ್ ಬಳಿ ಸಿಜೆಪಿ ಪ್ರತಿಭಟನೆಗೆ ಬೆಂಬಲ ಸೂಚಿಸಿ ನಡೆಸಿದ ಪ್ರತಿಭಟನೆಯ ವೇಳೆ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನಾಕಾರರಲ್ಲಿ ಒಬ್ಬರಾದ ರುಬೈದ್ ಭೋಜಾನಿ, ಪೊಲೀಸರು ಪ್ರತಿಭಟನಾಕಾರರನ್ನು ಅತ್ಯಂತ ಕಠಿಣವಾಗಿ ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. “ನಾವು ಪ್ರಧಾನಿಗೆ ಮತ ಹಾಕಿದ್ದೆವು. ಆದರೆ ಅವರು ನಮಗೆ ದ್ರೋಹ ಮಾಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಆಗ್ರಹ” ಎಂದು ಭೋಜಾನಿ ಹೇಳಿದ್ದಾರೆ.

ಮಹಾತ್ಮ ಗಾಂಧೀಜಿಯವರ ಮರಿ ಮೊಮ್ಮಗ ಹಾಗೂ ‘ಹಮ್ ಭಾರತ್ ಕೆ ಲೋಗ್’ ಸಂಘಟನೆಯ ಮುಖ್ಯಸ್ಥ ತುಷಾರ್ ಗಾಂಧಿ ಅವರನ್ನು ಬಾಂದ್ರಾದಿಂದ ವಶಕ್ಕೆ ಪಡೆದು ಡಿಎನ್ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ಈ ವಿಷಯ ತಿಳಿದು ಅನೇಕರು ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿದ್ದರು. ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಕೂಡ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು.

ಆಗಸ್ಟ್ ಕ್ರಾಂತಿ ಮೈದಾನದಲ್ಲಿ ಮಧ್ಯಾಹ್ನ 3.30ಕ್ಕೆ ನಡೆಸಲು ಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ತುಷಾರ್ ಗಾಂಧಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟರ್ ಹಂಚಿಕೊಂಡಿದ್ದರು. ಕಾರ್ಯಕರ್ತ ಫೀರೋಜ್ ಮಿಥಿಬೋರ್ವಾಲಾ ಅವರನ್ನು ಅವರ ನಿವಾಸದಿಂದ ವಶಕ್ಕೆ ಪಡೆದು ಎಂಐಡಿಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ 4,000ಕ್ಕೂ ಹೆಚ್ಚು ಮಂದಿ ಬಂಧನ: ಹೋರಾಟ ನಿಲ್ಲದು ಎಂದ ಕಾಕ್ರೋಚ್‌ ಪಡೆ

ಸಿಜೆಪಿ ಸದಸ್ಯರು ಪ್ರತಿಭಟನೆ ನಡೆಸುವುದನ್ನು ತಡೆಯಲು ದಾದರ್‌ನ ಶಿವಾಜಿ ಪಾರ್ಕ್‌ನಲ್ಲಿ ಮಹಿಳಾ ಪೊಲೀಸರನ್ನೂ ಒಳಗೊಂಡಂತೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ನಗರದ ಇತರ ಪ್ರಮುಖ ಸ್ಥಳಗಳಲ್ಲಿಯೂ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಬಾಂಬೆ ಹೈಕೋರ್ಟ್‌ನ ಆದೇಶದ ಪ್ರಕಾರ ಆಗಸ್ಟ್ ಕ್ರಾಂತಿ ಮೈದಾನವು ಅಧಿಕೃತ ಪ್ರತಿಭಟನಾ ಸ್ಥಳವಲ್ಲ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಸ್‌ಐಆರ್ ವೇಳೆ ಪಟ್ಟಿಯಲ್ಲಿ ತಿರುಚುವಿಕೆ ನಡೆದಿದೆ ಹಾಗೂ ಮತದಾರರ ನೋಂದಣಿಗೆ ಬಳಸುವ ಫಾರ್ಮ್ 6ಗೆ ಸಂಬಂಧಿಸಿದ ಬದಲಾವಣೆಗಳಾಗಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಸಿಜೆಪಿ ಕರೆ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು...