ಸಾಲ ಮರುಪಾವತಿಸಿದರೂ ಕಿರುಕುಳ: ಯುವತಿಯ ಮಾರ್ಫಿಂಗ್ ಮಾಡಿದ ನಗ್ನ ಫೋಟೋಗಳನ್ನು ಕುಟುಂಬಕ್ಕೆ ಕಳುಹಿಸಿದ ಕಿಡಿಗೇಡಿಗಳು

Date:

ಮುಂಬೈನಲ್ಲಿ 25 ವರ್ಷದ ಯುವತಿಯೊಬ್ಬರು ಅಪ್ಲಿಕೇಶನ್ ಒಂದರ ಮೂಲಕ ಸಾಲ ಪಡೆದಿದ್ದು, ಪಡೆದಿದ್ದಕ್ಕಿಂತ ಅಧಿಕ ಸಾಲ ಮರುಪಾವತಿ ಮಾಡಿದ ಬಳಿಕವೂ ಕಿರುಕುಳ ನೀಡಲಾಗಿದೆ. ಆಕೆಯ ಮಾರ್ಫಿಂಗ್ ಮಾಡಿದ ನಗ್ನ ಫೋಟೋಗಳನ್ನು ಆಕೆಯ ಸಂಬಂಧಿಕರು ಮತ್ತು ಸ್ನೇಹಿತರಿಗೆ ಕಿಡಿಗೇಡಿಗಳು ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಯುವತಿ ದೂರು ನೀಡಿದ್ದಾರೆ.

- Advertisement -

ಜೋಗೇಶ್ವರಿ ಪಶ್ಚಿಮದ ಕ್ರಾಂತಿ ನಗರ ಪ್ರದೇಶದ ಸಂತ್ರಸ್ತೆ ಇನ್‌ಸ್ಟಾಗ್ರಾಮ್‌ನಲ್ಲಿ ‘ಕ್ಯಾಶ್‌ ಲೋನ್’ ಎಂಬ ಮೊಬೈಲ್ ಅಪ್ಲಿಕೇಶನ್‌ನ ಜಾಹೀರಾತನ್ನು ನೋಡಿ ಜುಲೈ 20ರಂದು, ಅವರು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿದ್ದಾರೆ. ಔಪಚಾರಿಕತೆಯ ಭಾಗವಾಗಿ ತಮ್ಮ ಎಲ್ಲಾ ವೈಯಕ್ತಿಕ ಮಾಹಿತಿ ಮತ್ತು ಅವರ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಗೆ ಸಂಬಂಧಿಸಿದ ವಿವರಗಳನ್ನು ಹಂಚಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಚನ್ನಪಟ್ಟಣ | ಪತ್ನಿಯ ಮಾರ್ಫ್ ಮಾಡಿದ ಅಶ್ಲೀಲ ಚಿತ್ರ ಕಳುಹಿಸಿದ ಸಾಲ ವಸೂಲಾತಿ ಏಜೆಂಟ್; ಪತಿ ಆತ್ಮಹತ್ಯೆ

ಮಹಿಳೆ ಎರಡು ಸಾವಿರ ರೂಪಾಯಿ ಸಾಲಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಕೇವಲ 1,300 ರೂಪಾಯಿ ಮಾತ್ರ ಪಡೆದಿದ್ದಾರೆ. ಮರುಪಾವತಿ ಅವಧಿ ಆರು ದಿನಗಳು ಆಗಿತ್ತು. ಆದರೆ ಸಾಲದ ಅವಧಿ ಮುಗಿಯುವ ಮೊದಲೇ, ಸಾಲ ನೀಡಿದ ಸಂಸ್ಥೆಯ ಉದ್ಯೋಗಿ ಎಂದು ಹೇಳಿಕೊಂಡ ವ್ಯಕ್ತಿ ಯುವತಿಗೆ ಬೆದರಿಕೆ ಹಾಕಲು ಪ್ರಾರಂಭಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಕರೆ ಮಾಡಿದ ವ್ಯಕ್ತಿ, ತಕ್ಷಣ ಹಣವನ್ನು ಹಿಂತಿರುಗಿಸದಿದ್ದರೆ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಭಯದಿಂದ ಯುವತಿ ಅಪ್ಲಿಕೇಶನ್ ಮೂಲಕ ‘ಸಂದೇಶ್ ಕುಮಾರ್’ ಎಂಬ ವ್ಯಕ್ತಿಗೆ ಎರಡು ಬಾರಿ ಒಂದು ಸಾವಿ ರೂಪಾಯಿ ಕಳುಹಿಸಿದ್ದಾಳೆ. ಆದರೆ ಅದಾದ ಒಂದು ಗಂಟೆಯ ಬಳಿಕ ಯುವತಿಯ ಚಿಕ್ಕಮ್ಮ ಕರೆ ಮಾಡಿದ್ದು, ವಾಟ್ಸಾಪ್‌ನಲ್ಲಿ ಮಾರ್ಫ್ ಮಾಡಿದ ನಗ್ನ ಫೋಟೋಗಳು ಬಂದಿರುವುದಾಗಿ ತಿಳಿಸಿದ್ದಾರೆ.

ಕೆಲವೇ ನಿಮಿಷಗಳಲ್ಲಿ ಅದೇ ಫೋಟೋ ಹಲವು ಸ್ನೇಹಿತರಿಗೆ ಬಂದಿದೆ. ಏನು ಮಾಡಬೇಕೆಂದು ತಿಳಿಯದೆ ಯುವತಿ ತನ್ನ ತಂದೆಗೆ ತಿಳಿಸಿ, ಬಳಿಕ ಪೊಲೀಸರಿಗೆ ದೂರು ನೀಡಿರುವುದಾಗಿ ವರದಿಯಾಗಿದೆ. ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....