ಮುಂಬೈ ರೈಲುಗಳಲ್ಲಿ ತಾಂತ್ರಿಕ ತೊಂದರೆ; ನಡೆದು ಕಚೇರಿಗೆ ತೆರಳಿದ ಪ್ರಯಾಣಿಕರು

Date:

ಮುಂಬೈ ಸ್ಥಳೀಯ ರೈಲು ಸೇವೆಯಲ್ಲಿ ತಾಂತ್ರಿಕ ತೊಂದರೆಯುಂಟಾದ ಕಾರಣ ಹಲವು ರೈಲುಗಳ ಸಂಚಾರಕ್ಕೆ ಅಡ್ಡಿಯುಂಟಾಯಿತು. ಮಾತುಂಗ ಹಾಗೂ ಸಿಯಾನ್ ನಿಲ್ದಾಣಗಳ ಮಾರ್ಗದಲ್ಲಿ 15 ನಿಮಿಷಗಳ ಕಾಲ ತಾಂತ್ರಿಕ ಸಮಸ್ಯೆಯುಂಟಾಗಿದೆ.

- Advertisement -

ತಾಂತ್ರಿಕ ಸಮಸ್ಯೆಯುಂಟಾಗಿ ಬೇರೆ ಮಾರ್ಗಗಳಲ್ಲಿ ಆಗಮಿಸಿದ ಕಾರಣ ಸುಮಾರು 35 ನಿಮಿಷಗಳ ಕಾಲ ಹಲವು ಸ್ಥಳೀಯ ರೈಲುಗಳ ಸಂಚಾರಕ್ಕೆ ತೊಂದರೆಯಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ರೈಲುಗಳು ಸರಿಯಾದ ಸಮಯಕ್ಕೆ ಸಿಗದ ಕಾರಣ ನೂರಾರು ಪ್ರಯಾಣಿಕರು ನಡೆದುಕೊಂಡು ತಮ್ಮ ಕಚೇರಿಗಳಿಗೆ ತೆರಳಿದರು. ಪ್ರಯಾಣಿಕರು ಕಚೇರಿಗಳ ಕಡೆ ತೆರಳಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಈ ಸುದ್ದಿ ಓದಿದ್ದೀರಾ? ಪತ್ನಿ ಪಾಕಿಸ್ತಾನಿ, ದಾವೂದ್ ಬಂಗಲೆಯಲ್ಲಿ ವಾಸ ಎಂಬ ಆರೋಪಕ್ಕೆ ಧ್ರುವ್ ರಾಠಿ ತಕ್ಕ ಉತ್ತರ

“ಮಾತುಂಗ ಹಾಗೂ ಸಿಯಾನ್ ನಿಲ್ದಾಣಗಳ ನಡುವೆ ತಾಂತ್ರಿಕ ತೊಂದರೆಯಿಂದ 15 ನಿಮಿಷಗಳ ಕಾಲ ತೊಂದರೆಯುಂಟಾಯಿತು. ಇದರಿಂದ ಸುಮಾರು 7.45 ರಿಂದ 8.20ರವರೆಗೂ ಪ್ರಯಾಣಿಕರು ರೈಲು ಲಭ್ಯತೆಯಲ್ಲಿ ತೊಂದರೆಯುಂಟಾಯಿತು. ಕೆಲವು ರೈಲುಗಳು ಬೇರೆ ಮಾರ್ಗಗಳಿಂದ ಬಂದ ಕಾರಣ ಕೆಲವು ನಿಮಿಷಗಳವರೆಗೆ ತಡೆಯುಂಟಾಯಿತು” ಎಂದು ಕೇಂದ್ರ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ.

ಮಾತುಂಗ ಹಾಗೂ ಸಿಯಾನ್ ನಿಲ್ದಾಣಗಳ ನಡುವೆಯಿರುವ ಯುಪಿ ಪಾಸ್ಟ್ ಮಾರ್ಗದ ರೈಲ್ವೆ ಹಳಿಯ ಮೇಲೆ ಬಿದರಿನಲ್ಲಿ ನಿರ್ಮಿಸಲಾಗಿದ್ದ ಆಕೃತಿ ಬಿದ್ದ ಕಾರಣ ಈ ಘಟನೆ ಸಂಭವಿಸಿದೆ. ಘಟನೆ ನಡೆದು ರೈಲುಗಳ ಸಂಚಾರಕ್ಕೆ ಅಡ್ಡಿಯುಂಟಾದ ನಂತರ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ಪರಿಹರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ ಸ್ಥಳೀಯ ರೈಲುಗಳಲ್ಲಿ ನಿತ್ಯ 70 ಲಕ್ಷಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಾರೆ. ಕೇಂದ್ರ ರೈಲ್ವೆ ಹಾಗೂ ಪಶ್ಚಿಮ ರೈಲ್ವೆ ಈ ಸೌಲಭ್ಯವನ್ನು ದೊರಕಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು...