ದಲಿತ ಯುವಕನ ಹತ್ಯೆ: ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ ಪೊಲೀಸರು

Date:

ದಲಿತ ಯುವಕನನ್ನು ಗುಂಪೊಂದು ಬರ್ಬರವಾಗಿ ಕೊಲೆಗೈದಿರುವ ಘಟನೆ ತಮಿಳುನಾಡಿನ ಮಾರ್ಸಿಂಗ್‌ಪೇಟೆಯಲ್ಲಿ ನಡೆದಿದೆ. ತಮ್ಮ ಮಗನನ್ನು ಕಳೆದುಕೊಂಡ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಶಂಕಿತ ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಮಾರ್ಸಿಂಗ್‌ಪೇಟೆಯ ಪೊಲೀಸ್ ವಸತಿ ಗೃಹದಲ್ಲಿ ತಮರೈಸೆಲ್ವನ್‌ (26) ಅವರನ್ನು ಗುಂಪೊಂದು ಥಳಿಸಿ ಕೊಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಸೋಮವಾರ ರಾತ್ರಿ ಘಟನೆ ನಡೆದಿದೆ. ಮಂಗಳವಾರ ತಮರೈಸೆಲ್ವನ್ ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಿಂದಾಗಿ ಪ್ರಕರಣವು ರಾಜ್ಯದ ಗಮನ ಸೆಳೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಎಚ್ಚೆತ್ತುಕೊಂಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತಿರುಚಿ ಪಶ್ಚಿಮ ತಹಶೀಲ್ದಾರ್ ಎಸ್ ಪ್ರಕಾಶ್ ಅವರು ಪ್ರತಿಭಟನಾ ಸ್ಥಳಕ್ಕೆ ಬಂದಿದ್ದು, ಮೃತ ಯುವಕನ ತಾಯಿ ಬಿ ಪಾರ್ವತಿ ಅವರಿಗೆ ಪರಿಹಾರವಾಗಿ 6 ಲಕ್ಷ ರೂ.ಗಳ ಚೆಕ್ಅನ್ನು ನೀಡಿದ್ದಾರೆ. ಯುವಕನ ಮೃತದೇಹವನ್ನು ಮರಣೊತ್ತರ ಪರೀಕ್ಷೆಗೆ ಒಳಪಡಿಸಿದ ನಂತರ, ವೃತದೇಹವನ್ನು ಪಡೆದ ಕುಟುಂಬವು ಅಂತ್ಯಕ್ರಿಯೆ ನೆರವೇರಿಸಿದೆ.

ಪಾಲಕ್ಕರೈ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಆರ್ ಸತೀಶ್‌ಕುಮಾರ್‌ ಎಂಬಾತ ಶ್ರೀರಂಗಂನ ಮೇಲೂರಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಆತನ ಮೊಣಕಾಲಿಗೆ ಗುಂಡು ಹಾರಿಸಿ, ಆತನನ್ನು ಹಿಡಿದಿದ್ದಾರೆ ಎಂದು ವರದಿಯಾಗಿದೆ.

ಆರೋಪಿಯನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಗಾಯಗೊಂಡಿದ್ದ ಆರೋಪಿ ಸತೀಶ್‌ಕುಮಾರ್ ಮತ್ತು ಪೊಲೀಸ್‌ ಸಿಬ್ಬಂದಿ ಮಾಥವರಾಜ್ (32), ಜಾರ್ಜ್ ವಿಲಿಯಂ (37) ಅವರನ್ನು ಶ್ರೀರಂಗಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸತೀಶ್‌ಕುಮಾರ್‌ನನ್ನು ಪೊಲೀಸರು ವಿಚಾರಣೆ ಒಳಪಡಿಸಿದ್ದು, ಇತರ ಆರೋಪಿಗಳ ಮಾಹಿತಿ ಪಡೆದಿದ್ದಾರೆ. ಶ್ರೀರಂಗಂನ ಯಾತ್ರಿ ನಿವಾಸದ ಬಳಿ ಅಡಗಿಕೊಂಡಿದ್ದ ಆತನ ಸಹಚರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನಂದಕುಮಾರ್, ಪ್ರಭಾಕರನ್ ಹಾಗೂ ಗಣೇಶನ್ ಎಂದು ಹೆಸರಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶದಲ್ಲಿ ಜಲಪ್ರಳಯ: ಪ್ರವಾಹಕ್ಕೆ 56 ಮಂದಿ ಬಲಿ, ಸಾವಿರಕ್ಕೂ ಹೆಚ್ಚು ಮನೆಗಳು ಧ್ವಂಸ

ಉತ್ತರ ಪ್ರದೇಶದಲ್ಲಿ ಕಳೆದ 60 ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...