ಕೊಲೆಯಾಗಿದ್ದ ವ್ಯಕ್ತಿ 3 ವರ್ಷದ ಬಳಿಕ ಜೀವಂತವಾಗಿ ಪತ್ತೆ; ಆರೋಪಿ ಬಿಡುಗಡೆ

Date:

ಮೂರು ವರ್ಷಗಳ ಹಿಂದೆ ಕೊಲೆಯಾಗಿದ್ದಾರೆ ಎಂದು ನಂಬಲಾಗಿದ್ದ ವ್ಯಕ್ತಿ ಇದೀಗ ಬಿಹಾರದಲ್ಲಿ ಪತ್ತೆಯಾಗಿದ್ದಾರೆ. ಆತನ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಉತ್ತರ ಪ್ರದೇಶದ ವ್ಯಕ್ತಿಯನ್ನು ಇದೀಗ ಬಿಡುಗಡೆ ಮಾಡಲಾಗಿದೆ.

- Advertisement -

2022ರಲ್ಲಿ, ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲಾ ವ್ಯಾಪ್ತಿಯಲ್ಲಿ ರೈಲಿನಲ್ಲಿ ಪ್ರಯಾಣಿಸುವಾಗ ಮೊಬೈಲ್‌ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿತ್ತು. ಗಲಾಟೆಯಲ್ಲಿ ಬಿಹಾರದ ನಿವಾಸಿ ಎತಾಬ್ ಎಂಬವರನ್ನು ಅಯೋಧ್ಯೆಯ ಖೇಮಸರೈ ಗ್ರಾಮದ ನರೇಂದ್ರ ದುಬೆ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಪ್ರಕರಣದಲ್ಲಿ ನರೇಂದ್ರ ದುಬೆ ಅವರನ್ನು ಘಟನೆ ಬೆನ್ನಲ್ಲೇ ಬಂಧಿಸಲಾಗಿತ್ತು. ಆತನಿಗೆ ಕೊಲೆ ಆರೋಪದ ಮೇಲೆ ಜೈಲು ಶಿಕ್ಷೆಯನ್ನೂ ವಿಧಿಸಿ, ಜೈಲಿನಲ್ಲಿ ಇರಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆದರೆ, ಹತ್ಯೆಯಾಗಿದ್ದಾನೆ ಎಂದು ನಂಬಲಾಗಿದ್ದ ಎತಾಬ್‌ ಅವರು ಇದೀಗ ಪತ್ತೆಯಾಗಿದ್ದಾರೆ. ಇತ್ತೀಚೆಗೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋವೊಂದರಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈ ಬೆನ್ನಲ್ಲೇ, ಶಿಕ್ಷೆಗೆ ಗುರಿಯಾಗಿದ್ದ ದುಬೆ ಅವರ ಕುಟುಂಬವು ಶಹಜಹಾನ್‌ಪುರ ನ್ಯಾಯಾಲಯದ ಮೊರೆ ಹೋಗಿತ್ತು. ಆ ವ್ಯಕ್ತಿಯನ್ನು ನ್ಯಾಯಾಲಯಕ್ಕೆ ಕರೆಸಿದ ಕೋರ್ಟ್‌, ಕೊಲೆಯಾಗಿದ್ದಾನೆಂದು ನಂಬಲಾಗಿದ್ದ ವ್ಯಕ್ತಿಈತನೇ ಎಂಬುದನ್ನು ಖಾತ್ರಿ ಪಡಿಸಿಕೊಂಡಿದೆ. ಜೈಲು ಶಿಕ್ಷೆಗೆ ಗುರಿಯಾಗಿದ್ದ ನರೇಂದ್ರ ದುಬೆ ಅವರನ್ನು ಬಿಡುಗಡೆ ಮಾಡಿದೆ.

ಪ್ರಕರಣದ ವಿವರ:

2022ರ ಡಿಸೆಂಬರ್ 16ರಂದು ದೆಹಲಿಯಿಂದ ಅಯೋಧ್ಯೆಗೆ ಯಾಣಿಸುತ್ತಿದ್ದ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಗಲಾಟೆ ನಡೆದಿತ್ತು. ಶಹಜಹಾನ್‌ಪುರ ಜಿಲ್ಲೆಯ ತಿಲ್ಹಾರ್ ರೈಲು ನಿಲ್ದಾಣದ ಬಳಿ ಚಲಿಸುತ್ತಿದ್ದ ರೈಲಿನಿಂದ ಓರ್ವ ವ್ಯಕ್ತಿ ಮತ್ತೊಬ್ಬ ವ್ಯಕ್ತಿಯನ್ನು ಹೊರಗೆ ತಳ್ಳಿದ್ದಾನೆಂದು ಬರೇಲಿಯಲ್ಲಿ ನಿಯೋಜನೆಗೊಂಡಿದ್ದ ಜಿಆರ್‌ಪಿ ಕಾನ್‌ಸ್ಟೆಬಲ್ ಸತ್ಯವೀರ್ ಸಿಂಗ್ ಅವರಿಗೆ ಮಾಹಿತಿ ದೊರೆತಿತ್ತು.

ಘಟನೆ ಬಗ್ಗೆ ಅಯೋಧ್ಯೆ ನಿವಾಸಿಯಾದ ಅಲೋಕ್ ಎಂಬುವವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾತ್ರವಲ್ಲದೆ, ಗಲಾಟೆಯ ವಿಡಿಯೋವನ್ನೂ ಒದಗಿಸಿದ್ದರು. ಬಳಿಕ, ಮರುದಿನವೇ ಆರೋಪಿ ನರೇಂದ್ರ ದುಬೆ ಅವರನ್ನು ಪೊಲೀಸರು ಬಂಧಿಸಿದ್ದರು. ಜೊತೆಗೆ, ರೈಲ್ವೇ ಹಳಿಗಳ ಬಳಿ ಮೃತದೇಹವೊಂದನ್ನು ತಿಲ್ಹಾರ್ ಪೊಲೀಸರು ವಶಕ್ಕೆ ಪಡೆದಿದ್ದರು.

ಆ ಮೃತದೇಹವು ಎತಾಬ್ ಅವರದ್ದೇ ಎಂದು ಎತಾಬ್ ಅವರ ತಂದೆ ಮತ್ತು ಸಂಬಂಧಿಗಳು ಗುರುತಿಸಿದ್ದರು. ಎತಾಬ್ ಅವರ ಸಂಬಂಧಿಗಳ ದೃಢೀಕರಣ ಮತ್ತು ಇಬ್ಬರು ಸಹ ಪ್ರಯಾಣಿಕರ ಹೇಳಿಕೆಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸಿ ದುಬೆ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಇದೀಗ, ಎತಾಬ್ ಜೀವಂತವಾಗಿ ಪತ್ತೆಯಾಗಿದ್ದು, ಆತನ ಕೊಲೆ ಪ್ರಕರಣದಲ್ಲಿ ಜೈಲು ಸೇರಿಸಿದ್ದ ನರೇಂದ್ರ ದುಬೆಯನ್ನು ಬಿಡುಗಡೆ ಮಾಡಲಾಗಿದೆ.

ಆದಾಗ್ಯೂ, ಎತಾಬ್ ಜೀವಂತವಾಗಿ ಪತ್ತೆಯಾಗಿದ್ದಾರೆ. ಆದರೆ, ಅಂದು ರೈಲ್ವೇ ಹಳಿಗಳ ಬಳಿ ಪತ್ತೆಯಾದ ಮೃತದೇಹ ಯಾರದ್ದು ಎಂಬ ಪ್ರಶ್ನೆ ಇದೀಗ ಮುನ್ನೆಲೆಗೆ ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...