ಮುರ್ಶಿದಾಬಾದ್ ಗಲಭೆ | ಸುಳ್ಳು ಹರಡುತ್ತಿರುವ ಗೋದಿ ಮೀಡಿಯಾಗಳು: ಮಮತಾ ಬ್ಯಾನರ್ಜಿ

Date:

ಮುರ್ಶಿದಾಬಾದ್‌ ಗಲಭೆಯು ಪೂರ್ವಯೋಜಿತ, ಈ ಬಗ್ಗೆ ಗೋದಿ ಮೀಡಿಯಾಗಳು ಸುಳ್ಳು ಮಾಹಿತಿಯನ್ನು ಹರಡುತ್ತಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಮಾಮ್‌ಗಳೊಂದಿಗಿನ ತನ್ನ ಸಭೆಯಲ್ಲಿ ಹೇಳಿದ್ದಾರೆ. ಜೊತೆಗೆ ಈ ಸಂದರ್ಭದಲ್ಲೇ ಈ ಗಲಭೆಯಲ್ಲಿ ಟಿಎಂಸಿ ಕೈವಾಡವಿದೆ ಎಂಬ ಬಿಜೆಪಿ ಆರೋಪಕ್ಕೂ ಪ್ರತಿಕ್ರಿಯಿಸಿದ್ದಾರೆ.

- Advertisement -

“ಮುರ್ಶಿದಾಬಾದ್ ಗಲಭೆಯು ಪೂರ್ವಯೋಜಿತವಾಗಿದೆ. ವಿಪಕ್ಷಗಳು ಹೇಳುವಂತೆ ಈ ವಕ್ಫ್ ಗಲಭೆಯಲ್ಲಿ ಟಿಎಂಸಿ ಕೈವಾಡವಿದ್ದಿದ್ದರೆ ನಮ್ಮ ನಾಯಕರ ಮನೆಗಳನ್ನು ಧ್ವಂಸ ಮಾಡುತ್ತಿರಲಿಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಹಾಗೆಯೇ ವಕ್ಫ್ ವಿರುದ್ಧ ಟಿಎಂಸಿ ನಿಲುವು ಸ್ಪಷ್ಟವಾಗಿದೆ. ವಕ್ಫ್ ವಿರುದ್ಧ ನಮ್ಮ ಹೋರಾಟ ಮುಂದುವರೆಯುತ್ತದೆ. ನಾವು ಈ ವಿವಾದಾತ್ಮಕ ಕಾನೂನನ್ನು ರಾಜ್ಯದಲ್ಲಿ ಜಾರಿ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ವಕ್ಫ್ ಮಸೂದೆ | ಮುರ್ಶಿದಾಬಾದ್‌ ಕೋಮುಗಲಭೆ: ಊರು ಬಿಡುವುದೊಂದೇ ಜನರಿಗೆ ಕಂಡ ದಾರಿ

“ಈ ಗಲಭೆಯಲ್ಲಿ ಬಾಂಗ್ಲಾದೇಶ ಭಾಗಿಯಾಗಿದೆ ಎಂದು ಗೃಹ ಸಚಿವಾಲಯ ಹೇಳಿರುವುದಾಗಿ ಉಲ್ಲೇಖಿಸಿದ ಸುದ್ದಿಯೊಂದನ್ನು ನಾನು ನೋಡಿದೆ. ಇದು ನಿಜವಾಗಿದ್ದರೆ, ಕೇಂದ್ರ ಸರ್ಕಾರ ಇದಕ್ಕೆ ಕಾರಣವಾಗಿದೆ. ಗಡಿಯನ್ನು ಬಿಎಸ್‌ಎಫ್ ನೋಡಿಕೊಳ್ಳುತ್ತದೆ, ರಾಜ್ಯ ಸರ್ಕಾರವಲ್ಲ. ಬಿಜೆಪಿಯ ಜನರು ಹೊರಗಿನಿಂದ ಬಂದು, ಗಲಾಟೆ ಮಾಡಿ ಓಡಿಹೋಗಲು ನೀವು ಯಾಕೆ ಅವಕಾಶ ಮಾಡಿಕೊಟ್ಟಿದ್ದೀರಿ” ಎಂದು ಪ್ರಶ್ನಿಸಿದರು.

ಇನ್ನು ಕೇಂದ್ರ ಸರ್ಕಾರ ಮತ್ತು ಗೋದಿ ಮೀಡಿಯಾಗಳನ್ನು ಗುರಿಯಾಗಿಸಿಕೊಂಡ ಮಮತಾ ಬ್ಯಾನರ್ಜಿ, “ಗೋದಿ ಮೀಡಿಯಾಗಳು ತಪ್ಪು ಮಾಹಿತಿಯನ್ನು ಹರಡುತ್ತಿದೆ. ಬಂಗಾಳವನ್ನು ಅನ್ಯಾಯವಾಗಿ ಗುರಿಯಾಗಿಸಿಕೊಂಡಿದೆ” ಎಂದು ಆರೋಪಿಸಿದರು.

“ಕೇಂದ್ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿದೆ. ಆದರೆ ಕೆಲವು ಗೋದಿ ಮೀಡಿಯಾಗಳು ಬಂಗಾಳದ ವಿರುದ್ಧ ಮತ್ತು ನನ್ನ ವಿರುದ್ಧ ಮಾತ್ರ ಮಾತನಾಡುತ್ತಿದೆ. ತಪ್ಪು ಮಾಹಿತಿ ಹರಡುವ ಬದಲು ನೇರವಾಗಿ ನನ್ನೊಂದಿಗೆ ಮಾತನಾಡಿ” ಎಂದು ಸವಾಲು ಹಾಕಿದರು.

“ಬಿಜೆಪಿ ಬೆಂಬಲಿತ ಕೆಲವು ಮಾಧ್ಯಮ ಸಂಸ್ಥೆಗಳು ರಾಜ್ಯವನ್ನು ಕೆಣಕಲು ನಕಲಿ ವಿಡಿಯೋಗಳನ್ನು ಪ್ರಸಾರ ಮಾಡಿವೆ. ನಾವು ಅವರನ್ನು ಬಂಧಿಸಿದ್ದೇವೆ. ಕೆಲವು ಕರ್ನಾಟಕದ್ದು, ಕೆಲವು ಉತ್ತರ ಪ್ರದೇಶ, ಬಿಹಾರ ಅಥವಾ ರಾಜಸ್ಥಾನದ ವಿಡಿಯೋಗಳಾಗಿವೆ. ಬಂಗಾಳದ ಹೆಸರು ಹಾಳು ಮಾಡಲು ಈ ರೀತಿ ದುಷ್ಕೃತ್ಯ ಎಸಗಲಾಗಿದೆ” ಎಂದು ಹೇಳಿದರು.

ಇನ್ನೊಂದೆಡೆ ಮುರ್ಶಿದಾಬಾದ್‌ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಸರ್ಕಾರವು ಹಿಂದೂ ಸಮುದಾಯದ ಮೇಲೆ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದೆ. ಈ ಸಂಬಂಧ ಹಲವು ನಕಲಿ ವಿಡಿಯೋಗಳನ್ನು ಹರಿಬಿಟ್ಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...