ಉತ್ತರ ಪ್ರದೇಶ | ಹಿಜಾಬ್ ಎಳೆದು ಬಿಚ್ಚಿ, ಮುಸ್ಲಿಂ ಯುವತಿ, ಹಿಂದೂ ಯುವಕನಿಗೆ ಥಳಿಸಿದ ಗುಂಪು

Date:

ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿ ಜೊತೆಗಿರುವುದನ್ನು ನೋಡಿ ಗುಂಪೊಂದು ಯುವತಿಯ ಹಿಜಾಬ್ ಎಳೆದು ಬಿಚ್ಚಿ, ಇಬ್ಬರಿಗೂ ಥಳಿಸಿದ ಘಟನೆ ಉತ್ತರ ಪ್ರದೇಶದ ಮುಜಫರ್ ನಗರ ಜಿಲ್ಲೆಯಲ್ಲಿ ನಡೆದಿದೆ. ಅನೈತಿಕ ಪೊಲೀಸ್‌ಗಿರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

- Advertisement -

ಯುವತಿಯ ತಾಯಿ ಮತ್ತು ಹಲ್ಲೆಗೊಳಗಾದ ಯುವಕ ಸಚಿನ್ ಇಬ್ಬರೂ ಖಾಸಗಿ ಬ್ಯಾಂಕ್‌ನಲ್ಲಿ ಕಲೆಕ್ಷನ್ ಏಜೆಂಟರಾಗಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಜನರಿಂದ ಸಾಲದ ಕಂತು ಸಂಗ್ರಹಿಸಲು ಜೊತೆಯಾಗಿ ಹೋಗುತ್ತಿದ್ದರು. ಸಾಲ ವಸೂಲಿಗೆ ತನ್ನ ಸಹೋದ್ಯೋಗಿಯೊಂದಿಗೆ ತನ್ನ ಮಗಳನ್ನು ತಾಯಿ ಕಳುಹಿಸಿದ್ದರು. ಈ ವೇಳೆ ಗುಂಪು ಹಲ್ಲೆ ಮಾಡಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇದನ್ನು ಓದಿದ್ದೀರಾ? ಯಾದಗಿರಿ | ಅನೈತಿಕ ಪೊಲೀಸ್‌ಗಿರಿ; ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದೂ ಯುವಕರ ಗುಂಪು

ಇಬ್ಬರೂ ಕಂತಿನ ಮೊತ್ತ ಸಂಗ್ರಹಿಸಿದ ಬಳಿಕ ಮೋಟಾರ್‌ಬೈಕ್‌ನಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಮುಸ್ಲಿಂ ಪ್ರಾಬಲ್ಯದ ಖಲಾಪರ್ ಪ್ರದೇಶದ ದಾರ್ಜಿ ಗಾಲಿಯಲ್ಲಿ ಗುಂಪೊಂದು ಅವರನ್ನು ತಡೆದಿದೆ. ಯುವಕ ಹಿಂದೂ ಎಂದು ಖಚಿತವಾದ ಬಳಿಕ ಯುವತಿಯ ‘ಹಿಜಾಬ್’ ಎಳೆದು ಬಿಚ್ಚಿ, ಆಕೆಗೆ ಕಪಾಳಕ್ಕೆ ಬಾರಿಸಿದ್ದಾರೆ. ಈ ಘಟನೆಯ ವಿಡಿಯೋವನ್ನು ಕೂಡಾ ಗುಂಪು ಮಾಡಿಕೊಂಡಿದೆ.

ಮಾಹಿತಿ ಪಡೆದ ನಂತರ ಸ್ಥಳಕ್ಕಾಗಮಿಸಿದ ಪೊಲೀಸರು ಇಬ್ಬರನ್ನು ರಕ್ಷಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದ್ದು, ಭಾನುವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವಿಡಿಯೋದಿಂದ ಆರೋಪಿಗಳನ್ನು ಗುರುತಿಸಲಾಗಿದೆ.

ಈ ಘಟನೆ ಶನಿವಾರ ನಡೆದಿದ್ದರೂ, ಒಂದು ದಿನದ ನಂತರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇದಾದ ಬಳಿಕ ಪೊಲೀಸರು ಕ್ರಮಕೈಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕರಾವಳಿಯಲ್ಲಿ ನಿಲ್ಲದ ಅನೈತಿಕ ಪೊಲೀಸ್‌ಗಿರಿ; ಪೊಲೀಸ್‌ ಬಳಿಕ ಪತ್ರಕರ್ತನಿಗೆ ನಿಂದನೆ, ಬೆದರಿಕೆ

ಕೆಲವು ತಿಂಗಳ ಹಿಂದೆ, ಉತ್ತರ ಪ್ರದೇಶದ ಸಹರಾನ್‌ಪುರ ಪಟ್ಟಣದಲ್ಲಿ ಇಬ್ಬರು ಮುಸ್ಲಿಂ ಹುಡುಗಿಯರನ್ನು ಹಿಂದೂ ಯುವಕರೊಂದಿಗೆ ಸುತ್ತಾರುತ್ತಿದ್ದಾರೆ ಎಂದು ಅನುಮಾನದಿಂದ ಗುಂಪೊಂದು ಹಲ್ಲೆ ನಡೆಸಿತ್ತು. ಯುವಕರೂ ಮುಸ್ಲಿಮರಾಗಿದ್ದರಿಂದ ಪೋಷಕರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿ ಬಿಟ್ಟಿತ್ತು. ಇಂತಹ ಹಲವು ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ದೇಶದಲ್ಲಿ ವರದಿಯಾಗುತ್ತಿದೆ.

ಹಿಂದೂ ಯುವತಿ, ಮುಸ್ಲಿಂ ಯುವಕರು ಜೊತೆಗಿದ್ದ ಕಾರಣ ಅವರ ಮೇಲೆ ಹಲ್ಲೆ ನಡೆಸಿರುವ ಹಲವು ಘಟನೆಗಳೂ ಉತ್ತರ ಪ್ರದೇಶದಲ್ಲಿ ನಡೆದಿದೆ. ಮುಸ್ಲಿಂ ಎಂಬ ಕಾರಣಕ್ಕೆ ಹಲ್ಲೆ ನಡೆಸುವುದು ದೇಶದಲ್ಲಿ ಹೆಚ್ಚಾಗುತ್ತಿದೆ. ಮುಸ್ಲಿಮರ ಮೇಲೆ ದಾಳಿ ಹೆಚ್ಚಾಗುತ್ತಿದ್ದಂತೆ ಪ್ರತಿದಾಳಿಯೂ ನಡೆದು ಕೋಮುಗಲಭೆಗೆ ದೇಶ ಸಾಕ್ಷಿಯಾಗಿದೆ. ಹೋಳಿ ಬಣ್ಣ ಹಾಕಿಸಿಕೊಳ್ಳಲು ನಿರಾಕರಿಸಿದ ಕಾರಣಕ್ಕೆ ಮುಸ್ಲಿಂ ಬಾಲಕನಿಗೆ ಥಳಿಸಿ ಕೊಂದಿರುವ ಘಟನೆ ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೋಮು ದ್ವೇಷ ಬಿತ್ತುವ ರಾಜಕಾರಣಿಗಳೇ ಇದಕ್ಕೆಲ್ಲಾ ನೇರ ಕಾರಣ ಎಂದರೆ ತಪ್ಪಾಗಲಾಗದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ...

UPI ಮೇಲೆ MDR ಶುಲ್ಕ: ಸರ್ಕಾರದ ‘ಸಮರ್ಥನೆ’ಯ ಮರೆಯಲ್ಲಿ ದೈತ್ಯ ಕಂಪನಿಗಳಿಗೆ ಮಣೆ

​'ಡಿಜಿಟಲ್ ಇಂಡಿಯಾ'ದ ಯಶಸ್ಸಿನ ಬಗ್ಗೆ ಸದಾ ಬೆನ್ನು ತಟ್ಟಿಕೊಳ್ಳುವ ಬಿಜೆಪಿ ಸರ್ಕಾರ,...