ಖಾಲಿ ಜಾಗದಲ್ಲಿ ನಮಾಜ್ ಮಾಡಿದ್ದಕ್ಕೆ ಮುಸ್ಲಿಂ ವೃದ್ಧನ ಮೇಲೆ ಭೀಕರ ಹಲ್ಲೆ

Date:

ದೇವಾಲಯದ ಮುಂಭಾಗದಲ್ಲಿದ್ದ ಖಾಲಿ ಜಾಗದಲ್ಲಿ ನಮಾಜ್ ಮಾಡಿದ್ದಕ್ಕಾಗಿ, ಮುಸ್ಲಿಂ ವೃದ್ಧನ ಮೇಲೆ ಹಿಂದುತ್ವ ಕೋಮುವಾದಿ ದುರುಳರು ಭೀಕರವಾಗಿ ಹಲ್ಲೆ ನಡೆಸಿರುವ ಅಮಾನುಷ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

- Advertisement -

ಉತ್ತರಾಖಂಡದ ರುದ್ರಪುರದಲ್ಲಿ ಘಟನೆ ನಡೆದಿದೆ. ರೇಷಮ್ ಬಾರಿ ಪ್ರದೇಶದ ನಿವಾಸಿಯಾದ ಶಾಹಿದ್ ಎಂಬವರು ಅತ್ರಿಯ ದೇವಾಲಯದ ಬಳಿ ಕೆಲಸ ಮಾಡುತ್ತಿದ್ದರು. ರಂಜಾನ್ ಹಿನ್ನೆಲೆ ಸಂಜೆ ವೇಳೆ ದೇವಾಲಯದ ಬಳಿಯ ಖಾಲಿ ಜಾಗದಲ್ಲಿ ನಮಾಜ್ ಮಾಡುತ್ತಿದ್ದರು. ಅಲ್ಲಿಗೆ ಬಂದ ದುರುಳರು, ಮುಸ್ಲಿಂ ವೃದ್ಧನ ಮೇಲೆ ಹಲ್ಲೆಗೈದು, ಹಿಂದುತ್ವವಾದಿ ಘೋಷಣೆಗಳನ್ನು ಕೂಗುವಂತೆ ಆತನನ್ನು ಒತ್ತಾಯಿಸಿದ್ದಾರೆ. ವಿಕೃತಿ ಮರೆದಿದ್ದಾರೆ ಎಂದು ವರದಿಯಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ವೀಡಿಯೊದಲ್ಲಿ; ಆರೋಪಿಗಳು ವೃದ್ಧನನ್ನು ಕೋಲುಗಳಿಂದ ಹೊಡೆದು, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದು ಕಂಡುಬಂದಿದೆ. ಘಟನೆ ಬಳಿಕ ಸಂತ್ರಸ್ತ ಶಾಹಿದ್ ಜೊತೆಗೆ ಮುಸ್ಲಿಂ ಸಮುದಾಯದ ಮುಖಂಡರು ಪೊಲೀಸ್‌ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಹಲ್ಲೆ ಎಸಗಿದ ಆರೋಪಿಗಳಲ್ಲಿ ಒಬ್ಬ ಕೊಲೆ ಅಪರಾಧಿಯಾಗಿದ್ದಾನೆ. ಪ್ರಸ್ತುತ ಪೆರೋಲ್ ಮೇಲೆ ಬಿಡುಗಡೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ತಲುಪಿ ಎರಡೂ ಸಮುದಾಯಗಳು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಶಾಹಿದ್ ಅವರನ್ನು ವೈದ್ಯಕೀಯ ಪರೀಕ್ಷೆ ಮತ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ದೂರಿನ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ನಗರಪಾಲಿಕೆ ಸದಸ್ಯ ಪರ್ವೇಜ್ ಖುರೇಷಿ ಈ ಘಟನೆಯನ್ನು ಖಂಡಿಸಿದ್ದಾರೆ. “ವಿಷಯವು ಅತ್ಯಂತ ಗಂಭೀರವಾಗಿದೆ. ವ್ಯಕ್ತಿಯ ಮೇಲೆ ಹಲ್ಲೆ ನಡೆಸುವುದು ಸ್ವೀಕಾರಾರ್ಹವಲ್ಲ. ಯಾರಿಗಾದರೂ ಯಾವುದೇ ಆಕ್ಷೇಪವಿದ್ದರೆ, ಆಡಳಿತಕ್ಕೆ ತಿಳಿಸಬೇಕಿತ್ತು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನಿಷ್ಪಕ್ಷಪಾತ ತನಿಖೆ ಮತ್ತು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದಿದ್ದಾರೆ.

ಕಾಂಗ್ರೆಸ್ ನಾಯಕಿ ಸೋಫಿಯಾ ನಾಜ್, “ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಹಿಂಸಾಚಾರ ಮತ್ತು ಧರ್ಮದ ಹೆಸರಿನಲ್ಲಿ ಬಲವಂತದ ಘೋಷಣೆಗಳನ್ನು ಕೂಗುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಆಡಳಿತವು ತಕ್ಷಣ ಕ್ರಮ ಕೈಗೊಂಡು ಸಂತ್ರಸ್ತನಿಗೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ಯಶಸ್ವಿ; 40 ಸಾವಿರ ಅರೆಸೇನಾ ಯೋಧರ ನಿಯೋಜನೆಯೇ ಸಾಕ್ಷಿ:‌ ಪ್ರಶಾಂತ್ ಕಿಶೋರ್

ಭಾರತದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆಕೊಟ್ಟಿದ್ದ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

NTA ಒಂದು ‘ಖಾಲಿ ಸಂಸ್ಥೆ’, ಮೋದಿ ಸರ್ಕಾರ ಅಹಂಕಾರ ಬಿಟ್ಟು ವರದಿ ಪರಿಗಣಿಸಲಿ: ಕಾಂಗ್ರೆಸ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ‌ (ಎನ್‌ಟಿಎ) ಮತ್ತು ಶಿಕ್ಷಣ ಸಚಿವಾಲಯದಲ್ಲಿ ಗಂಭೀರ ಸ್ವರೂಪದ...