ಭೋಜಶಾಲೆಯನ್ನು‌ ಹಿಂದೂಗಳಿಗೆ ಒಪ್ಪಿಸಿದ ತೀರ್ಪು ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ ಮುಸ್ಲಿಂ ಒಕ್ಕೂಟ

Date:

ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ ಕಾಂಪ್ಲೆಕ್ಸ್ ಅನ್ನು ಹಿಂದೂಗಳ ದೇವಸ್ಥಾನ ಎಂದು ಘೋಷಿಸಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯದ ಪರವಾಗಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಮಸೀದಿಯ ಉಸ್ತುವಾರಿ ಹಾಗೂ ಪ್ರಕರಣದ ಮಧ್ಯಸ್ಥಗಾರರಾದ ಖಾಜಿ ಮೊಯಿನುದ್ದೀನ್ ಅವರು ಈ ಅರ್ಜಿಯನ್ನು ದಾಖಲಿಸಿದ್ದಾರೆ.

- Advertisement -

ಮೇ 15ರಂದು ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು, ಭೋಜಶಾಲೆ ಸಂಕೀರ್ಣವು ವಾಗ್ ದೇವಿ (ಸರಸ್ವತಿ) ದೇವಸ್ಥಾನವಾಗಿದೆ ಎಂದು ಆದೇಶಿಸಿತ್ತು. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ನಡೆಸಿದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಆಧರಿಸಿ ಕೋರ್ಟ್ ಈ ತೀರ್ಪು ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಇದನ್ನು ಓದಿದ್ದೀರಾ? BREAKING NEWS | ಭೋಜಶಾಲಾ ಸಂಕೀರ್ಣವನ್ನು ದೇವಾಲಯವೆಂದು ಘೋಷಿಸಿದ ಮಧ್ಯಪ್ರದೇಶ ಹೈಕೋರ್ಟ್‌

ಆದರೆ ಈ ಹಿಂದಿನ 2003 ರ ಎಎಸ್‌ಐ ನಿಯಮದ ಪ್ರಕಾರ, ಅಲ್ಲಿ ಮಂಗಳವಾರ ಹಿಂದೂಗಳಿಗೆ ಪೂಜೆ ಹಾಗೂ ಶುಕ್ರವಾರ ಮುಸ್ಲಿಮರಿಗೆ ನಮಾಜ್ ಮಾಡಲು ಅವಕಾಶವಿತ್ತು. ಆದರೆ ಹೈಕೋರ್ಟ್ ಈ ನಿಯಮವನ್ನು ರದ್ದುಗೊಳಿಸಿ, ಮುಸ್ಲಿಮರು ಶುಕ್ರವಾರದ ನಮಾಜ್ ಮಾಡುವುದನ್ನು ನಿಷೇಧಿಸಿದೆ. ಜೊತೆಗೆ ಮಸೀದಿ ನಿರ್ಮಾಣಕ್ಕಾಗಿ ಬೇರೆಡೆ ಜಾಗವನ್ನು ಕೋರಲು ಮುಸ್ಲಿಂ ಸಮುದಾಯಕ್ಕೆ ಸೂಚಿಸಿದೆ.

ಇದೀಗ ಹೈಕೋರ್ಟ್ ತೀರ್ಪು ಪುರಾತತ್ವ ಪುರಾವೆಗಳಿಗೆ ವಿರುದ್ಧವಾಗಿದೆ ಮತ್ತು ಇದು 1991ರ ‘ಆರಾಧನಾ ಸ್ಥಳಗಳ ಕಾಯ್ದೆ’ಯನ್ನು (Places of Worship Act) ಉಲ್ಲಂಘಿಸುತ್ತದೆ ಎಂದು ಮುಸ್ಲಿಂ ಒಕ್ಕೂಟವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದೆ.

ಇನ್ನು ಮುಸ್ಲಿಂ ಸಮುದಾಯವು ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಬಹುದು ಎಂಬುದನ್ನು ಮುಂಚಿತವಾಗಿಯೇ ಊಹಿಸಿದ್ದ ಕೆಲವು ಗುಂಪುಗಳು ತಮ್ಮ ವಾದವನ್ನು ಆಲಿಸದೆ ಯಾವುದೇ ಮಧ್ಯಂತರ ತಡೆಯಾಜ್ಞೆ ನೀಡಬಾರದು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಈಗಾಗಲೇ ಕೇವಿಯಟ್ ಅರ್ಜಿಯನ್ನು ಸಲ್ಲಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...