ಉದ್ದೇಶಪೂರ್ವಕವಾಗಿ ಬಿಹಾರದ ಜನಗಣತಿಯಲ್ಲಿ ಮುಸ್ಲಿಂ, ಯಾದವರ ಸಂಖ್ಯೆ ಹೆಚ್ಚಳ: ಅಮಿತ್ ಶಾ

Date:

ಬಿಹಾರದ ಜಾತಿ ಸಮೀಕ್ಷೆಯಲ್ಲಿ ಮುಸ್ಲಿಂ ಹಾಗೂ ಯಾದವ ಸಮುದಾಯದ ಜನಸಂಖ್ಯೆಯನ್ನು ತುಷ್ಟೀಕರಣ ರಾಜಕೀಯದ ಭಾಗವಾಗಿ ಉದ್ದೇಶಪೂರ್ವಕವಾಗಿ ಹೆಚ್ಚಿಸಲಾಗಿದೆ ಎಂದು ಬಿಹಾರದ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ನಿತೀಶ್ ಕುಮಾರ್ ಅವರ ಜೆಡಿಯು ಎನ್‌ಡಿಎ ಅಂಗವಾಗಿದ್ದಾಗ ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’ ಎಂದು ಹೇಳಿದರು.

“ಜೆಡಿಯು, ಆರ್‌ಜೆಡಿ ಹಾಗೂ ಪ್ರತಿಪಕ್ಷ ಇಂಡಿಯಾ ಒಕ್ಕೂಟದ ಏಕೈಕ ಉದ್ದೇಶ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿರೋಧಿಸುವುದಾಗಿದೆ. ನಿತೀಶ್ ಕುಮಾರ್ ಅವರು ಮುಂದಿನ ಪ್ರಧಾನಿಯಾಗುವ ಕನಸು ಕಾಣುವುದನ್ನು ಬಿಡಬೇಕು. ಇಂಡಿಯಾ ಒಕ್ಕೂಟ ಅವರನ್ನು ಅದರ ಸಂಚಾಲಕರನ್ನಾಗಿಯೂ ಮಾಡಲಿಲ್ಲ” ಎಂದು ಅಮಿತ್ ಶಾ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಒಮ್ಮೊಮ್ಮೆ ಗುಲಾಮಿತನ ಅನ್ನಿಸಿಬಿಡುತ್ತದೆ: ಬಿಜೆಪಿ ಸಂಸದ ಕರಡಿ ಸಂಗಣ್ಣ ಅಸಮಾಧಾನ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಗೃಹ ಸಚಿವರು, ರಾಜ್ಯದಲ್ಲಿ ‘ಗೂಂಡಾ ರಾಜ್’ಗೆ ಜೆಡಿಯು ನಾಯಕರೇ ಕಾರಣ’ ಎಂದು ಹೇಳಿದರು.

“ನಿತೀಶ್ ಕುಮಾರ್ ಮತ್ತು ಲಾಲೂ ಯಾದವ್ ಅವರು ಕುಟುಂಬದ ಅಂಗಡಿಗಳನ್ನು ನಡೆಸುವವರು. ಒಬ್ಬರು ಪ್ರಧಾನಿಯಾಗಲು ಬಯಸುತ್ತಾರೆ ಮತ್ತು ಇನ್ನೊಬ್ಬರು ತಮ್ಮ ಮಗನನ್ನು ಮುಖ್ಯಮಂತ್ರಿ ಮಾಡಲು ಬಯಸುತ್ತಾರೆ” ಎಂದು ಅಮಿತ್ ಶಾ ಹೇಳಿದರು.

ಅಮಿತ್‌ ಶಾಗೆ ತೇಜಶ್ವಿ ಯಾದವ್ ತಿರುಗೇಟು

ಯಾದವರು ಮತ್ತು ಮುಸ್ಲಿಮರ ಜನಸಂಖ್ಯೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಬಿಹಾರದ ಉಪಮುಖ್ಯಮಂತ್ರಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಟೀಕಿಸಿದ್ದಾರೆ.

“ಅಮಿತ್‌ ಶಾ ಹೇಳಿಕೆಯನ್ನು ಕೇಳಿದ್ದೇನೆ. ಜಾತಿವಾರು ಸಮೀಕ್ಷೆಯಲ್ಲಿ ಯಾದವರು, ಮುಸ್ಲಿಮರ ಜನಸಂಖ್ಯೆ ಹೆಚ್ಚಿದ್ದು, ಇತರೆ ಸಮುದಾಯಗಳ ಜನಸಂಖ್ಯೆ ಕಡಿಮೆಯಾಗಿದೆ ಎಂದಿದ್ದಾರೆ. ಸಮೀಕ್ಷೆ ತಪ್ಪಾಗಿದ್ದರೆ ದೇಶಾದ್ಯಂತ ಜಾತಿ ಗಣತಿ ನಡೆಸಿ ಎಂದು ಹೇಳಲು ಬಯಸುತ್ತೇನೆ. ನಿಮ್ಮನ್ನು ತಡೆದವರ್ಯಾರು? ನೀವು ಯಾಕೆ ಹಾಗೆ ಮಾಡುತ್ತಿಲ್ಲ?” ಎಂದು ಅವರು ತಿರುಗೇಟು ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೂರನೇ ಬಾರಿ ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣವಚನ

ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಪೆಮಾ ಖಂಡು...

ಗಾಜಿಯಾಬಾದ್‌ನ ವಸತಿ ಕಟ್ಟಡದಲ್ಲಿ ಬೆಂಕಿ; ಐವರು ಸಾವು

ಉತ್ತರ ಪ್ರದೇಶದ ಗಾಜಿಯಾಬಾದ್‌ನ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸಾವನ್ನಪ್ಪಿದ್ದಾರೆ...

ಜಮ್ಮು ಕಾಶ್ಮೀರ| ನಾಲ್ವರು ಉಗ್ರರ ರೇಖಾಚಿತ್ರ ಬಿಡುಗಡೆ, 20 ಲಕ್ಷ ರೂ ಬಹುಮಾನ ಘೋಷಣೆ

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ದೋಡಾ ಜಿಲ್ಲೆಯಲ್ಲಿ ಎರಡು ದಾಳಿಗಳಲ್ಲಿ...

ಸಚಿವ ಸಂಪುಟದಲ್ಲಿ ಜೆಪಿ ನಡ್ಡಾ; ಮುಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಯಾರು?

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಅಧಿಕಾರಾವಧಿಯು ಜೂನ್...