ಬಾಲಕಿಯ ಅತ್ಯಾಚಾರ; ಮಠದ ಅರ್ಚಕ ಸೇರಿ ಇಬ್ಬರ ಬಂಧನ

Date:

ಅಪ್ರಾಪ್ತ ಬಾಲಕಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಮಠದ 75 ವರ್ಷದ ಅರ್ಚಕ ಮತ್ತು ಅವರ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಗರ್ಭಿಣಿಯಾದ ಬಳಿಕ ಈ ವಿಚಾರ ಬಹಿರಂಗವಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

- Advertisement -

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಬಾಲಕಿಯ ಸಂಬಂಧಿ ಮಹಿಳೆಯನ್ನು ಕೂಡಾ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ಸಂಜೆ ಅಮರಾವತಿಯ ಶಿರ್ಖೇಡ್ ಪೊಲೀಸ್ ಠಾಣೆಗೆ ಬಾಲಕಿ ತನ್ನ ಪೋಷಕರೊಂದಿಗೆ ಬಂದು ರಿದ್ಧಾಪುರ ಮಠದ ಮುಖ್ಯ ಅರ್ಚಕ ಮತ್ತು ಇತರರ ವಿರುದ್ಧ ದೂರು ದಾಖಲಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಅತ್ಯಾಚಾರ ಸಂತ್ರಸ್ತರಿಗೆ ಗರ್ಭಪಾತ ಮಾಡಿಸುವ ಹಕ್ಕಿದೆ: ಅಲಹಾಬಾದ್ ಹೈಕೋರ್ಟ್

ವೈದ್ಯಕೀಯ ಪರೀಕ್ಷೆಯ ವೇಳೆ ಬಾಲಕಿ ಎಂಟು ತಿಂಗಳ ಗರ್ಭಿಣಿಯಾಗಿರುವುದು ಎಂದು ತಿಳಿದುಬಂದಿದೆ. ಬಾಲಕಿಯು ಕಳೆದ ಒಂದು ವರ್ಷದಿಂದ ತನ್ನ ಚಿಕ್ಕಪ್ಪ ಮತ್ತು ಚಿಕ್ಕಮ್ಮನೊಂದಿಗೆ ಮಠದಲ್ಲಿ ಸೇವೆ ಮಾಡಲು ಮಠದಲ್ಲಿ ವಾಸಿಸುತ್ತಿದ್ದಾಳೆ ಎಂದು ವರದಿಯಾಗಿದೆ.

2024ರ ಏಪ್ರಿಲ್ 2ರಂದು ಮುಖ್ಯ ಅರ್ಚಕರು ಬಾಲಕಿಯ ಚಿಕ್ಕಮ್ಮನನ್ನು ಕರೆದು ಬಾಲಕಿಯನ್ನು ತನ್ನೆಡೆಗೆ ಕಳುಹಿಸುವಂತೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಚಿಕ್ಕಮ್ಮ ಬಾಲಕಿಯನ್ನು ಅರ್ಚಕ ಸುರೇಂದ್ರಮುನಿ ತಲೆಗಾಂವ್ಕರ್ ಅವರ ಕೋಣೆಗೆ ಕಳುಹಿಸಿದ್ದು, ಅಲ್ಲಿ ಮಠದ ಅರ್ಚಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿಗಳು ಹೇಳಿದರು.

ಮಠದಲ್ಲಿ ವಾಸಿಸುವ ಬಾಲಾಸಾಹೇಬ್ ದೇಸಾಯಿ (40) ಕೂಡ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇಬ್ಬರೂ ಆರೋಪಿಗಳು ಹಲವು ತಿಂಗಳುಗಳ ಕಾಲ ಈ ಅಪರಾಧ ಮಾಡಿದ್ದಾರೆ. ಸಂತ್ರಸ್ತೆ ಬಾಲಕಿ ಆರಂಭದಲ್ಲಿ ತನ್ನ ಮೇಲೆ ಅತ್ಯಾಚಾರ ನಡೆದ ಬಗ್ಗೆ ಚಿಕ್ಕಮ್ಮನಿಗೆ ತಿಳಿಸಿದ್ದಾಳೆ. ಆದರೆ ಚಿಕ್ಕಮ್ಮ ಬಾಲಕಿಯನ್ನು ಬೆದರಿಸಿ ಸುಮ್ಮನಿರುವಂತೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇಶದಲ್ಲಿ ಮಕ್ಕಳ ಮೇಲೆ, ಅಪ್ರಾಪ್ತರ ಮೇಲೆ ಅತ್ಯಾಚಾರ ಪ್ರಕರಣಗಳು ಅಧಿಕವಾಗುತ್ತಿದೆ. ಎನ್‌ಜಿಒ ಸಿಆರ್‌ವೈ ವರದಿಯ ಪ್ರಕಾರ ದೇಶದಲ್ಲಿ 2016ರಿಂದ 2022ರ ನಡುವೆ ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಸುಮಾರು ಶೇಕಡ 96ರಷ್ಟು ಏರಿಕೆಯಾಗಿದೆ. ಇನ್ನೂ ಹಲವು ಪ್ರಕರಣಗಳು ವರದಿಯೇ ಆಗಿಲ್ಲ. 2020 ಹೊರತುಪಡಿಸಿ 2016ರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. 2021ರಿಂದ 2022ರ ನಡುವೆ ಶೇಕಡ 6.9ರಷ್ಟು ಪ್ರಕರಣಗಳು ಅಧಿಕವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...