‘ನನ್ನ 5 ವರ್ಷದ ಶ್ರಮ ಕಳವು’: ಬ್ಲಾಕ್‌ಮೇಲ್‌ಗೆ ಬೇಸತ್ತು ಯೂಟ್ಯೂಬರ್ ಹರೀಶ್ ಆತ್ಮಹತ್ಯೆ

Date:

ಸೋಷಿಯಲ್ ಮೀಡಿಯಾದಲ್ಲಿ ‘ಫೈನಾನ್ಸ್ ವಿತ್ ಹರೀಶ್’ ಹೆಸರಿನಲ್ಲಿ ಹಣಕಾಸಿಗೆ ಸಂಬಂಧಿಸಿದ ವಿಡಿಯೋಗಳನ್ನು ಮಾಡುತ್ತಿದ್ದ ಯೂಟ್ಯೂಬರ್ ವಿ. ಹರೀಶ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮಿಳುನಾಡಿನ ಚೆನ್ನೈನಲ್ಲಿ ವಾಸವಿದ್ದ 27 ವರ್ಷದ ಹರೀಶ್‌, ಕೊನೆಯದಾಗಿ ವಿಡಿಯೋವೊಂದನ್ನು ಪ್ರಕಟಿಸಿದ್ದು, ಅದರಲ್ಲಿ ‘ತಮ್ಮ 5 ವರ್ಷದ ಶ್ರಮವನ್ನು ಕದಿಯಲಾಗಿದೆ. ಸೈಬರ್ ಕೃತ್ಯದ ಮೂಲಕ ನನ್ನ ಸಾಮಾಜಿಕ ಜಾಲತಾಣ ಖಾತೆಗಳನ್ನು ಬ್ಲಾಕ್‌ ಮಾಡಿಸಲಾಗಿದೆ’ ಎಂದು ಆರೋಪಿಸಿದ್ದಾರೆ.

- Advertisement -

ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ಸುಮಾರು 13 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದ ಹರೀಶ್, “ನಾನು ಕಳೆದ ಐದು ವರ್ಷಗಳಿಂದ ಸತತವಾಗಿ ಪಟ್ಟ ಕಷ್ಟ ಮತ್ತು ಶ್ರಮವನ್ನು ಸಂಪೂರ್ಣವಾಗಿ ಕದಿಯಲಾಗಿದೆ. ನನ್ನಲ್ಲಿ ಏನಾದರೂ ತಪ್ಪುಗಳಿದ್ದರೆ ನನ್ನನ್ನು ನೇರವಾಗಿ ಪ್ರಶ್ನಿಸಬಹುದಿತ್ತು, ನಾನು ಅದಕ್ಕೆ ಉತ್ತರಿಸಲು ಸಿದ್ಧನಿದ್ದೆ. ಆದರೆ, ನನ್ನ ಇಡೀ ಶ್ರಮವನ್ನು ಕಸಿದುಕೊಳ್ಳಲಾಯಿತು” ಎಂದು ಆ ವೀಡಿಯೊದಲ್ಲಿ ತೀವ್ರ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಹರೀಶ್ ಅವರ ತಂದೆ ನೀಡಿರುವ ದೂರಿನ ಪ್ರಕಾರ, ‘ಝೆಮುರಿಯಾ ಇಂಕ್’ (Zemuria Inc) ಎಂಬ ಕಂಪನಿಯ ಸಿಇಒ ಜೇಸನ್ ಸ್ಯಾಮ್ಯುಯೆಲ್ ಎಂಬಾತನೇ ಹರೀಶ್ ವಿರುದ್ಧ ಸೈಬರ್ ಕಿರುಕುಳ ನಡೆಸಿ, ಅವರ ಖಾತೆಗಳು ನಿಷ್ಕ್ರಿಯಗೊಳ್ಳುವಂತೆ ಮಾಡಿದ್ದಾನೆ.

“ತಮಗೆ ಪಾಂಡಿಚೇರಿಯ ಶಾಸಕರು ಮತ್ತು ಮುಖ್ಯಮಂತ್ರಿಯವರೊಡನೆ ನಿಕಟ ಸಂಪರ್ಕವಿದೆ ಎಂದು ಬೆದರಿಸಿದ್ದ ಜೇಸನ್ ಸ್ಯಾಮ್ಯುಯೆಲ್, ನಮಗೆ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದನು. ‘ನೀನು ನನಗೆ ಹಣ ನೀಡದಿದ್ದರೆ ಎಲ್ಲಿಗೆ ಹೋಗಲು ಸಾಧ್ಯವಿಲ್ಲ. ಐಟಿ ಇಲಾಖೆಯಿಂದ 60%ರಷ್ಟು ದಂಡ ವಿಧಿಸಿ ನಿನ್ನನ್ನು ಜೈಲಿಗೆ ಕಳುಹಿಸುತ್ತೇನೆ. ಇದನ್ನು ತಪ್ಪಿಸಿಕೊಳ್ಳಬೇಕಾದರೆ ನನಗೆ ಹಣ ಕೊಟ್ಟು ರಾಜಿ ಮಾಡಿಕೊ. ಇಲ್ಲದಿದ್ದರೆ ನಿನ್ನ ವಿರುದ್ಧ ಸರಣಿ ವಿಡಿಯೋಗಳನ್ನು ಬಿಡುಗಡೆ ಮಾಡುತ್ತೇನೆ’ ಎಂದು ಸ್ಯಾಮ್ಯುಯೆಲ್ ನಿರಂತರ ಕಿರುಕುಳ ನೀಡುತ್ತಿದ್ದನು” ಎಂದು ಹರೀಶ್ ತಮ್ಮ ವೀಡಿಯೊದಲ್ಲಿ ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಈ ಬೆದರಿಕೆಗಳಿಂದಾಗಿ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಹರೀಶ್, ತಮಗೆ ತಮ್ಮ ಸ್ನೇಹಿತರನ್ನು ಭೇಟಿಯಾಗಲು ಸಹ ಅಪರಾಧ ಪ್ರಜ್ಞೆ ಪಡುವಂತಹ ವಾತಾವರಣ ಸೃಷ್ಟಿಯಾಗಿತ್ತು ಎಂದು ಹೇಳಿಕೊಂಡಿದ್ದಾರೆ.

ಹರೀಶ್ ಸಾವಿನ ಬಳಿಕ, ಜೇಸನ್ ಸ್ಯಾಮ್ಯುಯೆಲ್ ‘ಎಕ್ಸ್’ನಲ್ಲಿ ಸ್ಪಷ್ಟನೆ ನೀಡಿದ್ದು, “ಹರೀಶ್ ಅವರ ಸಾವಿಗೆ ನಾನು ಸಂತಾಪ ಸೂಚಿಸುತ್ತೇನೆ. ಆದರೆ, ನಾನು ಯಾವುದೇ ಕಿರುಕುಳ ನೀಡಿಲ್ಲ. ಹರೀಶ್ ಸೆಬಿ ನೋಂದಾಯಿತ ಹೂಡಿಕೆ ಸಲಹೆಗಾರರಾಗಿರಲಿಲ್ಲ ಮತ್ತು ನಿಯಮಗಳನ್ನು ಮೀರಿ ತಪ್ಪು ಮಾಹಿತಿ ನೀಡುತ್ತಿದ್ದರೆಂಬುದನ್ನು ಮಾತ್ರ ತಾವು ಬಹಿರಂಗಪಡಿಸಿದ್ದೆವು” ಸಮರ್ಥಿಸಿಕೊಂಡಿದ್ದಾರೆ.

ಪ್ರಸ್ತುತ ಹರೀಶ್ ಅವರ ತಂದೆಯ ದೂರಿನನ್ವಯ ಪೊಲೀಸರು ಸೈಬರ್ ಬುಲ್ಲಿಯಿಂಗ್ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸ್ಯಾಮ್ಯುಯೆಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿಗೆ ಅಣ್ಣಾಮಲೈ ಬೆಂಬಲ: ‘ಬಂಧನವು ಅವರನ್ನು ಮತ್ತಷ್ಟು ಬಲಶಾಲಿಗಳನ್ನಾಗಿಸುತ್ತದೆ’ ಎಂದ ನಾಯಕ

ಚುನಾವಣಾ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಅಕ್ರಮಗಳು ನಡೆದಿವೆ ಎಂದು...

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...