NALSAR ಘಟಿಕೋತ್ಸವ: ಮುಖ್ಯ ಅತಿಥಿಯಾಗಿ ಸಿಜೆಐ ಸೂರ್ಯಕಾಂತ್ ಆಹ್ವಾನಕ್ಕೆ ವಿದ್ಯಾರ್ಥಿಗಳ ವಿರೋಧ

Date:

ಹೈದರಾಬಾದ್‌ನ ಪ್ರತಿಷ್ಠಿತ ‘ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಅಂಡ್ ರಿಸರ್ಚ್’ (NALSAR – ನ್ಯಾಲ್ಸಾರ್) ವಿಶ್ವವಿದ್ಯಾಲಯದ ಮುಂಬರುವ ಘಟಿಕೋತ್ಸವಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ವಿದ್ಯಾರ್ಥಿಗಳ ಒಂದು ಗುಂಪು ವಿಶ್ವವಿದ್ಯಾಲಯದ ಆಡಳಿತ ಮಂಡಳಿಯನ್ನು ಆಗ್ರಹಿಸಿದೆ.

- Advertisement -

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ‘ಚಲೋ ಸಂಸದ್’ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯದ ವಿಚಾರಣೆ ವೇಳೆ ಸಿಜೆಐ ನೀಡಿದ್ದಾರೆನ್ನಲಾದ ಹೇಳಿಕೆಗಳೇ ವಿದ್ಯಾರ್ಥಿಗಳ ಈ ಅಸಮಾಧಾನಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

​ಮುಖ್ಯ ಅತಿಥಿ ಆಹ್ವಾನವನ್ನು ಹಿಂಪಡೆಯುವಂತೆ ಕೋರಿ ವಿವಿಧ ಬ್ಯಾಚ್‌ಗಳ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಕನಿಷ್ಠ ಆರು ಪ್ರತ್ಯೇಕ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ನ್ಯಾಲ್ಸಾರ್ ಘಟಿಕೋತ್ಸವದಲ್ಲಿ ಸಾಂಪ್ರದಾಯಿಕವಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೇ ಭಾಷಣ ಮಾಡುವುದು ವಾಡಿಕೆ. ಆದರೆ, 2026-27ನೇ ಸಾಲಿನ ಘಟಿಕೋತ್ಸವದ ದಿನಾಂಕ ಇನ್ನೂ ಅಂತಿಮಗೊಂಡಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

​ಜುಲೈ 23ರಂದು ಕುಲಪತಿ, ಕುಲಸಚಿವ, ಪ್ರಾಧ್ಯಾಪಕರು ಹಾಗೂ ಆಡಳಿತ ಮಂಡಳಿಗೆ ಸಲ್ಲಿಸಿದ ಮೊದಲ ಮನವಿ ಪತ್ರದಲ್ಲಿ, ವಿಚಾರಣೆ ವೇಳೆ ಸಿಜೆಐ ನೀಡಿದ್ದ ಹೇಳಿಕೆಗಳನ್ನು ವಿದ್ಯಾರ್ಥಿಗಳು ಉಲ್ಲೇಖಿಸಿದ್ದಾರೆ. ಪೊಲೀಸ್ ದೌರ್ಜನ್ಯದ ವಿಡಿಯೊಗಳನ್ನು ತೋರಿಸಲು ವಕೀಲರು ಮುಂದಾದಾಗ ಪ್ರತಿಕ್ರಿಯಿಸಿದ್ದ ಸಿಜೆಐ, “ನಮಗೆ ವಿಡಿಯೊಗಳನ್ನು ನೋಡಲು ಆಸಕ್ತಿಯಿಲ್ಲ, ಅದಕ್ಕೆ ನಮಗೆ ಸಮಯವೂ ಇಲ್ಲ. ನಮ್ಮ ಸಮಯವನ್ನೂ ಹಾಳು ಮಾಡಬೇಡಿ, ನಿಮ್ಮ ಸಮಯವನ್ನೂ ವ್ಯರ್ಥ ಮಾಡಿಕೊಳ್ಳಬೇಡಿ” ಎಂದು ಹೇಳಿದ್ದರು ಎನ್ನಲಾಗಿದೆ.

​ಈ ಹೇಳಿಕೆಗಳನ್ನು ಪ್ರಸ್ತಾಪಿಸಿರುವ ವಿದ್ಯಾರ್ಥಿಗಳು, “ಘಟಿಕೋತ್ಸವ ಎಂಬುದು ಸಾಂವಿಧಾನಿಕ ಹಕ್ಕುಗಳು, ನ್ಯಾಯದ ಲಭ್ಯತೆ ಮತ್ತು ಕುಂದುಕೊರತೆಗಳಿಗೆ ಸ್ಪಂದಿಸುವ ವಿಶ್ವವಿದ್ಯಾಲಯದ ಮೌಲ್ಯಗಳನ್ನು ಪ್ರತಿಬಿಂಬಿಸುವ ವೇದಿಕೆಯಾಗಿದೆ. ಆದರೆ, ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯದಂತಹ ಗಂಭೀರ ಆರೋಪಗಳನ್ನು ತಳ್ಳಿಹಾಕುವಂತೆ ಸಾರ್ವಜನಿಕವಾಗಿ ವರ್ತಿಸಿದ ಗಣ್ಯರೊಬ್ಬರಿಂದ ಪದವಿ ಪಡೆಯುವುದು, ನ್ಯಾಲ್ಸಾರ್‌ನಲ್ಲಿ ನಾವು ಕಲಿತ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂಬ ಮುಜುಗರ ನಮ್ಮನ್ನು ಕಾಡುತ್ತಿದೆ” ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

​ಮೂಲ ಪತ್ರದಲ್ಲಿನ ಕಳವಳಗಳಿಗೆ ಬೆಂಬಲ ಸೂಚಿಸಿ ಇತರ ಬ್ಯಾಚ್‌ಗಳ ವಿದ್ಯಾರ್ಥಿಗಳು ಕೂಡ ಐದು ಪ್ರತ್ಯೇಕ ಮನವಿಗಳನ್ನು ಸಲ್ಲಿಸಿದ್ದು, ಮುಖ್ಯ ಅತಿಥಿ ಅಂತಿಮಗೊಳಿಸುವ ಮುನ್ನ ಈ ಆಕ್ಷೇಪಗಳನ್ನು ಪರಿಗಣಿಸುವಂತೆ ಒತ್ತಾಯಿಸಿದ್ದಾರೆ. ಆದರೆ, ಈ ಬಗ್ಗೆ ವಿಶ್ವವಿದ್ಯಾಲಯದಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಕುರಿತು ಪ್ರತಿಕ್ರಿಯೆ ಪಡೆಯಲು ಕುಲಪತಿ ಶ್ರೀಕೃಷ್ಣ ದೇವ ರಾವ್ ಅವರನ್ನು ಸಂಪರ್ಕಿಸುವ ಮಾಧ್ಯಮಗಳ ಯತ್ನ ವಿಫಲವಾಗಿದೆ. ಅತ್ತ ಕುಲಸಚಿವರು, ವಿದ್ಯಾರ್ಥಿಗಳು ಸಲ್ಲಿಸಿರುವ ಮನವಿ ಪತ್ರಗಳ ಬಗ್ಗೆ ತಮಗೆ ಯಾವುದೇ ಮಾಹಿತಿಯಿಲ್ಲ ಎಂದಿದ್ದಾರೆ.

​ಪ್ರತಿ ಮನವಿ ಪತ್ರಕ್ಕೂ 70 ರಿಂದ 80 ವಿದ್ಯಾರ್ಥಿಗಳು ಸಹಿ ಮಾಡಿದ್ದು, ಒಟ್ಟಾರೆ 350 ರಿಂದ 450 ವಿದ್ಯಾರ್ಥಿಗಳು ಈ ಆಗ್ರಹಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. “ನಾವು ಸಿಜೆಐ ಹುದ್ದೆಯನ್ನು ಗೌರವಿಸುತ್ತೇವೆ. ಆದರೆ ನಮಗೆ ಇಲ್ಲಿ ಸಂವಿಧಾನ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಕಲಿಸಲಾಗಿದೆ. ಆ ಮೌಲ್ಯಗಳಿಗೆ ವಿರುದ್ಧವಾದದ್ದನ್ನು ನಾವು ಬೆಂಬಲಿಸುವುದಿಲ್ಲ” ಎಂದು ವಿದ್ಯಾರ್ಥಿ ಬಾರ್ ಕೌನ್ಸಿಲ್‌ನ (SBC) ಸದಸ್ಯರೊಬ್ಬರು ಸ್ಪಷ್ಟಪಡಿಸಿದ್ದಾರೆ.

“ಮುಖ್ಯ ಅತಿಥಿ ಆಯ್ಕೆಯನ್ನು ವಿಶ್ವವಿದ್ಯಾಲಯವು ಮರುಪರಿಶೀಲಿಸಬೇಕು. ಆಡಳಿತ ಮಂಡಳಿ ಸೂಕ್ತವೆಂದು ಭಾವಿಸುವ ಯಾವುದೇ ವೇದಿಕೆಯ ಮೂಲಕ ಈ ಬಗ್ಗೆ ಮುಕ್ತ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆ” ಎಂದು ವಿದ್ಯಾರ್ಥಿಗಳು ಪತ್ರದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...

‘ದೇವರೇ ಈ ದೇಶವನ್ನು ಕಾಪಾಡಬೇಕು’: ರೈಲು ಪ್ರಯಾಣದ ಗದ್ದಲಕ್ಕೆ ಬೇಸತ್ತ ತೇಜಸ್ವಿ ಸೂರ್ಯ ಪತ್ನಿ

ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ಗದ್ದಲದಿಂದ ತೀವ್ರ ಕಿರಿಕಿರಿ ಅನುಭವಿಸಿರುವುದಾಗಿ ಬಿಜೆಪಿ...

ಬೀದರ್ | ಬರ ಪರಿಸ್ಥಿತಿ : ವಿಶೇಷ ಪ್ಯಾಕೇಜ್ ಘೋಷಿಸಲು ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬೆಳೆ...