ಹೆಸರು ಗೊಂದಲ: ಜಾಮೀನು ಪಡೆದ ವ್ಯಕ್ತಿ ಬದಲು ಪೋಕ್ಸೋ ಆರೋಪಿ ಬಿಡುಗಡೆ

Date:

ಇಬ್ಬರು ಆರೋಪಿಗಳು ಒಂದೇ ಹೆಸರು ಹೊಂದಿದ್ದರಿಂದ ಹೆಸರಿನ ಗೊಂದಲದಲ್ಲಿ ಜಾಮೀನು ಸಕ್ಕಿ ವ್ಯಕ್ತಿಯ ಬದಲಿಗೆ ಪೋಕ್ಸೋ ಪ್ರಕರಣದ ಆರೋಪಿಯನ್ನು ಜೈಲಿನಿಂದ ಬಿಡುಗಡೆ ಮಾಡಿರುವ ಘಟನೆ ಫರೀದಾಬಾದ್‌ನಲ್ಲಿ ನಡೆದಿದೆ.

- Advertisement -

ಬೇರೆಯವರ ಮನೆಗೆ ಅತಿಕ್ರಮಣ ಮಾಡಿದ ಆರೋಪದ ಮೇಲೆ ನಿತೇಶ್‌ ಪಾಂಡೆ ಎಂಬಾತನನ್ನು ಬಂಧಿಸಿ ಹರಿಯಾಣದ ಫರೀದಾಬಾದ್‌ ಜಿಲ್ಲಾ ಕಾರಾಗೃಹದಲ್ಲಿದ್ದಇರಿಸಲಾಗಿತ್ತು. ಆತನಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಆದರೆ, ಆತನ ಬಲಿಗೆ ಅದೇ ಹೆಸರು ಹೊಂದಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಜೈಲು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪೋಕ್ಸೋ ಪ್ರಕರಣದ ಆರೋಪಿ ನಿತೇಶ್‌ ಪಾಂಡೆಯನ್ನು ಬಾಲಕನೊಬ್ಬನಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 2021ರ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು. ಆತನ ವಿರುದ್ಧ ಫರೀದಾಬಾದ್‌ನ ಸದರ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆತ ತನ್ನ ಗುರುತನ್ನು ಮರೆಮಾಚಿ ಅತಿಕ್ರಮಣ ಪ್ರವೇಶ ಆರೋಪ ಎದುರಿಸುತ್ತಿದ್ದ ನಿತೇಶ್‌ ಪಾಂಡೆ ಬದಲಿಗೆ ತಾನು ಬಿಡುಗಡೆಯಾಗಿದ್ದಾನೆ.

ಆರೋಪ ಮರೆಮಾಚಿ ಜೈಲಿನಿಂದ ಹೊರಬಂದಿರುವ ಪೋಕ್ಸೋ ಆರೋಪಿ ನಿತೇಶ್‌ ಪಾಂಡೆ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿರುವ ಪೊಲೀಸರು ಶೀಘ್ರವೇ ಆತನನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

“ಗುರುತನ್ನು ಮರೆಮಾಡಿ ಬಿಡುಗಡೆ ಪಡೆದಿದ್ದಕ್ಕಾಗಿ ನಿತೀಶ್ ಪಾಂಡೆ ವಿರುದ್ಧ ನಾವು ಸದರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ” ಎಂದು ಜೈಲು ಉಪ ಅಧೀಕ್ಷಕ ವಿಕ್ರಮ್ ಸಿಂಗ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...