ನಾನಾ ಪಾಟೇಕರ್ ಸಾವಿಗೆ ಕಾರಣವೇನು? ಗೋವಾ ವೈದ್ಯಕೀಯ ಕಾಲೇಜಿನಿಂದ ಶವಪರೀಕ್ಷೆ ವರದಿ ಪ್ರಕಟ

Date:

ಹಿರಿಯ ನಟ ನಾನಾ ಪಾಟೇಕರ್ (75) ಅವರ ಸಾವಿಗೆ ಮುಖ್ಯ ಕೊರೊನರಿ ಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿ ಉಂಟಾದ ತೀವ್ರ ಹೃದಯಾಘಾತವೇ ಕಾರಣ ಎಂದು ಮರಣೋತ್ತರ ಪರೀಕ್ಷೆ ವರದಿ ಖಚಿತಪಡಿಸಿದೆ.

- Advertisement -

ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (GMCH) ಹಿರಿಯ ವೈದ್ಯರು ನೀಡಿದ ಮಾಹಿತಿಯಂತೆ, ನಾನಾ ಪಾಟೇಕರ್ ಅವರ ಹೃದಯಕ್ಕೆ ರಕ್ತ ಪೂರೈಸುವ ಮುಖ್ಯ ಕೊರೊನರಿ ಧಮನಿಯಲ್ಲಿ ರಕ್ತದ ಹೆಪ್ಪುಗಟ್ಟುವಿಕೆ ಉಂಟಾಗಿ, ರಕ್ತ ಪರಿಚಲನೆ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಇದು ನೈಸರ್ಗಿಕ ಕಾರಣದಿಂದ ಸಂಭವಿಸಿದ ಸಾವಾಗಿದೆ ಎಂದು ಶವಪರೀಕ್ಷೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನೂ ಓದಿ: ʼನಾಳೆ ನಾನು ಇರುತ್ತೇನೋ ಇಲ್ಲವೋ ಗೊತ್ತಿಲ್ಲʼ; ಸಾವಿನ ಮೂರು ದಿನಗಳ ಹಿಂದಷ್ಟೇ ಆಡಿದ್ದ ಪಾಟೇಕರ್ ಮಾತು ನಿಜವಾಯಿತಲ್ಲ!

ಅಕ್ಟೋಬರ್ 8ರಂದು ಮುಂಜಾನೆ ಗೋವಾದ ದೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿದ್ದಾಗ ನಾನಾ ಪಾಟೇಕರ್ ಅವರ ಆರೋಗ್ಯದಲ್ಲಿ ದಿಢೀರ್ ವ್ಯತ್ಯಯ ಕಂಡುಬಂದಿತ್ತು. ಅವರ ಮನೆಕೆಲಸದವರು ತಕ್ಷಣ ಆಸ್ಪತ್ರೆಗೆ ಕರೆ ಮಾಡಿ ಆಂಬ್ಯುಲೆನ್ಸ್ ತರಿಸಿದ್ದರು.

ಸಮೀಪದ ಖಾಸಗಿ ಆಸ್ಪತ್ರೆಗೆ ಸೇರಿಸಲ್ಪಟ್ಟ ನಟನಿಗೆ ವೈದ್ಯರು ಸುಮಾರು 45 ನಿಮಿಷಗಳ ಕಾಲ ಸಿಪಿಆರ್ ಸೇರಿದಂತೆ ತುರ್ತು ಜೀವ ರಕ್ಷಕ ಚಿಕಿತ್ಸೆ ನೀಡಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದರು. ಬಳಿಕ ಅವರ ಮೃತದೇಹವನ್ನು ಸಾವಿನ ನಿಖರ ಕಾರಣ ತಿಳಿಯಲು ಗೋವಾ ವೈದ್ಯಕೀಯ ಕಾಲೇಜಿಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿತ್ತು.

ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಅವರ ಮೃತದೇಹವನ್ನು ಪುಣೆಯ ಸಮೀಪವಿರುವ ಡೊಂಜೆ ಗ್ರಾಮದ ಫಾರ್ಮ್‌ಹೌಸ್‌ಗೆ ತೆಗೆದುಕೊಂಡು ಹೋಗಿ, ಮಹಾರಾಷ್ಟ್ರ ರಾಜ್ಯ ಸರ್ಕಾರದ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಬಾಲಿವುಡ್‌ನ ಪ್ರಮುಖ ಗಣ್ಯರು, ರಾಜಕಾರಣಿಗಳು ಹಾಗೂ ಕೋಟ್ಯಂತರ ಅಭಿಮಾನಿಗಳು ನಟನಿಗೆ ಅಂತಿಮ ನಮನ ಸಲ್ಲಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...

ಸಿಜೆಪಿ ಪ್ರತಿಭಟನೆ ಯಶಸ್ವಿ; 40 ಸಾವಿರ ಅರೆಸೇನಾ ಯೋಧರ ನಿಯೋಜನೆಯೇ ಸಾಕ್ಷಿ:‌ ಪ್ರಶಾಂತ್ ಕಿಶೋರ್

ಭಾರತದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆಕೊಟ್ಟಿದ್ದ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

NTA ಒಂದು ‘ಖಾಲಿ ಸಂಸ್ಥೆ’, ಮೋದಿ ಸರ್ಕಾರ ಅಹಂಕಾರ ಬಿಟ್ಟು ವರದಿ ಪರಿಗಣಿಸಲಿ: ಕಾಂಗ್ರೆಸ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ‌ (ಎನ್‌ಟಿಎ) ಮತ್ತು ಶಿಕ್ಷಣ ಸಚಿವಾಲಯದಲ್ಲಿ ಗಂಭೀರ ಸ್ವರೂಪದ...