ನಂದಿಗ್ರಾಮ ಉಪಚುನಾವಣೆ | ಕಣ್ಣಿಗೆ ಬಟ್ಟೆ ಕಟ್ಟಿ ನಾಮಪತ್ರ ಹಿಂಪಡೆಯುವಂತೆ ಬೆದರಿಕೆ: ಜೈಲಿನಿಂದ ಹೊರಬಂದ ಕಾಂಗ್ರೆಸ್ ಅಭ್ಯರ್ಥಿ ಆರೋಪ

Date:

ಪಶ್ಚಿಮ ಬಂಗಾಳದ ಹೈಪ್ರೊಫೈಲ್ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮ ಉಪಚುನಾವಣೆಯ ಅಖಾಡದ ಕಾಂಗ್ರೆಸ್ ಅಭ್ಯರ್ಥಿ ಜೈಲಿನಿಂದ ಹೊರಬರುತ್ತಿದ್ದಂತೆ ಗಂಭೀರ ಆರೋಪವನ್ನು ಮಾಡಿದ್ದಾರೆ. ಕೋಲ್ಕತ್ತಾ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್, “ತಮ್ಮನ್ನು ಪೊಲೀಸರು ಅಪಹರಿಸುವ ರೀತಿಯಲ್ಲಿ ಕರೆದೊಯ್ದು, ಕಣ್ಣಿಗೆ ಬಟ್ಟೆ ಕಟ್ಟಿ ನಾಮಪತ್ರ ಹಿಂಪಡೆಯುವಂತೆ ತೀವ್ರ ಒತ್ತಡ ಹೇರಿದ್ದರು” ಎಂದು ಆರೋಪಿಸಿದ್ದಾರೆ.

- Advertisement -

ನಂದಿಗ್ರಾಮ ಕ್ಷೇತ್ರದಲ್ಲಿ ಉಪಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಕೆಯಾದ ಬಳಿಕ ಟಿಎಂಸಿ ಅಭ್ಯರ್ಥಿ ಸಂಚಿತಾ ಡೇ ಪ್ರಧಾನ್ ಇದ್ದಕ್ಕಿದ್ದಂತೆ ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡರು. ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ಭೇಟಿಯಾದ ಬೆನ್ನಲ್ಲೇ ಟಿಎಂಸಿ ಅಭ್ಯರ್ಥಿ ತೆಗೆದುಕೊಂಡ ಈ ನಿರ್ಧಾರ ತೀವ್ರ ರಾಜಕೀಯ ಚರ್ಚೆಗೆ ಕಾರಣವಾಯಿತು. ಇದರಿಂದಾಗಿ ನಂದಿಗ್ರಾಮ ಉಪಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಕುತಂತ್ರ ಮಾಡುತ್ತಲೇ ಇದೆ ಎಂಬ ಆರೋಪಗಳು ಬಲಗೊಳ್ಳಲು ಆರಂಭಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದನ್ನೂ ಓದಿ: ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಈ ಬೆಳವಣಿಗೆ ಬೆನ್ನಲ್ಲೇ ಟಿಎಂಸಿ ನಾಯಕಿ, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರಿಗೆ ಬೆಂಬಲ ಘೋಷಿಸಿದರು. ಆದರೆ ಟಿಎಂಸಿ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ತರಾತುರಿಯಲ್ಲಿ ಮಿಲನ್ ಪ್ರಧಾನ್ ಅವರನ್ನು ಬಂಧಿಸಿದರು.

2007ರ ಅಂದರೆ ಸುಮಾರು 19 ವರ್ಷಗಳಷ್ಟು ಹಳೆಯ ನಂದಿಗ್ರಾಮ ಭೂಸ್ವಾಧೀನ ವಿರೋಧಿ ಚಳವಳಿಯ ಕಾಲದ ಗಲಭೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಕಿ ಇದ್ದ ವಾರಂಟ್ ಆಧಾರದಲ್ಲಿ ಈ ಬಂಧನ ಪ್ರಕ್ರಿಯೆ ನಡೆಸಲಾಯಿತು. ಚುನಾವಣೆಯ ಹೊತ್ತಿನಲ್ಲೇ ವಿರೋಧ ಪಕ್ಷದ ಅಭ್ಯರ್ಥಿಯನ್ನು ಮಟ್ಟಹಾಕಲು ಬಿಜೆಪಿ ಪ್ರಭಾವದಿಂದ ಪೊಲೀಸರು ಈ ರೀತಿ ಹಳೆಯ ಪ್ರಕರಣವನ್ನು ಕೆದಕಿದ್ದಾರೆ ಎಂಬ ಆಕ್ರೋಶಕ್ಕೆ ಈ ಘಟನೆ ಕಾರಣವಾಯಿತು.

ಇದೀಗ ಜೈಲಿನಿಂದ ಹೊರಬಂದ ಬಳಿಕ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡ ಮಿಲನ್ ಪ್ರಧಾನ್, ತಮ್ಮ ಅನುಭವವನ್ನು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ. ಚಾಂದಿಪುರದ ಹೋಟೆಲ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ನನ್ನನ್ನು ಸಿವಿಲ್ ಉಡುಪಿನಲ್ಲಿದ್ದ ಪೊಲೀಸರು ಬಲವಂತವಾಗಿ ಕಾರಿಗೆ ತಳ್ಳಿದರು. ನನ್ನ ಕಣ್ಣಿಗೆ ಬಟ್ಟೆ ಕಟ್ಟಲಾಯಿತು” ಎಂದು ಆರೋಪಿಸಿದ್ದಾರೆ.

“ಮಂದಾರ್‌ಮಣಿ ಬಳಿಯ ರೆಸಾರ್ಟ್‌ಗೆ ಕರೆದೊಯ್ದು ಹಿರಿಯ ಐಪಿಎಸ್ ಮತ್ತು ಡಿಎಸ್ಪಿ ಅಧಿಕಾರಿಗಳು ನನ್ನೊಂದಿಗೆ ಮಾತನಾಡಿದರು. ‘ನಿಮಗೆ ಏನು ಬೇಕೋ ಕೇಳಿ, ನಾಳೆ ಬೆಳಿಗ್ಗೆಯೇ ಸಿಗುತ್ತದೆ. ಆದರೆ ನಿಮ್ಮ ನಾಮಪತ್ರವನ್ನು ಹಿಂಪಡೆಯಿರಿ’ ಎಂದು ಆಮಿಷ ಒಡ್ಡಿದರು. ಆದರೆ ನಾನು ನನ್ನ ಸಿದ್ಧಾಂತಕ್ಕೆ ಬದ್ಧನಾಗಿದ್ದು, ನಾಮಪತ್ರ ವಾಪಸ್ ಪಡೆಯಲು ನಿರಾಕರಿಸಿದೆ. ಆ ಬಳಿಕ ರಾತ್ರಿ ಚಾಂದಿಪುರ ಪೊಲೀಸ್ ಠಾಣೆಗೆ ಕರೆತಂದು 19 ವರ್ಷ ಹಳೆಯ ಪ್ರಕರಣದಲ್ಲಿ ಬಂಧನ ಎಂದು ತೋರಿಸಿದರು” ಎಂದು ತಿಳಿಸಿದ್ದಾರೆ.

ಇನ್ನೊಂದೆಡೆ 19 ವರ್ಷ ಹಳೆಯ ಪ್ರಕರಣದಲ್ಲಿ ಚುನಾವಣೆಯ ಹೊತ್ತಿನಲ್ಲೇ ‘ತೋರಿಕೆಯ ಬಂಧನ’ ಮಾಡಿರುವ ಪೊಲೀಸ್ ಕ್ರಮವನ್ನು ಕೋಲ್ಕತ್ತಾ ಹೈಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ. ವಿಚಾರಣೆ ನಡೆಸಿದ ನ್ಯಾಯಪೀಠ, ಮಿಲನ್ ಪ್ರಧಾನ್ ಅವರಿಗೆ ಅಕ್ಟೋಬರ್ 20ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಮತ್ತು ಪ್ರಚಾರ ನಡೆಸಲು ಹಸಿರು ನಿಶಾನೆ ತೋರಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.2ಕ್ಕೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ

ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಅಬ್ದುಲ್ ಮನ್ನಾನ್...

ಸೌಜನ್ಯ ಪ್ರಕರಣ: ತಮ್ಮನ್ನು ಎಸ್‌ಐಟಿಯಿಂದ ಕೈಬಿಡುವಂತೆ ಎಎಸ್‌ಪಿ ವೆಂಕಟೇಶ್‌ ಪ್ರಸನ್ನ ಪತ್ರ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ...

ವಿಜಯಪುರ | ಸಣ್ಣಪುಟ್ಟ ವಿವಾದಗಳನ್ನು ಸೌಹಾರ್ದದಿಂದ ಬಗೆಹರಿಸಿ: ಎಸ್. ಹಾಗರಗಿ

ಪರಸ್ಪರ ಮಾತುಕತೆ, ಸಮುದಾಯ ಮಧ್ಯಸ್ಥಿಕೆಯ ಮೂಲಕ ಸಣ್ಣಪುಟ್ಟ ಸಮಸ್ಯೆಗಳನ್ನು ಗ್ರಾಮದಲ್ಲೇ ಸೌಹಾರ್ದಯುತವಾಗಿ...

ವಿಜಯಪುರ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವಾರ್ಡ್ ಮಟ್ಟದ ಸಮಿತಿ ರಚನೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಮುಂದುವರಿದಿದ್ದು, ಅರ್ಹ...