ಮೋದಿ ಪ್ರಮಾಣ ವಚನ ಸ್ವೀಕಾರ ಒಂದು ದಿನ ಮುಂದಕ್ಕೆ: ಜೂ. 9 ಕ್ಕೆ ನಿಗದಿ

Date:

ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ಭಾನುವಾರ(ಜೂ.9) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೊದಲು ಜೂನ್‌ 8 ರಂದು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ವರದಿಯಾಗಿತ್ತು.

- Advertisement -

ಹೊಸದಾಗಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಮೋದಿ ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬುಧವಾರ ನೀಡಿದ್ದಾರೆ. ರಾಷ್ಟ್ರಪತಿಯವರು ನೂತನ ಸರ್ಕಾರ ರಚನೆಯಾಗುವವರೆಗೂ ಪ್ರಧಾನಿಯಾಗಿ ಮುಂದುವರೆಯುವಂತೆ ನರೇಂದ್ರ ಮೋದಿಗೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ನಡುವೆ ತೆಲುಗು ದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಜೂನ್‌ 12 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೊದಲು ಜೂ.9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಿತ್ರಪಕ್ಷಗಳಿಗೆ ಮಣಿಯುವರೇ ಅಥವಾ ‘ಆಪರೇಷನ್ ಕಮಲ’ಕ್ಕೆ ಶರಣಾಗುವರೇ?

ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ಜೂ.9 ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿಂದ ನಾಯ್ಡು ಅವರು ಪ್ರಮಾಣ ವಚನ ದಿನಾಂಕವನ್ನು ಮುಂದೂಡಿದ್ದಾರೆ. ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ನೀಡಿದ್ದು, 17ನೇ ಲೋಕಸಭೆಯನ್ನು ರಾಷ್ಟ್ರಪತಿ ಅವರು ವಿಸರ್ಜಿಸಿದ್ದಾರೆ.

ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ಪಕ್ಷ ಟಿಡಿಪಿ ಅಭೂತಪೂರ್ವ ಯಶಸ್ಸು ಗಳಿಸಿದ್ದು, ಲೋಕಸಭೆಯಲ್ಲೂ 16 ಸ್ಥಾನ ಗೆಲ್ಲುವುದರೊಂದಿಗೆ ಎನ್‌ಡಿಎ ಒಕ್ಕೂಟದಲ್ಲಿ ಕಿಂಗ್‌ ಮೇಕರ್‌ಗಳಲ್ಲಿ ಪ್ರಮುಖ ಪಕ್ಷವಾಗಿದೆ.

ಬಿಜೆಪಿ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗಳನ್ನು ಗಳಿಸುವಲ್ಲಿ ವಿಫಲವಾದ ಕಾರಣ ಟಿಡಿಪಿ ಹಾಗೂ ಜೆಡಿಯು ಕೇಂದ್ರದ ನೂತನ ಎನ್‌ಡಿಎ ಸರ್ಕಾರದಲ್ಲಿ ಪ್ರಮುಖ ಪಾತ್ರವಹಿಸಲಿವೆ. ಸುದ್ದಿಗಾರರೊಂದಿಗೆ ಮಾತನಾಡಿದ್ದ ಚಂದ್ರಬಾಬು ನಾಯ್ಡು ತಾವು ಎನ್‌ಡಿಎದಲ್ಲಿ ಉಳಿಯುವುದಾಗಿ ತಿಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...