ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಬಿಜೆಪಿಯ ನರೇಂದ್ರ ಮೋದಿ ಅವರು 2014 ರಲ್ಲಿ ಎನ್‌ಡಿಎ ಒಕ್ಕೂಟದಿಂದ ಮೊದಲ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. 2019ರಲ್ಲಿ ಎರಡನೇ ಬಾರಿ ಹಾಗೂ 2024 ರಲ್ಲಿ ಮೂರನೇ ಬಾರಿ ಪ್ರಧಾನಿಯಾಗಿದ್ದಾರೆ.
Shri @narendramodi has taken oath as the Prime Minister of India. pic.twitter.com/BJcwUnTLt1
— PMO India (@PMOIndia) June 9, 2024
18ನೇ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ 292 ಸ್ಥಾನ ಗಳಿಸಿದರೆ, ಇಂಡಿಯಾ ಒಕ್ಕೂಟ 235 ಸ್ಥಾನ ಪಡೆದು ಉತ್ತಮ ಪೈಪೋಟಿ ನೀಡಿತ್ತು. ಬಿಜೆಪಿ 240 ಸ್ಥಾನ ಪಡೆದಿರುವ ಕಾರಣ ಬಹುಮತಕ್ಕಾಗಿ ಎನ್‌ಡಿಎ ಒಕ್ಕೂಟದ ಮಿತ್ರ ಪಕ್ಷಗಳನ್ನು ಅವಲಂಭಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಬಾರಿ ಚುನಾವಣೆಗಳು, ಸಾಮಾನ್ಯರ ಸ್ಪರ್ಧೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ
ಜವಾಹರ್ ಲಾಲ್ ನೆಹರು ನಂತರ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನೆಹರು 1947 ರಿಂದ 1962ರವರೆಗೂ 16 ವರ್ಷ 286 ದಿನಗಳ ಕಾಲ ಪ್ರಧಾನಿಯಾಗಿದ್ದರು. ಅದನ್ನು ಬಿಟ್ಟರೆ ಇಂದಿರಾ ಗಾಂಧಿ ಅವರು 11 ವರ್ಷ 59 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು.
ನರೇಂದ್ರ ಮೋದಿ ಜೊತೆಯಲ್ಲಿ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಜೆ ಪಿ ನಡ್ಡಾ, ನಿತಿನ್ ಗಡ್ಕರಿ, ಪಿಯೂಶ್ ಗೋಯಲ್ ಸೇರಿದಂತೆ 71 ನಾಯಕರು ಪ್ರಮಾಣ ವಚನ ಸ್ವೀಕರಿಸಿದ್ದರು.
#WATCH | Narendra Modi takes oath for the third straight term as the Prime Minister pic.twitter.com/Aubqsn03vF
— ANI (@ANI) June 9, 2024
ಕರ್ನಾಟಕದಿಂದ ಮಾಜಿ ಮುಖ್ಯ ಮಂತ್ರಿ ಜೆಡಿಎಸ್‌ನ ಕಾರ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, ಪ್ರಲ್ಹಾದ್ ಜೋಷಿ, ವಿ ಸೋಮಣ್ಣ, ಶೋಭಾ ಕರಂದ್ಲಾಜೆ ಹಾಗೂ ರಾಜ್ಯಸಭೆ ಸದಸ್ಯೆ ನಿರ್ಮಲಾ ಸೀತಾರಾಮನ್ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿ ಎಸ್ ಯಡಿಯೂರಪ್ಪ, ಮುರುಳಿ ಮನೋಹರ್ ಜೋಷಿ, ಚಿತ್ರ ನಟರಾದ ರಜಿನಿಕಾಂತ್, ಉದ್ಯಮಿಗಳಾದ ಮುಖೇಶ್ ಅಂಬಾನಿ, ಸಾರ್ಕ್ ಒಕ್ಕೂಟದ ರಾಷ್ಟ್ರಗಳಾದ ಶ್ರೀಲಂಕಾ, ಭೂತಾನ್, ನೇಪಾಳ, ಮಾಲ್ಡೀವ್ಸ್ ಸೇರಿದಂತೆ ನೂರಾರು ಗಣ್ಯರು ಉಪಸ್ಥಿತರಿದ್ದರು.
