ಮೋದಿ 75 ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ, ಕಿತ್ತು ಹಾಕಲಾಗುತ್ತದೆ: ಸುಬ್ರಮಣಿಯನ್ ಸ್ವಾಮಿ

Date:

ಆರ್‌ಎಸ್‌ಎಸ್‌ ನಿಯಮದಂತೆ ಪ್ರಧಾನಿ ಮೋದಿ 75ನೇ ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ ಬೇರೆ ಮಾರ್ಗದಲ್ಲಿ ಕುರ್ಚಿ ಕಳೆದುಕೊಳ್ಳುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

- Advertisement -

ಈ ಬಗ್ಗೆ ಬುಧವಾರ ಟ್ವೀಟ್‌ ಮಾಡಿರುವ ಅವರು, ” ಮೋದಿಯವರು ಆರ್‌ಎಸ್‌ಎಸ್ ಪ್ರಚಾರಕನ ಸಂಸ್ಕಾರಕ್ಕೆ ಬದ್ಧರಾಗಿ ತಮ್ಮ 75 ನೇ ವರ್ಷದ ಹುಟ್ಟುಹಬ್ಬದ ನಂತರ ಸೆಪ್ಟೆಂಬರ್ 17 ರಂದು ನಿವೃತ್ತಿ ಘೋಷಿಸಬೇಕು. ಇಲ್ಲವಾದರೆ ಬೇರೆ ವಿಧಾನಗಳಿಂದ ತಮ್ಮ ಪ್ರಧಾನಿ ಕುರ್ಚಿಯನ್ನು ಕಳೆದುಕೊಳ್ಳುತ್ತಾರೆ ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಪ್ರಧಾನಿ ನರೇಂದ್ರ ಮೋದಿ ಅವರು 1950 ಸೆಪ್ಟೆಂಬರ್‌ 17 ರಂದು ಜನಿಸಿದ್ದಾರೆ. 2024 ಸೆಪ್ಟೆಂಬರ್‌ 17 ಕ್ಕೆ 74 ವರ್ಷ ಪೂರ್ಣಗೊಂಡು 75 ನೇ ವರ್ಷಕ್ಕೆ ಕಾಲಿಡುತ್ತಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ನಿವೃತ್ತಿ ಬಗ್ಗೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌ ಮಾಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತ ಭವಿಷ್ಯಕ್ಕೆ ಅಪೌಷ್ಟಿಕತೆ ಮತ್ತು ಆಹಾರ ಭದ್ರತೆಯ ಸವಾಲು

ಪ್ರಧಾನಿ ನರೇಂದ್ರ ಮೋದಿ ಅವರು 75 ವರ್ಷ ತುಂಬಿದ ನಂತರ ನಿವೃತ್ತಿಯಾಗುವುದಿಲ್ಲ. ಅವರೇ ಪ್ರಧಾನಿಯಾಗಿ ದೇಶ ಮುನ್ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವರು ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಂದರ್ಭದಲ್ಲಿ ಹೇಳಿಕೆ ನೀಡಿದ್ದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜೈಲಿನಿಂದ ಬಿಡುಗಡೆಯಾದ ಒಂದು ದಿನದ ನಂತರ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಮೋದಿ ಅವರು 75ನೇ ವರ್ಷಕ್ಕೆ ಕಾಲಿಡುತ್ತಿದ್ದು, ಅವರ ಪಕ್ಷದ ನಿಯಮದ ಪ್ರಕಾರ 75 ವರ್ಷ ತುಂಬಿದವರು ನಿವೃತ್ತಿಯಾಗಬೇಕು ಎಂದಿದ್ದರು. 2014 ರಲ್ಲಿ ಪ್ರಧಾನಿ ಮೋದಿ ನಿಯಮ ಮಾಡಿದರು. ಹೀಗಾಗಿ ಮೋದಿ ಪ್ರಧಾನಿಯಾಗಿ ಮುಂದುವರೆಯಲು ಸಾಧ್ಯವಿಲ್ಲ. ಮೋದಿ ಬದಲು ಅಮಿತ್ ಶಾ ಪ್ರಧಾನಿಯಾಗುತ್ತಾರೆ. ಅಮಿತ್ ಶಾ ಪರವಾಗಿ ಮೋದಿ ಮತಯಾಚಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...