ಅಪ್ರಾಪ್ತ ಅಥ್ಲೀಟ್‌ ಮೇಲೆ ಲೈಂಗಿಕ ದೌರ್ಜನ್ಯ; ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

Date:

17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪದ ಮೇಲೆ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ವಿರುದ್ಧ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬೆನ್ನಲ್ಲೇ, ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

- Advertisement -

ಹರಿಯಾಣದ ಫರಿದಾಬಾದ್‌ನ ಖಾಸಗಿ ಹೋಟೆಲ್‌ನಲ್ಲಿ ಭಾರದ್ವಾಜ್ ಅವರು ಮಹಿಳಾ ಶೂಟರ್‌ನ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡುವ ನೆಪದಲ್ಲಿ ಆಕೆಯನ್ನು ತನ್ನ ಕೋಣೆಗೆ ಆಹ್ವಾನಿಸಿ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ನವದೆಹಲಿಯ ಡಾ. ಕರ್ಣಿ ಸಿಂಗ್ ಶೂಟಿಂಗ್ ರೇಂಜ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಶೂಟಿಂಗ್ ಸ್ಪರ್ಧೆಗೆ ತೆರಳುವ ವೇಳೆ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಅಪ್ತಾಪ್ತ ಮಹಿಳಾ ಶೂಟರ್‌ನ ಪೋಷಕರು ಭಾರದ್ವಾಜ್ ವಿರುದ್ಧ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಭಾರದ್ವಾಜ್ ವಿರುದ್ಧ ಫರಿದಾಬಾದ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಮತ್ತು ಬಿಎನ್‌ಎಸ್‌ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಅರಸು – ಸಿದ್ದರಾಮಯ್ಯ: ʼಬದಲಾದ ಕಾಲಘಟ್ಟದ ಪಾತ್ರʼಕ್ಕೆ ಸಿಗದ ವಿಶ್ಲೇಷಣಾ ನ್ಯಾಯ

ಪೋಷಕರ ದೂರಿನಲ್ಲಿ; “ದೌರ್ಜನ್ಯ ಘಟನೆಯನ್ನು ಬಹಿರಂಗಪಡಿಸಿದರೆ, ಆಕೆಯ ವೃತ್ತಿಜೀವನವನ್ನು ಹಾಳುಮಾಡುವುದಾಗಿ ಮತ್ತು ಆಕೆಯ ಕುಟುಂಬಕ್ಕೆ ಹಾನಿ ಮಾಡುವುದಾಗಿ ಕೋಚ್ ಬೆದರಿಕೆ ಹಾಕಿದ್ದಾರು. ಆಘಾತದಿಂದ ಮನೆಗೆ ಮರಳಿದ ಶೂಟರ್‌ ಘಟನೆಯನ್ನು ತಮ್ಮ ಬಳಿ ಹೇಳಿಕೊಂಡಿದ್ದಾರೆ” ಎಂದು ವಿವರಿಸಿವುದಾಗಿ ವರದಿಯಾಗಿದೆ.

“ಪ್ರಕರಣದ ಗಂಭೀರತೆಯನ್ನು ಗಮನಿಸಿ, ಅಪ್ರಾಪ್ತ ಬಾಲಕಿಯ ಆರೋಪಗಳನ್ನು ದೃಢೀಕರಿಸಲು ಘಟನೆ ನಡೆದ ದಿನದ ಎಲ್ಲ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ತಕ್ಷಣವೇ ಒದಗಿಸುವಂತೆ ನಾವು ಹೋಟೆಲ್ ಆಡಳಿತವನ್ನು ಕೇಳಿದ್ದೇವೆ” ಎಂದು ಫರಿದಾಬಾದ್ ಪೊಲೀಸ್‌ ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶ್ಪಾಲ್ ಯಾದವ್ ಹೇಳಿದ್ದಾರೆ.

“ಭಾರದ್ವಾಜ್ ಅವರು ಭಾರತೀಯ ರಾಷ್ಟ್ರೀಯ ರೈಫಲ್ ಸಂಘ (NRAI) ನೇಮಕ ಮಾಡಿದ 13 ರಾಷ್ಟ್ರೀಯ ಪಿಸ್ತೂಲ್ ತರಬೇತುದಾರರಲ್ಲಿ ಒಬ್ಬರಾಗಿದ್ದಾರೆ. ವಿಚಾರಣೆ ನಡೆಯುವವರೆಗೆ ಅವರನ್ನು ಎಲ್ಲ ಕರ್ತವ್ಯಗಳಿಂದ ಅಮಾನತುಗೊಳಿಸಲಾಗಿದೆ. ಅವರಿಗೆ ಯಾವುದೇ ಹೊಸ ಹುದ್ದೆ ನೀಡಲಾಗುವುದಿಲ್ಲ” ಎಂದು NRAI ಪ್ರಧಾನ ಕಾರ್ಯದರ್ಶಿ ಪವನ್ ಕುಮಾರ್ ಸಿಂಗ್ ಹೇಳಿರುವುದಾಗಿ ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...