ಜೂ.13ರೊಳಗೆ ಪ್ರಧಾನ್ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಹೋರಾಟ: ಸಿಜೆಪಿ

Date:

ನೀಟ್ (NEET), ಸಿಬಿಎಸ್‌ಇ (CBSE) ಮತ್ತು ಸಿಯುಇಟಿ (CUET) ಸೇರಿದಂತೆ ಪ್ರಮುಖ ರಾಷ್ಟ್ರೀಯ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜೂನ್ 13ರೊಳಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ವಿವಿಧ ರಾಜ್ಯಗಳು ಹಾಗೂ ನಗರಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ‘ಕಾಕ್ರೋಚ್ ಜನತಾ ಪಾರ್ಟಿ’ ಎಚ್ಚರಿಕೆ ನೀಡಿದೆ.

- Advertisement -

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ‘ಎಕ್ಸ್’ ಜಾಲತಾಣದಲ್ಲಿ ಈ ಬಗ್ಗೆ ವಿಡಿಯೊ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. “ಶನಿವಾರದೊಳಗೆ (ಜೂನ್ 13) ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೆ, ನಮ್ಮ ಹೋರಾಟ ಮತ್ತಷ್ಟು ವ್ಯಾಪಕಗೊಳ್ಳಲಿದೆ. ಅವರ ರಾಜೀನಾಮೆಗೆ ಆಗ್ರಹಿಸಿ ನಾನೇ ಖುದ್ದಾಗಿ ವಿವಿಧ ರಾಜ್ಯಗಳು ಮತ್ತು ನಗರಗಳಿಗೆ ತೆರಳಿ ಬೃಹತ್ ಪ್ರತಿಭಟನೆಗಳನ್ನು ಮುನ್ನಡೆಸಲಿದ್ದೇನೆ” ಎಂದು ಅವರು ಗುಡುಗಿದ್ದಾರೆ. ಪರೀಕ್ಷಾ ಅಕ್ರಮಗಳಿಂದಾಗಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಇದನ್ನು ಓದಿದ್ದೀರಾ? ಫಿಫಾ 2026: ಜೂನ್ 11ರಿಂದ ದಿಗ್ಗಜರ ಹಣಾಹಣಿಯ ಜಾಗತಿಕ ಹಬ್ಬ

ಈ ಹಿಂದೆ, ಜೂನ್ 6ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಅಮೆರಿಕದಿಂದ ಆಗಮಿಸಿದ್ದ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಜಮಾಯಿಸಿದ್ದ ಸಾವಿರಾರು ಯುವಜನರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಶಿಕ್ಷಣ ಸಚಿವರ ವಜಾಕ್ಕೆ ಪಟ್ಟು ಹಿಡಿದಿದ್ದರು. ದೆಹಲಿ ಪ್ರತಿಭಟನೆಯ ಬೆನ್ನಲ್ಲೇ, ಮಹಾರಾಷ್ಟ್ರದ ಶೈಕ್ಷಣಿಕ ಕೇಂದ್ರವಾದ ಪುಣೆಯಲ್ಲೂ ಸಹ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಪರೀಕ್ಷಾ ವ್ಯವಸ್ಥೆಯಲ್ಲಿನ ಈ ಗಂಭೀರ ಲೋಪಗಳಿಗೆ ಹಾಗೂ ಆಡಳಿತಾತ್ಮಕ ವೈಫಲ್ಯಗಳಿಗೆ ಶಿಕ್ಷಣ ಸಚಿವರೇ ನೇರ ಹೊಣೆ ಎಂದು ಆರೋಪಿಸಿರುವ ಸಿಜೆಪಿ, ಶೀಘ್ರವೇ ಉನ್ನತ ಮಟ್ಟದ ಸ್ವತಂತ್ರ ಹಾಗೂ ಪಾರದರ್ಶಕ ತನಿಖೆ ನಡೆಯಬೇಕು ಮತ್ತು ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿ ಪರೀಕ್ಷಾ ವ್ಯವಸ್ಥೆಯ ಪಾವಿತ್ರ್ಯತೆಯನ್ನು ಮರುಸ್ಥಾಪಿಸಬೇಕು ಎಂದು ದೃಢವಾಗಿ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು ‘ರನ್‌ಆಫ್’ ವ್ಯವಸ್ಥೆ, ಭಾರತಕ್ಕೂ ಇದು ಅಗತ್ಯವೇ?

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...