ಆಪರೇಷನ್ ಸಿಂಧೂರ ವೇಳೆ ಪಾಕಿಸ್ತಾನ ಪರ ಬೇಹುಗಾರಿಕೆ; ನೌಕಾಪಡೆ ಸಿಬ್ಬಂದಿ ಬಂಧನ

Date:

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ-ಪಾಕಿಸ್ತಾನ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಈ ವೇಳೆ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಪಾಕಿಸ್ತಾನಕ್ಕೆ ಮಾಹಿತಿ ರವಾನಿಸುತ್ತಿದ್ದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ.

- Advertisement -

ನೌಕಾಪಡೆಯ ಬಂಧಿತ ಸಿಬ್ಬಂದಿಯನ್ನು ವಿಶಾಲ್ ಯಾದವ್ ಎಂದು ಹೆಸರಿಸಲಾಗಿದೆ. ಈತ ನೌಕಾಪಡೆಯ ಕೇಂದ್ರ ಕಚೇರಿಯಲ್ಲಿ ಗುಮಾಸ್ತ ಕೆಲಸ ಮಾಡುತ್ತಿದ್ದರು. ಈತನನ್ನು ರಾಜಸ್ಥಾನ ಪೊಲೀಸ್ ಪಡೆಯ ಗುಪ್ತಚರ ವಿಭಾಗ ಬಂಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಹಲವು ವರ್ಷಗಳಿಂದ ಪಾಕಿಸ್ತಾನದ ಗುಪ್ತಚರ ಏಜೆನ್ಸಿ ‘ಐಎಸ್‌ಐ’ಗೆ ಮಾಹಿತಿ ರವಾನಿಸುತ್ತಿದ್ದರು. ಆಪರೇಷನ್ ಸಿಂಧೂರ ಬಗ್ಗೆಯೂ ಮಾಹಿತಿ ನೀಡಿದ್ದರು ಎಂದು ಆರೋಪಿಸಲಾಗಿದೆ.

ಆರೋಪಿಯ ಮೊಬೈಲ್‌ಅನ್ನು ವಶಕ್ಕೆ ಪಡೆಯಲಾಗಿದ್ದು, ಅದರಲ್ಲಿದ್ದ ಹಲವಾರು ದತ್ತಾಂಶಗಳನ್ನು ವಶಪಡಿಸಿಕೊಳ್ಳಾಗಿದೆ. ಅವುಗಳನ್ನು ವಿಶ್ಲೇಷಿಸಿದಾಗ, ಆತ ನೌಕಾಪಡೆ ಮತ್ತು ಇತರ ರಕ್ಷಣಾ ಘಟಕಗಳಿಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು. ಅದಕ್ಕೆ ಪ್ರತಿಯಾಗಿ ಹಣ ಪಡೆಯುತ್ತಿದ್ದರು ಎಂಬುದು ದೃಢಪಟ್ಟಿರುವುದಾಗಿ ಗುಪ್ತಚರ ವಿಭಾಗ ತಿಳಿಸಿದೆ.

ಈ ಲೇಖನ ಓದಿದ್ದೀರಾ?: ಇರಾನ್-ಇಸ್ರೇಲ್ ಸಂಘರ್ಷ | ಭಾರತದ ಬಾಸ್ಮತಿ ಬೆಳೆವ ರೈತರು-ರಫ್ತುದಾರರಿಗೆ ಸಂಕಷ್ಟ

“ಪಾಕಿಸ್ತಾನದ ಗುಪ್ತಚರ ಏಜೆನ್ಸಿಗಳು ನಡೆಸುವ ಬೇಹುಗಾರಿಕೆ ಚಟುವಟಿಕೆಗಳ ಮೇಲೆ ರಾಜಸ್ಥಾನ ಪೊಲೀಸ್‌ ಇಲಾಖೆಯ ಗುಪ್ತಚರ ವಿಭಾಗವು ನಿರಂತರ ನಿಗಾ ಇರಿಸಿದೆ. ಈ ವೇಳೆ, ಪಾಕ್ ಏಜೆನ್ಸಿ ಜೊತೆಗೆ ಯಾದವ್ ಸಂಪರ್ಕದಲ್ಲಿರುವುದು ಕಂಡುಬಂದಿತು. ಐಎಸ್‌ಐನ ಏಜೆಂಟ್‌ ಆಗಿದ್ದ ಪ್ರಿಯಾ ಶರ್ಮಾ ಎಂಬ ಮಹಿಳೆಯೊಂದಿಗೆ ಇಂಟರ್‌ನೆಟ್‌ನಲ್ಲಿ ಯಾದವ್‌ ಮಾಹಿತಿ ಹಂಚಿಕೊಳ್ಳುತ್ತಿದ್ದರು” ಎಂದು ಹಿರಿಯ ಅಧಿಕಾರಿ ವಿಷ್ಣುಕಾಂತ್ ಗುಪ್ತಾ ಹೇಳಿದ್ದಾರೆ.

“ಕ್ರಿಪ್ಟೊ ಕರೆನ್ಸಿಗಳ ಮೂಲಕ ಯಾದವ್ ಹಣ ಪಡೆಯುತ್ತಿದ್ದರು. ಈ ಜಾಲದಲ್ಲಿ ಇನ್ನೂ ಯಾರು ಶಾಮೀಲಾಗಿದ್ದಾರೆ ಎಂಬ ಕುರಿತು ತನಿಖೆ ನಡೆಯುತ್ತಿದೆ. ಸೋರಿಕೆಯಾಗಿರುವ ಮಾಹಿತಿಗಳ ಬಗ್ಗೆಯೂ ತನಿಖೆ ನಡೆಯಲಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...

ಸಿಎಂಆರ್‌ಎಲ್ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್ ಸೂಚನೆ

ಬಹುಚರ್ಚಿತ ₹1.72 ಕೋಟಿ ಮೊತ್ತದ ಸಿಎಂಆರ್‌ಎಲ್-ಎಕ್ಸಾಲಾಜಿಕ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ...