ಹರಿಯಾಣದ ಮುಖ್ಯಮಂತ್ರಿಯಾಗಿ ನಾಯಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕರಿಸಿದರು. 54 ವರ್ಷದ ಹಿಂದುಳಿದ ವರ್ಗದ ನಾಯಕರಾದ ಸೈನಿ ಎರಡನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಬಂಡಾರು ದತ್ತಾತ್ರೇಯ ಅವರು ಸೈನಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಅಕ್ಟೋಬರ್ 5 ರಂದು ನಡೆದಿದ್ದ ವಿದಾನಸಭೆ ಚುನಾವಣೆಯಲ್ಲಿ ಒಟ್ಟು 90 ಸ್ಥಾನಗಳಲ್ಲಿ ಬಿಜೆಪಿ 48 ಸ್ಥಾನಗಳೊಂದಿಗೆ ಗೆಲುವು ಸಾಧಿಸಿತ್ತು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
