ಹರಿಯಾಣದ ನೂತನ ಸಿಎಂ ನಯಾಬ್ ಸಿಂಗ್ ಸೈನಿ; ಸಂಜೆ ಪ್ರಮಾಣವಚನ

Date:

ಮನೋಹರ್​ ಲಾಲ್ ಖಟ್ಟರ್ ಹರಿಯಾಣದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿಯನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ (ಮಾರ್ಚ್ 12) ಸಂಜೆ 5 ಗಂಟೆಗೆ ಸೈನಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

- Advertisement -

ಮನೋಹರ್​ ಲಾಲ್ ಖಟ್ಟರ್ ರಾಜೀನಾಮೆ ಘೋಷಿಸಿದ ಬಳಿಕ ಕುರುಕ್ಷೇತ್ರ ಸಂಸದ ನಯಾಬ್ ಸಿಂಗ್ ಸೈನಿ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಚರ್ಚೆಗಳಿತ್ತು. ಈಗ ಅಧಿಕೃತವಾಗಿ ಬಿಜೆಪಿ ನಯಾಬ್ ಸಿಂಗ್‌ರನ್ನು ಆಯ್ಕೆ ಮಾಡಿದ್ದು, ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನಯಾಬ್ ಸಿಂಗ್ ಯಾರು?

ನಯಾಬ್ ಸಿಂಗ್ ಸೈನಿ ಕುರುಕ್ಷೇತ್ರದ ಸಂಸದರಾಗಿದ್ದು, ಇದೀಗ ಹರಿಯಾಣ ಬಿಜೆಪಿ ಸರ್ಕಾರದ ನೇತೃತ್ವವನ್ನು ವಹಿಸಲಿದ್ದಾರೆ. ಒಬಿಸಿ ಸಮುದಾಯಕ್ಕೆ ಸೇರಿದ ನಯಾಬ್ ಸೈನಿ, ಮನೋಹರ್ ಲಾಲ್ ಅವರ ನಿಕಟವರ್ತಿ. ನಯಾಬ್ ಸಿಂಗ್ 1996 ರಲ್ಲಿ ಬಿಜೆಪಿಯೊಂದಿಗೆ ತನ್ನ ರಾಜಕೀಯ ಪಯಣ ಆರಂಭಿಸಿದ್ದು, 2002ರಲ್ಲಿ ಬಿಜೆಪಿ ಯುವಮೋರ್ಚಾ ಅಂಬಲದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದರು, 2005ರಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದರು.

2009 ರಲ್ಲಿ ಹರಿಯಾಣದ ಬಿಜೆಪಿ ಕಿಸಾನ್ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. 2014ರಲ್ಲಿ ನಾರಾಯಣ ಘರ್ ಕ್ಷೇತ್ರದಿಂದ ಶಾಸಕರಾದ ನಯಾಬ್ 2019ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಕುರುಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಈಗ ಹರಿಯಾಣದ ಮುಖ್ಯಮಂತ್ರಿ ಗದ್ದುಗೆ ಏರುತ್ತಿದ್ದಾರೆ.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಹಾಗೂ ಇವರ ಸಂಪುಟ ಸಚಿವರು ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಸಭಾ ಚುನಾವಣೆಗೆ ಮಿತ್ರಪಕ್ಷ ಜನನಾಯಕ ಜನತಾ ಪಕ್ಷದೊಂದಿಗೆ (ಜೆಜೆಪಿ) ಸೀಟು ಹಂಚಿಕೆ ಮಾತುಕತೆ ಮುರಿದುಬಿದ್ದ ಹಿನ್ನೆಲೆ ಈ ಬೆಳವಣಿಗೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...