ಅಜಿತ್‌ ಪವಾರ್‌ ಸೇರಿ 9 ಶಾಸಕರ ವಿರುದ್ಧ ಅನರ್ಹತೆ ಕೋರಿ ಸ್ಪೀಕರ್‌ಗೆ ಎನ್‌ಸಿಪಿ ಮನವಿ

Date:

  • ಉಪಮುಖ್ಯಮಂತ್ರಿಯಾಗಿ ಅಜಿತ್‌ ಪ್ರಮಾಣ
  • 1999ರಲ್ಲಿ ಎನ್‌ಸಿಪಿ ಸ್ಥಾಪಿಸಿದ ಶರದ್‌ ಪವಾರ್

ಅಜಿತ್‌ ಪವಾರ್‌ ತಮ್ಮ ಬೆಂಬಲಿತ ಎಂಟು ಶಾಸಕರ ಜೊತೆ ಬಂಡಾಯವೆದ್ದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಸರ್ಕಾರ ಸೇರಿದ ನಂತರ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.

- Advertisement -

ಒಂಬತ್ತು ಮಂದಿ ಶಾಸಕರ ವಿರುದ್ಧ ಅನರ್ಹತೆಯ ಅಸ್ತ್ರ ಪ್ರಯೋಗಿಸಲು ಎನ್‌ಸಿಪಿ ತೀರ್ಮಾನಿಸಿದೆ. ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಎನ್‌ಸಿಪಿ ವಿಧಾನ ಸಭಾಧ್ಯಕ್ಷರಿಗೆ ಮನವಿ ಮಾಡಿದೆ ಎಂದು ಸೋಮವಾರ (ಜುಲೈ 3) ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಬಗ್ಗೆ ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಜಯಂತ್ ಪಾಟೀಲ್ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, “ಅಜಿತ್‌ ಮತ್ತು ಇತರ ಶಾಸಕರ ಅನರ್ಹತೆ ಕುರಿತ ಅರ್ಜಿಯನ್ನು ಸಭಾಧ್ಯಕ್ಷ ರಾಹುಲ್ ನಾರ್ವೇಕರ್ ಅವರಿಗೆ ಸಲ್ಲಿಸಲಾಗಿದೆ” ಎಂದು ತಿಳಿಸಿದರು.

“ಎನ್‌ಸಿಪಿಯ ನಿರ್ಧಾರ ಕೈಗೊಳ್ಳುವ ಅಧಿಕಾರ ಶರದ್ ಪವಾರ್ ಬಳಿಯೇ ಇದೆ ಎಂದು ತಿಳಿಸುವ ಇ-ಮೇಲ್ ಸಂದೇಶವನ್ನು ಭಾರತದ ಚುನಾವಣಾ ಆಯೋಗಕ್ಕೂ ಕಳುಹಿಸಲಾಗಿದೆ” ಎಂದು ಜಯಂತ್‌ ಪಾಟೀಲ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ವೈಫಲ್ಯಗಳನ್ನು ಬೇರೆಡೆ ಸೆಳೆಯಲು ಜನರ ದಿಕ್ಕು ತಪ್ಪಿಸುತ್ತಿರುವ ಪ್ರಧಾನಿ: ಕಾಂಗ್ರೆಸ್ ಆಕ್ರೋಶ

ಮಹಾರಾಷ್ಟ್ರ ರಾಜಕೀಯದಲ್ಲಿ ಭಾನುವಾರ ಹಠಾತ್‌ ಬೆಳವಣಿಗೆಯಾಯಿತು. ಎನ್‌ಸಿಪಿಯ ಅಜಿತ್‌ ಪವಾರ್‌ ಅವರು ಇತರ ಎಂಟು ಶಾಸಕರೊಂದಿಗೆ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನಾ ಮತ್ತು ಬಿಜೆಪಿ ಸರ್ಕಾರವನ್ನು ಸೇರಿದರು.

ಬಳಿಕ ಅಜಿತ್‌ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶರದ್‌ ಪವಾರ್‌ ಅವರು 1999ರಲ್ಲಿ ಎನ್‌ಸಿಪಿ ಸ್ಥಾಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...