ಎನ್‍ಸಿಪಿ ಶಾಸಕ ರೋಹಿತ್ ಪವಾರ್ ಪಿಎ ಮಗಳು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆ

Date:

ಮಹಾರಾಷ್ಟ್ರದ ಬಾರಾಮತಿಯಲ್ಲಿ ಎನ್‌ಸಿಪಿ (ಶರದ್ ಪವಾರ್ ಬಣ) ಶಾಸಕ ರೋಹಿತ್ ಪವಾರ್ ಅವರ ಆಪ್ತ/ಪಿಎ (ಖಾಸಗಿ ಸಹಾಯಕ) ಅವರ 12 ವರ್ಷದ ಪುತ್ರಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈ ಘಟನೆಯಿಂದಾಗಿ ಬಾರಾಮತಿ ವ್ಯಾಪ್ತಿಯಲ್ಲಿ ತೀವ್ರ ಸಂಚಲನ ಉಂಟಾಗಿದೆ.

- Advertisement -

ಬಾರಾಮತಿ ತಹಸಿಲ್‌ನ ರೂಯಿ ಗ್ರಾಮದ ಸಾಯಿ ಗಣೇಶ್ ನಗರ ಪ್ರದೇಶದ ಕಾಲುವೆ (ನಾಲೆ) ಬಳಿ ಭಾನುವಾರ ಬೆಳಿಗ್ಗೆ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಮೃತ ಬಾಲಕಿಯನ್ನು ಶಾಸಕ ರೋಹಿತ್ ಪವಾರ್ ಅವರ ಪಿಎ ಅಜಿತ್ ದಶಾವತಾರೆ ಅವರ ಪುತ್ರಿ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಿರುಪತಿ ಕೇಶಮುಂಡನ : ಭಕ್ತರ ನಂಬಿಕೆಯೂ, ಕೋಟ್ಯಂತರ ರೂಪಾಯಿ...

ಕೂದಲಿನ ಸೌಂದರ್ಯ ಪ್ರಜ್ಞೆ, ತಳಮಳಗಳ ಭಾವನೆಗಳೇ ಇಂದು ಜಾಗತಿಕವಾಗಿ ಕೋಟ್ಯಂತರ ರೂಪಾಯಿ ಉದ್ದಿಮೆಗಳಿಗೆ ಮೂಲ ಬಂಡವಾಳವಾಗಿದೆ. ಭಾರತದಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಅದು ಭಕ್ತಿಯ ರೂಪವನ್ನೂ ಪಡೆದುಕೊಂಡಿದೆ. ಅದಕ್ಕೆ ಉದಾಹರಣೆಯೆಂದರೆ...

“ನಾನು ಬಿಜೆಪಿಯ ಗುಲಾಮನಲ್ಲ, ಅಂಬೇಡ್ಕರ್‌ವಾದಿ”- ರಾಮದಾಸ್‌ ಅಠಾವಳೆ ಹೇಳಿಕೆಯ...

ತಾವು ಬಿಜೆಪಿಯ ಸದಸ್ಯರಲ್ಲ, ಕೇವಲ ಅಂಬೇಡ್ಕರ್‌ವಾದಿ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ನೀಡಿರುವ ಹೇಳಿಕೆ ರಾಷ್ಟ್ರ ರಾಜಕಾರಣದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಕಾಂಗ್ರೆಸ್ ಸ್ಪಂದಿಸದ ಕಾರಣಕ್ಕೆ ಎನ್‌ಡಿಎ ಸೇರಿದೆ ಎನ್ನುತ್ತಾರೆ...

ಬರಗಾಲ | ಕಾಡಿನಿಂದ ನಾಡಿನತ್ತ ವನ್ಯಜೀವಿಗಳು: ಮನುಷ್ಯರ ಜೀವಕ್ಕೆ...

ಹಳೇ ಮೈಸೂರು ಕಾಡು ಪ್ರಾಣಿಗಳ ಆವಾಸಸ್ಥಾನ. ಆದರೆ, ಇಂದು ಆ ಕಾಡಿನಂಚಿನಲ್ಲಿ ಬದುಕುತ್ತಿರುವ ಮನುಷ್ಯರಿಗೂ ಕಾಡಿನೊಳಗಿನ ವನ್ಯಜೀವಿಗಳಿಗೂ ನಡುವಿನ ಅಂತರ ಕಡಿಮೆಯಾಗುತ್ತಿದೆ. ಆಹಾರ ಮತ್ತು ನೀರು ಅರಸಿ ಕಾಡಿನಿಂದ ನಾಡಿನತ್ತ ಬರುತ್ತಿರುವ ಆನೆ,...

ಇದನ್ನೂ ಓದಿ: ಚಿಕ್ಕಮಗಳೂರು | ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ 

ಶನಿವಾರದಂದು ಬಾಲಕಿಯು ಯಾವುದೋ ವಿಚಾರಕ್ಕೆ ತನ್ನ ತಾಯಿಯೊಂದಿಗೆ ಜಗಳವಾಡಿ ಕೋಪದಿಂದ ಮನೆಯಿಂದ ಹೊರಟು ಹೋಗಿದ್ದಳು. ಬಾಲಕಿ ಬಹಳ ಹೊತ್ತಾದರೂ ಮನೆಗೆ ಹಿಂತಿರುಗದಿದ್ದಾಗ, ಆತಂಕಗೊಂಡ ಕುಟುಂಬಸ್ಥರು ತಕ್ಷಣವೇ ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ದೂರು ದಾಖಲಿಸಿದ್ದರು.

ಆದರೆ ಭಾನುವಾರ ಬೆಳಿಗ್ಗೆ ಮನೆಯ ಸಮೀಪದಲ್ಲೇ ಮೃತದೇಹ ಪತ್ತೆಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ವಿಧಿವಿಜ್ಞಾನ (Forensic) ತಂಡ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿವೆ. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬಾರಾಮತಿಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO), “ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳು, ಕಾಲ್ ಡಿಟೇಲ್ಸ್ ಮತ್ತು ಇತರೆ ಡಿಜಿಟಲ್ ಪುರಾವೆಗಳನ್ನು ಪರಿಶೀಲಿಸಲಾಗುತ್ತಿದೆ. ಆತ್ಮಹತ್ಯೆ ಸೇರಿದಂತೆ ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ನಿಖರ ಕಾರಣ ತಿಳಿಯಲಿದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಕ್ಷಾಂತರ ನಿಷೇಧ ಕಾಯ್ದೆ ಸುಧಾರಣೆಗಾಗಿ ಪಿಐಎಲ್‌; ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಪಕ್ಷಾಂತರ ನಿಷೇಧ ಕಾಯ್ದೆಯ ಚೌಕಟ್ಟಿನಲ್ಲಿ ಸಮಗ್ರ ಸುಧಾರಣೆಗಳನ್ನು ತರಬೇಕೆಂದು ಕೋರಿ ಸಲ್ಲಿಸಲಾಗಿರುವ...

ಸರ್ಕಾರಿ ಶಾಲೆಯಲ್ಲಿ ದಲಿತ ಸಿಬ್ಬಂದಿ ಮೇಜಿನ ಮೇಲೆ ಮಲ ವಿಸರ್ಜನೆ ಆರೋಪ; ಭುಗಿಲೆದ್ದ ಆಕ್ರೋಶ

ವೈಜ್ಞಾನಿಕ ಚಿಂತನೆ, ಸಾಮಾಜಿಕ ಅರಿವು, ಸಮಾನತೆ-ಸಹಬಾಳ್ವೆಯ ಪಾಠ ಕಲಿಸುವ ಶಿಕ್ಷಣ ಸಂಸ್ಥೆಗಳಲ್ಲೇ...

ಹೂಡಿಕೆ ಆಕರ್ಷಣೆ; ಬೆಂಗಳೂರಿನಿಂದ ಹೊರಗೂ ಕೈಗಾರಿಕಾ ಬೆಳವಣಿಗೆಗೆ ಬದ್ಧ: ಸಿಎಂ‌ ಡಿ ಕೆ‌ ಶಿವಕುಮಾರ್

ರಾಜ್ಯದಲ್ಲಿ ಹೂಡಿಕೆ ಆಕರ್ಷಸಿ, ಬೆಂಗಳೂರಿನಿಂದ ಹೊರಗೂ ಕೈಗಾರಿಕಾ ಬೆಳವಣಿಗೆಗೆ ಬದ್ಧವಾಗಿದ್ದೇವೆ ಎಂದು...

100 ವರ್ಷಗಳ ಸಹಾರನ್‌ಪುರ ಮಸೀದಿ ಧ್ವಂಸ: ಅರ್ಜಿ ವಿಚಾರಣೆಗೆ ‘ಸುಪ್ರೀಂ’ ನಕಾರ; ಹೈಕೋರ್ಟ್ ಮೊರೆ ಹೋಗಲು ಸೂಚನೆ

ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲೆಯಲ್ಲಿ 100 ವರ್ಷಗಳಷ್ಟು ಹಳೆಯದಾದ ಮಸೀದಿಯನ್ನು ಧ್ವಂಸಗೊಳಿಸಿರುವುದು,...