ಎನ್‌ಸಿಪಿಐ ಜೊತೆ ಟಿಎಂಸಿ ಬಂಡಾಯ ಬಣ ವಿಲೀನ; ಕಾನೂನು ಸಲಹೆ ಪಡೆಯಲು‌ ಲೋಕಸಭಾ ಸ್ಪೀಕರ್ ಚಿಂತನೆ

Date:

ಟಿಎಂಸಿಯಲ್ಲಿ ಬಂಡಾಯ ಎದ್ದಿರುವ ಸಂಸದರು ತಮ್ಮ ಬಣವನ್ನು ತ್ರಿಪುರಾದ ಅತೀ ಸಣ್ಣ ಪಕ್ಷವಾದ ‘ಎನ್‌ಸಿಪಿಐ’ ಜೊತೆ ವಿಲೀನ ಮಾಡಲು ಮುಂದಾಗಿದ್ದಾರೆ. ಅದಕ್ಕಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇದು ಅಧಿಕೃತ ಟಿಎಂಸಿ ಮತ್ತು ಬಂಡಾಯ ಬಣದ ನಡುವೆ ಕಾನೂನು ಹೋರಾಟ ನಡೆಯುವ ಸಾಧ್ಯತೆಯನ್ನು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ, ಎನ್‌ಸಿಪಿಐ ಜೊತೆ ಟಿಎಂಸಿಯ ಬಂಡಾಯ ಬಣದ ವಿಲೀನಕ್ಕೆ ಸಮ್ಮತಿ‌ನೀಡುವ ಬಗ್ಗೆ ಓಂ ಬಿರ್ಲಾ ಅವರು ಕಾನೂನು ಸಲಹೆ ಪಡೆದುಕೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

- Advertisement -

ಜುಲೈ ಮೂರನೇ ವಾರದಲ್ಲಿ ಆರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಟಿಎಂಸಿ ಬಂಡಾಯ ಗುಂಪಿನ ಬೇಡಿಕೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಟಿಎಂಸಿ ಬಣ ಮತ್ತು ಎನ್‌ಸಿಪಿಐ ವಿಲೀನಕ್ಕೆ‌ಸ್ಪೀಕರ್ ಅವಕಾಶ ನೀಡಿದರೆ ಮತ್ತು‌ ಅದನ್ನು ಅಧಿಕೃತ ಟಿಎಂಸಿ ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ, ಏನೆಲ್ಲ ಮಾಡಬೇಕು ಎಂಬುದರ ಬಗ್ಗೆ ಕಾನೂನು ಸಚಿವಾಲಯದಿಂದ ಓಂ ಬಿರ್ಲಾ ಅವರು ಲಿಖಿತ‌ ಸಲಹೆ ಪಡೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

“ರಾಜಕೀಯ ಪಕ್ಷದ ನಾಯಕತ್ವವು ಮತ್ತೊಂದು ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದರೆ, ಅದರ ಶಾಸಕರು ಮತ್ತು ಸಂಸದರು ಆ ವಿಲೀನಕ್ಕೆ ಒಪ್ಪಿಕೊಳ್ಳಬೇಕಾಗುತ್ತದೆ. ಆದರೆ ಸಂಸದರು ಅಥವಾ ಶಾಸಕರು ಮಾತ್ರವೇ ಮತ್ತೊಂದು ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ಸಾಧ್ಯವಿಲ್ಲ.. ಇದು ಸಾಂವಿಧಾನಿಕ ನಿಯಮವಾಗಿದೆ” ಎಂದು ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಮತ್ತು ಸಂವಿಧಾನ ತಜ್ಞ ಪಿ.ಡಿ.ಟಿ. ಆಚಾರಿ ಹೇಳಿದ್ದಾರೆ.

ಮತ್ತೊಂದೆಡೆ, ಎನ್‌ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಶಂತನು ಡೇ ಮಾತನಾಡಿ, “ಪಕ್ಷದ ಅಧ್ಯಕ್ಷರು ಇತರ ಪದಾಧಿಕಾರಿಗಳೊಂದಿಗೆ ಯಾವುದೇ ವಿಲೀನ ಪ್ರಸ್ತಾಪದ ಬಗ್ಗೆ ಚರ್ಚಿಸಿಲ್ಲ. ಈ ನಿರ್ಧಾರಕ್ಕೆ ಸಾಂಸ್ಥಿಕ ಅನುಮೋದನೆ ಇಲ್ಲ. ಪಕ್ಷದ ಅಧ್ಯಕ್ಷರು ಪಕ್ಷದೊಳಗೆ ವಿಲೀನದ ಬಗ್ಗೆ ಎಂದಿಗೂ ಮಾತನಾಡಿಲ್ಲ. ಇಂತಹ ನಿರ್ಧಾರಗಳನ್ನು ಅವರೊಬ್ಬರೇ ತೆಗೆದುಕೊಳ್ಳಲು ಸಾಧ್ಯವಿಲ್ಲ,” ಎಂದು ಹೇಳಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಮಲನಗರ | ಗುಳೆ ಹೋಗಬೇಡಿ, ಊರಲ್ಲಿಯೇ ವಿಬಿ-ಜಿ ರಾಮ್‌ ಜಿ ಕೆಲಸ ಮಾಡಿ

ಕೂಲಿ ಕಾರ್ಮಿಕರು ಗುಳೆ ಹೋಗದೆ ತಮ್ಮ ಗ್ರಾಮದಲ್ಲಿಯೇ ವಿಬಿ-ಜಿ ರಾಮ್‌ ಜಿ...

ಶಿವಮೊಗ್ಗ | ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ; ಮನೆಗೆ ತೆರಳಿ ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ

ಸರಳತೆ, ಜನಪರ ಕಾಳಜಿ ಮತ್ತು ಹೋರಾಟದ ಬದುಕಿನ ಪ್ರತೀಕವಾಗಿರುವ ಕಾಂಗ್ರೆಸ್‌ನ ಹಿರಿಯ...

ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್‌ನ ‘ಕಾಯಿಸುವ ಧೋರಣೆ’ಗೆ ಆಕಾಶ್ ಚೋಪ್ರಾ ಕಿಡಿ

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರನ್ನು...

ಈ ದಿನ ಸಂಪಾದಕೀಯ | ದಮನಕ್ಕೆ ಮಣಿಯದೆ ಪ್ರಜಾಪ್ರಭುತ್ವದ ಹಕ್ಕು ಗೆದ್ದ ಜಾಮಿಯಾ ಯುವಶಕ್ತಿ!

ಇಪ್ಪತ್ತು ವರ್ಷಗಳಿಂದ ಕಸಿದುಕೊಳ್ಳಲಾಗಿದ್ದ ವಿದ್ಯಾರ್ಥಿ ಸಂಘದ ಚುನಾವಣೆಯ ಹಕ್ಕನ್ನು ಮರಳಿ ಪಡೆಯಲು...