ಲೋಕಸಭಾ ಚುನಾವಣೆ | ಈಗಾಗಲೇ 200 ಸ್ಥಾನಗಳನ್ನು ಎನ್‌ಡಿಎ ತಲುಪಿದೆ: ಗೃಹ ಸಚಿವ ಅಮಿತ್ ಶಾ

Date:

Advertisements

ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಮೇ 13ರ ಸೋಮವಾರ ನಡೆಯಲಿದೆ. ರಾಜ್ಯ-ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಒಟ್ಟು 10 ರಾಜ್ಯಗಳ 96 ಲೋಕಸಭಾ ಕ್ಷೇತ್ರಗಳ ಚುನಾವಣೆ ನಡೆಯಲಿದೆ. ಈ ಚುನಾವಣಾ ಪ್ರಕ್ರಿಯೆಗೆ ಕೆಲವೇ ಗಂಟೆಗಳಿರುವಾಗ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಎನ್‌ಡಿಎ ಮೈತ್ರಿಕೂಟವು ಮೂರು ಹಂತಗಳಲ್ಲಿ 200ರಷ್ಟು ಸ್ಥಾನಗಳನ್ನು ತಲುಪಿದೆ” ಎಂದು ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಮಾತನಾಡಿದ ಅವರು, “ಲೋಕಸಭಾ ಚುನಾವಣೆಯ ಮೂರು ಹಂತಗಳಲ್ಲಿ ಎನ್‌ಡಿಎ ಮೈತ್ರಿಕೂಟವು ಸುಮಾರು 200 ಸ್ಥಾನಗಳನ್ನು ತಲುಪಿದೆ. 4ನೇ ಹಂತ ಕೂಡ ಎನ್‌ಡಿಎ ಪರವಾದ ವಾತಾವರಣವಿದೆ. ಈ ಹಂತದಲ್ಲೂ ನಾವು ಗರಿಷ್ಠ ಯಶಸ್ಸನ್ನು ಪಡೆಯುವ ವಿಶ್ವಾಸವಿದೆ. ಇದರೊಂದಿಗೆ ನಿಶ್ವಯವಾಗಿಯೂ 400 ಸೀಟನ್ನು ದಾಟುವ ಗುರಿಯ ಹತ್ತಿರ ಹೋಗಲಿದ್ದೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಆಂಧ್ರಪ್ರದೇಶ ಮತ್ತು ತೆಲಂಗಾಣ ಎರಡರಲ್ಲೂ ಎನ್‌ಡಿಎ ಕ್ಲೀನ್‌ಸ್ವೀಪ್ ಸಾಧಿಸಲಿದೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ. ತೆಲಂಗಾಣದಲ್ಲಿ ನಾವು 10ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದ್ದೇವೆ. ಜೂನ್ 4ರಂದು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಹಾಗೂ ಕೇರಳ ಸೇರಿದಂತೆ ದಕ್ಷಿಣದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಬಿಜೆಪಿ ಹೊರಹೊಮ್ಮಲಿದೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ.

Advertisements

“ಒಂದೆಡೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಭ್ರಷ್ಟಾಚಾರ ಮತ್ತು 12 ಲಕ್ಷ ಕೋಟಿ ರೂ.ಗಳ ಹಗರಣಗಳಲ್ಲಿ ಭಾಗಿಯಾಗಿದ್ದರೆ, ಮತ್ತೊಂದೆಡೆ, ಭ್ರಷ್ಟಾಚಾರದ ಆರೋಪ ಮಾಡದ ನರೇಂದ್ರ ಮೋದಿ ಇದ್ದಾರೆ. 23 ವರ್ಷ ಮುಖ್ಯಮಂತ್ರಿಯಾಗಿದ್ದರೂ, 10 ವರ್ಷ ಪ್ರಧಾನಿಯಾಗಿದ್ದರೂ ಸಹ 25 ಪೈಸೆಯ ಭ್ರಷ್ಟಾಚಾರ ಆರೋಪ ಅವರ ಮೇಲಿಲ್ಲ” ಎಂದು ಅಮಿತ್ ಶಾ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಮುಸ್ಲಿಮರ ಜನಸಂಖ್ಯೆಯನ್ನು ತೋರಿಸಲು ಪಾಕಿಸ್ತಾನದ ಧ್ವಜ ಬಳಸಿದ ‘ಸುವರ್ಣ ನ್ಯೂಸ್‌ ಕನ್ನಡ’!

“ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆ, ನಕ್ಸಲ್ ಚಟುವಟಿಕೆ ಹಾಗೂ ಉಗ್ರ ಕೃತ್ಯಗಳನ್ನು ಮಾಡುವುದಕ್ಕೆ ಕಡಿವಾಣ ಹಾಕುವುದರಲ್ಲಿ ಮೋದಿ ನೇತೃತ್ವದ ಸರ್ಕಾರ ಯಶಸ್ವಿಯಾಗಿದೆ. ಡಿಜಿಟಲ್ ಇಂಡಿಯಾದ ಮೂಲಕ ಭಾರತದ ಆರ್ಥಿಕತೆಯನ್ನು ಉನ್ನತಮಟ್ಟಕ್ಕೆ ಏರಿಸಲಾಗಿದೆ” ಎಂದು ಹೇಳಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X