ನವದೆಹಲಿಯ ಪಾಕಿಸ್ತಾನ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಯೊಬ್ಬರನ್ನು ತಮ್ಮ ಕಚೇರಿಯ ಹೊರಗೆ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕೆ ಕೇಂದ್ರ ಸರ್ಕಾರ 24 ಗಂಟೆಗಳಲ್ಲಿ ದೇಶವನ್ನು ತೊರೆಯುವಂತೆ ಸೂಚಿಸಿದೆ ಎಂದು ವಿದೇಶಾಂಗ ಸಚಿವಾಲಯದ (ಎಂಇಎ) ಹೇಳಿಕೆ ತಿಳಿಸಿದೆ.
“ಭಾರತ ಸರ್ಕಾರವು ನವದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು ಭಾರತದಲ್ಲಿನ ಅವರ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಈ ಆದೇಶ ನೀಡಲಾಗಿದೆ. ಆ ಅಧಿಕಾರಿಯನ್ನು 24 ಗಂಟೆಗಳ ಒಳಗೆ ಭಾರತವನ್ನು ತೊರೆಯುವಂತೆ ಸೂಚಿಸಲಾಗಿದೆ” ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ.
ಆದಾಗ್ಯೂ, ಅಧಿಕಾರಿಯ ಗುರುತು ಮತ್ತು ಆಪಾದಿತ ದುಷ್ಕೃತ್ಯದ ವಿವರಗಳನ್ನು ಸರ್ಕಾರ ಬಹಿರಂಗಪಡಿಸಿಲ್ಲ.