ರಾಜಸ್ಥಾನ | ಉದ್ಯೋಗ ನೀಡುವ ನೆಪದಲ್ಲಿ 20 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

Date:

Advertisements

ಉದ್ಯೋಗ ನೀಡುವ ನೆಪದಲ್ಲಿ 20 ಮಹಿಳೆಯದ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನುಷ ಘಟನೆ ರಾಜಸ್ಥಾನದ ಸಿರೋಹಿಯಲ್ಲಿ ವರದಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪುರಸಭೆಯ ಅಧ್ಯಕ್ಷ ಹಾಗೂ ಮಾಜಿ ಪುರಸಭೆಯ ಆಯುಕ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರ ಪ್ರಕರಣದ ಆರೋಪಿಗಳಾದ ಪುರಸಭೆಯ ಅಧ್ಯಕ್ಷ ಮಹೇಂದ್ರ ಮೇವಾಡ ಹಾಗೂ ಮಾಜಿ ಪುರಸಭೆಯ ಆಯುಕ್ತ ಮಹೇಂದ್ರ ಚೌಧರಿ ಪೊಲೀಸರ ವಶದಲ್ಲಿದ್ದಾರೆ. ಇವರ ಮೇಲೆ ಅಂಗನವಾಡಿಯಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 20 ಮಹಿಳೆಯರ ಮೇಲೆ ಅತ್ಯಾಚಾರವೆಸಗಿರುವ ಆರೋಪ ಹೊರಿಸಿಲಾಗಿದೆ.

ಪಾಲಿ ಜಿಲ್ಲೆಯ ಮಹಿಳೆಯೊಬ್ಬರು ಪೊಲೀಸರನ್ನು ಸಂಪರ್ಕಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ‘ಉದ್ಯೋಗ ನೀಡುವ ನೆಪದಲ್ಲಿ 20 ಇತರ ಮಹಿಳೆಯರ ಮೇಲೆ ಅತ್ಯಾಚಾರವೆಸಗಲಾಗಿದೆ’ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

Advertisements

ಆರೋಪಿಗಳು ಲೈಂಗಿಕ ದೌರ್ಜನ್ಯದ ಅಮಾನುಷ ಕೃತ್ಯವನ್ನು ಚಿತ್ರೀಕರಿಸಿ, ಸಾಮಾಜಿಕ ಮಾಧ್ಯಮಗಳಲ್ಲಿ ದೃಶ್ಯಗಳನ್ನು ಬಿಡುಗಡೆ ಮಾಡುವುದಾಗಿ ಸಂತ್ರಸ್ತೆಯರಿಗೆ ಬೆದರಿಕೊಯೊಡ್ಡಿದ್ದಾರೆ. ಪ್ರತಿಯೊಬ್ಬ ಸಂತ್ರಸ್ತ ಮಹಿಳೆಯಿಂದಲೂ ₹5 ಲಕ್ಷ ಹಣದ ಬೇಡಿಕೆಯಿಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ

ದೂರು ನೀಡಿರುವ ಮಹಿಳೆ ಇತರ ಮಹಿಳೆಯರ ಜೊತೆ ಅಂಗನವಾಡಿಯಲ್ಲಿ ಕೆಲಸದ  ನಿಮಿತ್ತ ಕೆಲ ತಿಂಗಳ ಹಿಂದೆ ಸಿರೋಹಿಗೆ ಪ್ರಯಾಣಿಸಿದ್ದರು. ಆಗ ಆರೋಪಿಯನ್ನು ಭೇಟಿಯಾಗುವ ಸಂದರ್ಭ ಬಂದಿದ್ದು, ಆತ ಮಹಿಳೆಯರಿಗೆ ಊಟ ಮತ್ತು ವಸತಿ ವ್ಯವಸ್ಥೆ ಒದಗಿಸಿದ್ದಾರೆ.

ಊಟದಲ್ಲಿ ತಮಗೆ ಮತ್ತು ಬರುವ ಔಷಧಿ ಬೆರಸಿ ನಂತರ ಲೈಂಗಿಕವಾಗಿ ದೌರ್ಜನ್ಯ ನಡೆಸುತ್ತಿದ್ದರು ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

ಪ್ರಜ್ಞೆಗೆ ಮರಳಿದ ನಂತರ ಆರೋಪಿಗಳನ್ನು ಈ ಬಗ್ಗೆ ವಿಚಾರಿಸಿದರೆ, ತಮ್ಮ ಸ್ವಂತ ಉದ್ದೇಶಗಳನ್ನು ಈಡೇರಿಸಿಕೊಳ್ಳಲು ದೌರ್ಜನ್ಯ ಎಸಗಿರುವುದಾಗಿ ಹೇಳಿದರು. ತಮ್ಮ ಬೇಡಿಕೆಗಳನ್ನು ಈಡೇರಿಸುವ ಜೊತೆಗೆ ದೈಹಿಕ ಸಂಬಂಧ ಮುಂದುವರಿಸುವಂತೆ ಆರೋಪಿಗಳು ಒತ್ತಾಯಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅತ್ಯಾಚಾರಕ್ಕೆ ಒಳಗಾದ ಮಹಿಳೆಯರು ದೂರು ದಾಖಲಿಸಿದ ನಂತರವೂ ಪೊಲೀಸರು ವಿಚಾರಣೆ ನಡೆಸಿರಲಿಲ್ಲ. ಮಹಿಳೆಯರ ಮೇಲೆ ಸುಳ್ಳು ದೂರು ದಾಖಲಿಸಿರುವ ಆರೋಪ ಹೊರಿಸಲಾಗಿತ್ತು. ನಂತರ ರಾಜಸ್ಥಾನ ಹೈಕೋರ್ಟ್‌ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿತ್ತು.

ಪೊಲೀಸ್ ಉಪ ವರಿಷ್ಠಾಧಿಕಾರಿ ಪಾರಸ್‌ ಚೌಧರಿ, “ಈ ಮಹಿಳೆ ಈ ಮೊದಲು ಸುಳ್ಳು ದೂರು ದಾಖಲಿಸಿದ್ದರು. ಆದಾಗ್ಯೂ ರಾಜಸ್ಥಾನ ಹೈಕೋರ್ಟ್ ಎಂಟು ಮಹಿಳೆಯರ ಅರ್ಜಿಯ ಆಧಾರದ ಮೇಲೆ ಪ್ರಕರಣ ದಾಖಲಿಸುವಂತೆ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಯುತ್ತಿದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X