ಉತ್ತರ ಪ್ರದೇಶ | ನಾಯಿ ಕಚ್ಚಿ ಸಾವನ್ನಪ್ಪಿದ ಎಮ್ಮೆಯ ಮೊಸರು ಸೇವಿಸಿದ ಸುಮಾರು 200 ಗ್ರಾಮಸ್ಥರಿಗೆ ರೇಬೀಸ್ ಆತಂಕ

Date:

ನಾಯಿ ಕಚ್ಚಿದ್ದ ಎಮ್ಮೆಯ ಹಾಲಿನಿಂದ ತಯಾರಿಸಿದ ‘ರೈತಾ’(ಮೊಸರು ಆಧಾರಿತ ಖಾದ್ಯ) ಸೇವಿಸಿದ ಪರಿಣಾಮ ಉತ್ತರ ಪ್ರದೇಶದ ಬುಡೌನ್‌ ಜಿಲ್ಲೆಯ ಪಿಪ್ರೌಲಿ ಗ್ರಾಮದ 200 ಜನರಿಗೆ ರೇಬೀಸ್ ಹರಡಿರುವ ಆತಂಕ ಮೂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರೇಬೀಸ್ ವಿರೋಧಿ ಲಸಿಕೆಯನ್ನು ಕೊಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಡಿಸೆಂಬರ್ 23ರಂದು ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಪುಣ್ಯತಿಥಿ ನಡೆದಿತ್ತು. ಅಲ್ಲಿ ಜನರು ರೈತಾ ಸೇರಿದಂತೆ ಇತರೆ ಖಾದ್ಯಗಳನ್ನು ಸೇವಿಸಿದ್ದರು. ರೈತಾ ತಯಾರಿಸಲು ಹಾಲು ಬಳಸಿದ ಎಮ್ಮೆಯನ್ನು ಕೆಲವು ದಿನಗಳ ಹಿಂದೆ ನಾಯಿ ಕಚ್ಚಿತ್ತು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಡಿಸೆಂಬರ್ 26ರಂದು ಎಮ್ಮೆ ಮೃತಪಟ್ಟಿತ್ತು. ಇದರಿಂದಾಗಿ ರೇಬೀಸ್ ಸೋಂಕು ಹರಡಿರುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕಗೊಂಡಿದ್ದರು. ಈ ಕುರಿತು ಮಾಹಿತಿ ಪಡೆದ ತಕ್ಷಣ ಗ್ರಾಮಸ್ಥರಿಗೆ ಲಸಿಕೆ ಹಾಕಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | SIR – ಬಿಜೆಪಿಗಾಗಿ ಚುನಾವಣಾ ಆಯೋಗ ನಡೆಸುತ್ತಿರುವ ರಕ್ತರಹಿತ ನರಮೇಧ

‘ಗ್ರಾಮದಲ್ಲಿ ಎಮ್ಮೆಯೊಂದು ನಾಯಿ ಕಚ್ಚಿ ರೇಬೀಸ್ ಲಕ್ಷಣಗಳಿಂದ ಸಾವಿಗೀಡಾಗಿದೆ. ಗ್ರಾಮಸ್ಥರು ಸೋಂಕಿತ ಎಮ್ಮೆಯ ಹಾಲಿನಿಂದ ತಯಾರಿಸಿದ ರೈತಾ ಸೇವಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರಿಗೂ ರೇಬೀಸ್ ಲಸಿಕೆ ಹಾಕಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ’ ಎಂದು ಮುಖ್ಯ ವೈದ್ಯಾಧಿಕಾರಿ ಡಾ. ರಾಮೇಶ್ವರ ಮಿಶ್ರಾ ತಿಳಿಸಿದ್ದಾರೆ.

‘ಹಾಲನ್ನು ಕುದಿಸಿದ ನಂತರ ರೇಬೀಸ್ ಅಪಾಯ ಇರುವುದಿಲ್ಲ. ಆದರೆ, ಯಾವುದೇ ಸಂಭಾವ್ಯ ಅಪಾಯವನ್ನು ತಡೆಗಟ್ಟುವ ಸಲುವಾಗಿ ಎಲ್ಲರಿಗೂ ರೇಬೀಸ್ ವಿರೋಧಿ ಲಸಿಕೆ ನೀಡುತ್ತಿದ್ದೇವೆ. ಜತೆಗೆ, ಯಾವುದೇ ವದಂತಿಗಳನ್ನು ಹರಡದಂತೆ ಗ್ರಾಮದಲ್ಲಿ ಮೇಲ್ವಿಚಾರಣೆ ನಡೆಸಲಾಗುತ್ತಿದೆ’ ಎಂದೂ ಮಿಶ್ರಾ ವಿವರಿಸಿದ್ದಾರೆ.

‘ನಾಯಿ ಕಚ್ಚಿದ್ದರಿಂದ ಎಮ್ಮೆ ಅನಾರೋಗ್ಯಕ್ಕೆ ಒಳಗಾಗಿತ್ತು. ಬಳಿಕ ಅದು ಮೃತಪಟ್ಟಿತ್ತು. ಪುಣ್ಯತಿಥಿ ಸಮಾರಂಭದಲ್ಲಿ ತಯಾರಿಸಿದ್ದ ರೈತಾವನ್ನು ಅದೇ ಎಮ್ಮೆಯ ಹಾಲಿನಿಂದ ತಯಾರಿಸಲಾಗಿತ್ತು. ಇದರಿಂದ ಸೋಂಕಿನ ಭೀತಿ ಕಾಡಲಾರಂಭಿಸಿತು. ಈಗ ರೇಬೀಸ್ ಚುಚ್ಚುಮದ್ದನ್ನು ಪಡೆದಿದ್ದೇವೆ’ ಎಂದು ಗ್ರಾಮಸ್ಥ ಧರ್ಮಪಾಲ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...