ಜಮೀನು ವಿವಾದ | ದಲಿತರು ವಾಸಿಸುತ್ತಿದ್ದ ಗ್ರಾಮಕ್ಕೆ ಬೆಂಕಿ ಹಚ್ಚಿದ ದುರುಳರು; 80 ಮನೆ ಸುಟ್ಟು ಭಸ್ಮ

Date:

ದಲಿತರು ಹೆಚ್ಚಾಗಿ ವಾಸಿಸುತ್ತಿದ್ದ ಬಿಹಾರದ ನವಾಡ ಗ್ರಾಮದಲ್ಲಿ ಬುಧವಾರ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಸುಮಾರು 80 ಮನೆ ಸುಟ್ಟು ಭಸ್ಮವಾಗಿದೆ. ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

ಘಟನೆಯ ನಂತರ ಉಪವಿಭಾಗಾಧಿಕಾರಿ ಅಖಿಲೇಶ್ ಕುಮಾರ್ ಸೇರಿದಂತೆ ಅಧಿಕ ಸಂಖ್ಯೆಯಲ್ಲಿ ಪೊಲೀಸ್ ಪಡೆ ಸ್ಥಳಕ್ಕೆ ತಲುಪಿದೆ. ಇಡೀ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸುಮಾರು 79-80 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿದ್ದರೂ ನಾವಡ ನಗರ ಎಸ್‌ಡಿಪಿಒ ಮಾತ್ರ ಕೇವಲ 25 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ದಲಿತ ಬಾಲಕನಿಗೆ ಪೊಲೀಸರಿಂದಲೇ ಚಿತ್ರಹಿಂಸೆ; ಬಾಲಕ ಸಾವು

“ಸುಮಾರು 20-25 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿಯಾಗಿಲ್ಲ. ಮೇಲ್ನೋಟಕ್ಕೆ ಇದು ಜಮೀನಿನ ಸಮಸ್ಯೆ ಎಂದು ತೋರುತ್ತದೆ. ಅಧಿಕಾರಿಗಳು ಸ್ಥಳದಲ್ಲಿದ್ದು ಕೆಲವರನ್ನು ಬಂಧಿಸಿದ್ದಾರೆ. ಇಂತಹ ಅಪರಾಧ ಮಾಡಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಪಾಸ್ವಾನ್, ಮಾಂಝಿ ಸಮುದಾಯದ ಜಮೀನು ವಿವಾದ

ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ದೇದೂರು ಗ್ರಾಮದ ಕೃಷ್ಣನಗರದ ದಲಿತರ ಕೇರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ದುಷ್ಕರ್ಮಿಗಳು ಗುಂಡುಗಳನ್ನೂ ಹಾರಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಸಾಗುವಳಿ ಮಾಡದ ಭೂಮಿಗೆ ಸಂಬಂಧಿಸಿದಂತೆ ಪಾಸ್ವಾನ್ ಮತ್ತು ಮಾಂಝಿ ಸಮುದಾಯದ ಜನರ ನಡುವೆ ದೀರ್ಘಕಾಲದಿಂದ ವಿವಾದವಿದೆ. ಎರಡೂ ಸಮುದಾಯದವರಿಗೂ ಸರ್ಕಾರಿ ಪತ್ರ ಸಿಕ್ಕಿದ್ದು, ವಿಷಯ ಸದ್ಯ ನ್ಯಾಯಾಲಯದಲ್ಲಿದೆ.

“ನಾವು 15-20 ವರ್ಷಗಳಿಂದ ಸರಕಾರಿ ಜಮೀನಿನಲ್ಲಿ ವಾಸ ಮಾಡುತ್ತಿದ್ದೇವೆ. ಸಂಜೆ ವೇಳೆಗೆ ನಂದು ಪಾಸ್ವಾನ್ ಮತ್ತು ನೂರಾರು ಮಂದಿ ಸೇರಿ ಗ್ರಾಮಕ್ಕೆ ಏಕಾಏಕಿ ಬೆಂಕಿ ಹಚ್ಚಿದ್ದಾರೆ” ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದರಿಂದಾಗಿ ಈ ಜಮೀನಿನಲ್ಲಿ ವಾಸಿಸುತ್ತಿದ್ದ ಗ್ರಾಮಸ್ಥರೆಲ್ಲರ ಮನೆಗಳು ಸುಟ್ಟು ಭಸ್ಮವಾಗಿವೆ.

ಈ ನಡುವೆ ಘಟನೆಯ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಅಗ್ನಿಶಾಮಕ ದಳವು ಸ್ಥಳಕ್ಕೆ ಧಾವಿಸಿದೆ ಎಂದು ಸದರ್ ಎಸ್‌ಡಿಒ ಅಖಿಲೇಶ್ ಕುಮಾರ್ ತಿಳಿಸಿದ್ದಾರೆ. ಪೊಲೀಸ್ ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...