ಪರೀಕ್ಷೆಗೂ ಒಂದು ದಿನ ಮುನ್ನ ನೀಟ್ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಈ ವರ್ಷದ 14ನೇ ಪ್ರಕರಣ

Date:

ಭಾನುವಾರ ನಿಗದಿಯಾಗಿದ್ದ ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಗೂ (ನೀಟ್) ಒಂದು ದಿನ ಮುನ್ನ ಕೋಟಾದಲ್ಲಿ ನೀಟ್ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಕೋಣೆಯ ಕಬ್ಬಿಣದ ಗ್ರಿಲ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ವಿದ್ಯಾರ್ಥಿನಿಯ ಹೆಸರನ್ನು ಬಹಿರಂಗಪಡಿಸಲು ಕುನ್ಹಾಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಅರವಿಂದ್ ಭಾರದ್ವಾಜ್ ನಿರಾಕಿಸಿದ್ದಾರೆ. ಆ ಬಾಲಕಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವಳು. ಮಧ್ಯಪ್ರದೇಶದ ಶಿಯೋಪುರದವಳು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ರಾಜಸ್ಥಾನ | ಜೆಇಇ ಆಕಾಂಕ್ಷಿ ಆತ್ಮಹತ್ಯೆ; 24 ಗಂಟೆಯಲ್ಲೇ ಎರಡನೇ ಪ್ರಕರಣ

ಕಳೆದ ಹಲವು ವರ್ಷಗಳಿಂದ ಕೋಟಾದಲ್ಲಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದ ಬಾಲಕಿ ಕೋಚಿಂಗ್ ಸಂಸ್ಥೆಯಲ್ಲಿ ನೀಟ್-ಯುಜಿಗೆ ತಯಾರಿ ನಡೆಸುತ್ತಿದ್ದಳು. ವಿದ್ಯಾರ್ಥಿನಿ ಭಾನುವಾರ ದೇಶಾದ್ಯಂತ ವಿವಿಧ ಕೇಂದ್ರಗಳಲ್ಲಿ ನಡೆಯಲಿರುವ ನೀಟ್-ಯುಜಿ ಪರೀಕ್ಷೆಯನ್ನು ಬರೆಯಬೇಕಿತ್ತು. ಆದರೆ ಅದಕ್ಕೂ ಮುನ್ನವೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.

ಘಟನೆಯ ಸಮಯದಲ್ಲಿ ಕುಟುಂಬ ಸದಸ್ಯರು ಮನೆಯಲ್ಲಿದ್ದರು ಮತ್ತು ರಾತ್ರಿ 9 ಗಂಟೆ ಸುಮಾರಿಗೆ ಆಕೆಯ ಮೃತ ದೇಹ ಪತ್ತೆಯಾಗಿದೆ. ಕೋಣೆಯಲ್ಲಿ ಯಾವುದೇ ಸುಸೈಡ್ ಲೆಟರ್ ಕಂಡುಬಂದಿಲ್ಲ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಈ ವರ್ಷದ ಜನವರಿಯಿಂದ ಈವರೆಗೆ ಕೋಟಾದಲ್ಲಿ ಕೋಚಿಂಗ್ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ 14ನೇ ಪ್ರಕರಣ ಇದಾಗಿದೆ. ಕಳೆದ ವರ್ಷ ಕೋಟಾದಲ್ಲಿ ಒಟ್ಟು 17 ಕೋಚಿಂಗ್ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೋಟಾ ಕೋಚಿಂಗ್ ಸೆಂಟರ್‌ಗಳಿಗೆ ಹೆಸರುವಾಸಿಯಾಗಿದೆ. ಜೆಇಇ, ನೀಟ್ ಮೊದಲಾದ ಸ್ಪರ್ಧಾತ್ಪಕ ಪರೀಕ್ಷೆಗಳ ತಯಾರಿ ನಡೆಸುವವರು ಹೆಚ್ಚಾಗಿ ಕೋಟಾದ ಕೋಚಿಂಗ್ ಸೆಂಟರ್‌ಗಳಲ್ಲಿ ತರಬೇತಿ ಪಡೆಯುತ್ತಾರೆ. ಆದರೆ ಅದೆಷ್ಟೋ ವಿದ್ಯಾರ್ಥಿಗಳು ಕಲಿಕೆಯ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...

‘ಇವು ಕೇವಲ ಉಪಚುನಾವಣೆಗಳು’: ನಂದಿಗ್ರಾಮ, ರೆಜಿನಗರ ‘ಎಸ್‌ಐಆರ್’ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ‘ವಿಶೇಷ...

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...