ರಾಜಸ್ಥಾನ | ಪ್ರಶ್ನೆ ಪತ್ರಿಕೆ ಸೋರಿಕೆ; ಪರೀಕ್ಷೆ ರದ್ದು: ನೀಟ್ ಆಕಾಂಕ್ಷಿ ಆತ್ಮಹತ್ಯೆ

Date:

ನೀಟ್-2026 ಪರೀಕ್ಷೆಯನ್ನು ರದ್ದುಪಡಿಸಿದ ಕೆಲವು ದಿನಗಳ ನಂತರ, 23 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾಜಸ್ಥಾನದ ಸಿಕಾರ್‌ನಲ್ಲಿ ನಡೆದಿದೆ. ಮೃತರನ್ನು ಪ್ರದೀಪ್ ಮಹಿಚ್ ಎಂದು ಗುರುತಿಸಲಾಗಿದೆ. ಮಹಿಚ್ ಪಿಪ್ರಾಲಿ ರಸ್ತೆಯಲ್ಲಿರುವ ಸಿಕಾರ್‌ನ ಜಲಧಾರಿ ನಗರ ಪ್ರದೇಶದ ತನ್ನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

- Advertisement -

ಮೂಲತಃ ಜುನ್ಜುನು ಜಿಲ್ಲೆಯ ಹಳ್ಳಿಯ ಪ್ರದೀಪ್, ಕಳೆದ ಮೂರು ವರ್ಷಗಳಿಂದ ಸಿಕಾರ್‌ನಲ್ಲಿ ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ. ಪ್ರದೀಪ್ ನೀಟ್-ಯುಜಿ 2026ರಲ್ಲಿ 650ಕ್ಕೂ ಹೆಚ್ಚು ಅಂಕಗಳನ್ನು ಗಳಿಸುವ ನಿರೀಕ್ಷೆಯಲ್ಲಿದ್ದರು. ಈ ಅಂಕ ಪಡೆದರೆ ಯಾವುದೇ ಪ್ರತಿಷ್ಠಿತ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯಲು ಅವರಿಗೆ ಅವಕಾಶ ಸಿಗಲಿದೆ ಎಂಬ ನಂಬಿಕೆಯಲ್ಲಿದ್ದರು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಪರೀಕ್ಷೆಯನ್ನು ರದ್ದುಗೊಳಿಸಿದಾಗಿನಿಂದ ಪ್ರದೀಪ್ ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದರು ಎಂದು ಪ್ರದೀಪ್ ಕುಟುಂಬಸ್ಥರು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಜಾರ್ಖಂಡ್‌ನಲ್ಲಿ ಇನ್ನೂ ಐವರ ಬಂಧನ

ಘಟನೆಯ ನಂತರ ಪ್ರದೀಪ್ ಅವರ ಕುಟುಂಬ ಮತ್ತು ಸ್ಥಳೀಯ ಸಮುದಾಯದ ಸದಸ್ಯರು ಎಸ್‌ಕೆ ಆಸ್ಪತ್ರೆಯ ಶವಾಗಾರದ ಹೊರಗೆ ಜಮಾಯಿಸಿದ್ದರು. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಪ್ರದೀಪ್ ಅವರ ತಂದೆ ರಾಜೇಶ್ ಕುಮಾರ್ ಮೇಘವಾಲ್, “ಆರ್ಥಿಕವಾಗಿ ಸಂಕಷ್ಟದಲ್ಲಿರುವ ನಮ್ಮ ಕುಟುಂಬದ ಏಕೈಕ ಪುತ್ರ ಪ್ರದೀಪ್. ಆತನ ಇಬ್ಬರು ಸಹೋದರಿಯರೊಂದಿಗೆ ಸಿಕಾರ್‌ನಲ್ಲಿ ವಾಸಿಸುತ್ತಿದ್ದ. ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ” ಎಂದು ತಿಳಿಸಿದ್ದಾರೆ.

ರಾಜಸ್ಥಾನದಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ, ಮೇ 3ರಂದು ನಡೆದಿದ್ದ ದೇಶವ್ಯಾಪಿ ನೀಟ್ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಸಂಪೂರ್ಣವಾಗಿ ರದ್ದುಗೊಳಿಸಿದೆ. ಈ ಹಗರಣದ ತನಿಖೆಯನ್ನು ಸದ್ಯ ಕೇಂದ್ರ ತನಿಖಾ ದಳಕ್ಕೆ (CBI) ವಹಿಸಲಾಗಿದೆ. ಈ ನಡುವೆ ಮನನೊಂದ ನೀಟ್ ಆಕಾಂಕ್ಷಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ.

ಇತ್ತೀಚೆಗೆ ಗೋವಾದ ಕರ್ತೊರಿಮ್‌ನಲ್ಲಿ 17 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಬೆಂಗಳೂರಿನವರಾಗಿದ್ದ ನೀಟ್ ಆಕಾಂಕ್ಷಿ ಗೋವಾದ ಕರ್ತೊರಿಮ್‌ನಲ್ಲಿ ವಾಸವಾಗಿದ್ದರು. ಮಡಗಾಂವ್‌ನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಓದುತ್ತಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿರುವ ಪತ್ರದಲ್ಲಿ, ತಾನು ಮತ್ತೊಮ್ಮೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಮಾನಸಿಕವಾಗಿ ದಣಿದಿದ್ದೇನೆ ಎಂದು ಉಲ್ಲೇಖಿಸಿದ್ದರು.

ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ರಾಜಸ್ಥಾನದ ಸಿಕಾರ್‌ನಲ್ಲಿ ಲೀಕ್ ಆಗಿದ್ದ ಕೈಬರಹದ ಪ್ರಶ್ನೆ ಪತ್ರಿಕೆಗೂ, ಅಸಲಿ ಪತ್ರಿಕೆಗೂ ಸಾಮ್ಯತೆ ಇರುವುದು ಕಂಡುಬಂದಿದೆ. ಜೀವಶಾಸ್ತ್ರ ಹಾಗೂ ಕೆಮಿಸ್ಟ್ರಿಯ ಒಟ್ಟು 140 ಪ್ರಶ್ನೆಗಳು ಮ್ಯಾಚ್ ಆಗಿದ್ದರಿಂದ ಎನ್‌ಟಿಎ ಪರೀಕ್ಷೆಯನ್ನು ರದ್ದುಗೊಳಿಸಿದೆ. ಪರೀಕ್ಷೆ ನಡೆಸಲು 10 ದಿನಗಳ ಒಳಗಾಗಿ ಹೊಸ ದಿನಾಂಕವನ್ನು ಪ್ರಕಟಿಸುವುದಾಗಿ ಎನ್‌ಟಿಎ ತಿಳಿಸಿದೆ.

ಇದನ್ನು ಓದಿದ್ದೀರಾ? ರಾಜಸ್ಥಾನ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿಯ ‘ಅಕ್ರಮ’ ಮನೆ ನೆಲಸಮ

ಇನ್ನು ಈ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಿಜೆಪಿಯ ಸ್ಥಳೀಯ ಮುಖಂಡರೊಬ್ಬರ ಬಂಧನವಾಗಿದ್ದು, ಇದು ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಜೈಪುರ ಗ್ರಾಮಾಂತರದ ಜಮ್ವಾ ರಾಮಗಢದ ಸ್ಥಳೀಯ ಬಿಜೆಪಿ ಯುವ ಮೋರ್ಚಾ ಸದಸ್ಯ ದಿನೇಶ್ ಬಿನ್ವಾಲ್ ಹಾಗೂ ಆತನ ಸಹೋದರ ಮಂಗಿಲಾಲ್ ಬಿನ್ವಾಲ್‌ನನ್ನು ಸಿಬಿಐ ಬಂಧಿಸಿದೆ. ದಿನೇಶ್ ಬಿನ್ವಾಲ್ ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ್, ಪ್ರಮುಖ ಬಿಜೆಪಿ ಶಾಸಕರು ಮತ್ತು ರಾಜ್ಯ ಮಟ್ಟದ ನಾಯಕರೊಂದಿಗೆ ಇರುವ ಫೋಟೋಗಳು ಮತ್ತು ಬ್ಯಾನರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ.

ದಿನೇಶ್ ಬಿನ್ವಾಲ್ ತನ್ನ ಮಗನಿಗಾಗಿ ಹಾಗೂ ಹಣ ಗಳಿಸುವ ಉದ್ದೇಶದಿಂದ ಹರಿಯಾಣದ ವ್ಯಕ್ತಿಯೊಬ್ಬರಿಂದ ಸುಮಾರು 15 ರಿಂದ 30 ಲಕ್ಷ ರೂಪಾಯಿ ನೀಡಿ ಪರೀಕ್ಷೆಗೆ ಮುಂಚಿತವಾಗಿಯೇ ಪ್ರಶ್ನೆ ಪತ್ರಿಕೆಯನ್ನು ಖರೀದಿಸಿದ್ದ ಎಂಬ ಆರೋಪ ಕೇಳಿಬಂದಿದೆ.

ಇನ್ನು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕಾಂಗ್ರೆಸ್ ನಾಯಕರು, “ಆರೋಪಿಯು ಬಿಜೆಪಿ ಮುಖಂಡನಾಗಿದ್ದರಿಂದಲೇ ರಾಜಸ್ಥಾನದ ಬಿಜೆಪಿ ಸರ್ಕಾರವು ಪ್ರಕರಣದ ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿತು ಮತ್ತು ಹಗರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿತು” ಎಂದು ನೇರ ಆರೋಪ ಮಾಡಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್...