ನೀಟ್ ಅಕ್ರಮ: ‘ಇದನ್ನು ಹೀಗೆಯೇ ಮುಂದುವರಿಯಲು ಬಿಡಲಾಗದು’; ಕೇಂದ್ರಕ್ಕೆ ಸುಪ್ರೀಂ ಎಚ್ಚರಿಕೆ

Date:

ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ನೀಟ್-ಯುಜಿ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. “ಇದನ್ನು ಹೀಗೆಯೇ ಮುಂದುವರೆಯಲು ಬಿಡಲಾಗದು. ಪರೀಕ್ಷಾ ವ್ಯವಸ್ಥೆಯಲ್ಲಿ ಸಾಲು ಸಾಲಾಗಿ ಸಂಭವಿಸುತ್ತಿರುವ ತಪ್ಪುಗಳಿಗೆ ತಕ್ಷಣವೇ ತೆರೆ ಎಳೆಯಬೇಕು” ಎಂದು ಕೇಂದ್ರಕ್ಕೆ ನಿರ್ದೇಶನ ನೀಡಿದೆ. ಮುಂದಿನ ದಿನಗಳಲ್ಲಿ ಕಂಪ್ಯೂಟರ್ ಆಧಾರಿತ (ಆನ್‌ಲೈನ್) ಪರೀಕ್ಷಾ ವ್ಯವಸ್ಥೆಗೆ ಸಂಪೂರ್ಣವಾಗಿ ಬದಲಾಗುವ ಕುರಿತು ಸರ್ಕಾರದ ಯೋಜನೆಗಳೇನು ಎಂಬುದರ ಸಂಪೂರ್ಣ ವಿವರ ನೀಡುವಂತೆ ಕೇಳಿದೆ.

- Advertisement -

ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಅರಾಧೆ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿದೆ. “ನೀಟ್ ಪ್ರಕರಣದ ಬೆಳವಣಿಗೆಗಳನ್ನು ನ್ಯಾಯಾಲಯವು ಅತ್ಯಂತ ಹತ್ತಿರದಿಂದ ಮತ್ತು ನಿರಂತರವಾಗಿ ಮೇಲ್ವಿಚಾರಣೆ ಮಾಡಲಿದೆ. ದೇಶದ ಪರೀಕ್ಷಾ ವ್ಯವಸ್ಥೆಯನ್ನು ಕಾನೂನಾತ್ಮಕವಾಗಿ ಮತ್ತು ಸಂಸ್ಥಾಗತವಾಗಿ ಬಲಪಡಿಸುವುದನ್ನು ನ್ಯಾಯಾಲಯವೇ ಖಾತರಿಪಡಿಸಲಿದೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ಪರೀಕ್ಷೆಯನ್ನು ಸಂಪೂರ್ಣವಾಗಿ ಆನ್‌ಲೈನ್ ವ್ಯವಸ್ಥೆಗೆ ಬದಲಾಯಿಸಲು ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳು ಮತ್ತು ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಬದಲಾದಾಗ ಅಭ್ಯರ್ಥಿಗಳ ಡೇಟಾ ಮತ್ತು ಮಾಹಿತಿಯನ್ನು ಹೇಗೆ ಸುರಕ್ಷಿತವಾಗಿ ರಕ್ಷಿಸಲಾಗುತ್ತದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು” ಎಂದು ನಿರ್ದೇಶಿಸಿದೆ.

ವಿಚಾರಣೆ ವೇಳೆ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ವಿದ್ಯಾರ್ಥಿಗಳ ಹಿತರಕ್ಷಣೆಗೆ ಸರ್ಕಾರವು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ. ನ್ಯಾಯಾಲಯದ ಮುಂದೆ ಸಮಗ್ರ ವಿವರಣೆ ನೀಡಲು ಹೆಚ್ಚಿನ ಕಾಲಾವಕಾಶ ಬೇಕಾಗಬಹುದು” ಎಂದು ಮನವಿ ಮಾಡಿದರು. ಅವರ ಮನವಿಗೆ ಪ್ರತಿಕ್ರಿಯಿಸಿದ ಪೀಠವು, “ಈ ರೀತಿಯ ಲೋಪಗಳನ್ನು ಹೀಗೆಯೇ ಮುಂದುವರಿಯಲು ಬಿಡಲು ಸಾಧ್ಯವಿಲ್ಲ” ಎಂದು ಖಡಕ್ಕಾಗಿ ಹೇಳಿದ್ದು, ಮುಂದಿನ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಿದೆ.

ಈ ಲೇಖನ ಓದಿದ್ದೀರಾ?: ಜೆನ್‌ ಝೀʼ | ಇದು ಹಣೆಪಟ್ಟಿಗಳ ಸೀಳಿ ಟಿಸಿಲೊಡೆದ ಹೊಸ ಪೀಳಿಗೆ!

ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ವಿದ್ಯಾರ್ಥಿಗಳು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ನಡೆಸುತ್ತಿರುವ ಭಾರೀ ಪ್ರತಿಭಟನೆಯ ನಡುವೆಯೇ ಈ ನ್ಯಾಯಾಲಯದ ವಿಚಾರಣೆ ನಡೆದಿದೆ.

ಇತ್ತೀಚೆಗೆ ನಡೆದ ‘ಸಂಸತ್ ಚಲೋ’ ಮೆರವಣಿಗೆಯ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗ, ಲಾಠಿಚಾರ್ಜ್ ನಡೆಸಿದ್ದಾರೆ. ವಿದ್ಯಾರ್ಥಿಗಳ ಮೇಲೆ ಕ್ರೌರ್ಯ ಮೆರೆದಿದ್ದಾರೆ. ಆದಾಗ್ಯೂ, ಪ್ರತಿಭಟನೆ ಮುಂದುವರೆದಿದೆ. ಈ ನಡುವೆ, ಕೇಂದ್ರ ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಸೋಮನ್ ವಾಂಗ್ಚುಕ್ ಜೊತೆ ಮಾತುಕತೆ ನಡೆಸಿದ್ದಾರೆ. ವಾಂಗ್ಚುಕ್ ಅವರ ಹಲವು ಬೇಡಿಕೆಗಳನ್ನು ಸರ್ಕಾರ ಪೂರೈಸುವ ಭರವಸೆ ನೀಡಿದ್ದಾರೆ. ಬಳಿಕ, ಕಳೆದ 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಅವರು ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ಇಂದು ಸಿಜೆಪಿ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ಪ್ರಮುಖ ಸಭೆ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಪ್ರತಾಪೂರ ಗ್ರಾ.ಪಂ.ನಲ್ಲಿ ₹25.34 ಲಕ್ಷ ಅಕ್ರಮದ ಆರೋಪ, ತನಿಖೆಗೆ ಆದೇಶವಿದ್ದರೂ ವಿಳಂಬ!

ಬಸವಕಲ್ಯಾಣ ತಾಲೂಕಿನ ಪ್ರತಾಪೂರ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಆಯೋಗದ ಅನುದಾನದಡಿ...

ವಿಜಯಪುರ | ಜಿಪಂನಿಂದ ಉಚಿತ ಕಂಪ್ಯೂಟರ್ ತರಬೇತಿ: ಅಭ್ಯರ್ಥಿಗಳಿಗೆ ₹1,500 ಸಹಾಯಧನ

ನಿರುದ್ಯೋಗಿ ಯುವಜನರನ್ನು ಸ್ವಯಂ ಉದ್ಯೋಗದತ್ತ ಪ್ರೇರೇಪಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ...

ಟಿಬೆಟ್‌ನಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ: ಜಲಪ್ರಳಯದ ಬೆನ್ನಲ್ಲೇ ಚೀನಾಗೆ ಮತ್ತೊಂದು ಆಘಾತ

ಚೀನಾದ ಟಿಬೆಟ್ ಭಾಗದಲ್ಲಿ ಗುರುವಾರ ರಾತ್ರಿ 7.0 ತೀವ್ರತೆಯ ಭಾರಿ ಭೂಕಂಪ...

ಕಲಬುರಗಿ | ಬಸ್‌ನಲ್ಲಿ ಮರೆತು ಹೋಗಿದ್ದ ಚಿನ್ನಾಭರಣ ಮರಳಿಸಿದ ಚಾಲಕ, ನಿರ್ವಾಹಕ

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ...