NEET ಪೇಪರ್ ಲೀಕ್ ಎಫೆಕ್ಟ್: ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವವರಿಗೆ ಕಂಪ್ಲೀಟ್ ʼಐಸೊಲೇಶನ್ʼ

Date:

ಇತ್ತೀಚಿನ ವರ್ಷಗಳಲ್ಲೇ ಅತ್ಯಂತ ಕಠಿಣವಾದ ಪರೀಕ್ಷಾ ಭದ್ರತಾ ಕ್ರಮಗಳ ಭಾಗವಾಗಿ, NEET-UG 2026 ರ ಮರುಪರೀಕ್ಷೆಯ ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಿಕೆ, ಪರಿಶೀಲನೆ ಮತ್ತು ಅನುವಾದ ಪ್ರಕ್ರಿಯೆಯಲ್ಲಿ ತೊಡಗಿರುವ ಎಲ್ಲಾ ತಜ್ಞರನ್ನು ಅತ್ಯಂತ ಸುರಕ್ಷಿತ, ಅಜ್ಞಾತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅಲ್ಲದೆ, ಅವರನ್ನು ಕಟ್ಟುನಿಟ್ಟಾದ ಐಸೊಲೇಶನ್ ನಿಯಮಗಳ ಅಡಿಯಲ್ಲಿ ಇರಿಸಲಾಗಿದ್ದು, ಪ್ರಶ್ನೆ ಪತ್ರಿಕೆ ಸಿದ್ಧತೆಯ ಅಂತಿಮ ಹಂತದಲ್ಲಿ ಹೊರಗಿನ ಪ್ರಪಂಚದೊಂದಿಗಿನ ಅವರ ಸಂಪರ್ಕವನ್ನು ಸಂಪೂರ್ಣವಾಗಿ ಕಡಿತಗೊಳಿಸಲಾಗಿದೆ. ಈ ಕಠಿಣ ‘ಲಾಕ್‌ಡೌನ್’ ಪ್ರಕ್ರಿಯೆಯು ಜೂನ್ 21ರಂದು ಪರೀಕ್ಷೆ ಮುಗಿಯುವವರೆಗೂ ಜಾರಿಯಲ್ಲಿರಲಿದೆ ಎಂದು ವರದಿಯಾಗಿದೆ.

- Advertisement -

ಕಳೆದ ಮೇ ತಿಂಗಳಿನಲ್ಲಿ ನಡೆದಿದ್ದ NEET ಪರೀಕ್ಷೆಯ ಪೇಪರ್ ಲೀಕ್ ವಿವಾದದ ನಂತರ, ದೇಶದಾದ್ಯಂತ 22 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳಲ್ಲಿ ಆತಂಕ ಮೂಡಿತ್ತು. ಈ ಹಿನ್ನೆಲೆಯಲ್ಲಿ ಇಡೀ ಪರೀಕ್ಷಾ ಭದ್ರತಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪುನರ್‌ ರಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಪ್ರಶ್ನೆ ಪತ್ರಿಕೆ ಅಭಿವೃದ್ಧಿಯ ಅತ್ಯಂತ ಗೌಪ್ಯ ಹಂತಗಳಲ್ಲಿ ತೊಡಗಿಸಿಕೊಂಡಿರುವ ಪೇಪರ್ ಸೆಟ್ಟರ್‌ಗಳು, ಮಾಡರೇಟರ್‌ಗಳು ಮತ್ತು ಅನುವಾದಕರು ಸದ್ಯ ಕಠಿಣ ಕಣ್ಗಾವಲಿನಲ್ಲಿ ಸುರಕ್ಷಿತ ಕೇಂದ್ರವೊಂದರಲ್ಲಿ ತಂಗಿದ್ದಾರೆ ಎಂದು ಸಿದ್ಧತೆಗಳ ನಿಕಟ ಪರಿಚಯವಿರುವ ಅಧಿಕಾರಿಗಳು ತಿಳಿಸಿದ್ದಾರೆ. ಈ ಕೇಂದ್ರದಲ್ಲಿ ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ವೈಯಕ್ತಿಕ ಸಂಪರ್ಕ ಸಾಧನಗಳ ಬಳಕೆಯನ್ನು ನಿರ್ಬಂಧಿಸಲಾಗಿದೆ. ಇಂಟರ್ನೆಟ್ ಪ್ರವೇಶ ಮತ್ತು ಹೊರಗಿನವರ ಸಂಪರ್ಕವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲಾಗಿದೆ. ಸ್ಮಾರ್ಟ್‌ವಾಚ್‌ಗಳು ಸೇರಿದಂತೆ ಯಾವುದೇ ಡಿಜಿಟಲ್ ಸಾಧನಗಳನ್ನು ಒಳಗೆ ಬಿಟ್ಟುಕೊಳ್ಳುತ್ತಿಲ್ಲ. ಕೇವಲ ಅಧಿಕೃತ ಸಿಬ್ಬಂದಿಗೆ ಮಾತ್ರ ಪ್ರವೇಶವಿದ್ದು, ಪ್ರತಿಯೊಬ್ಬರ ಬರುವಿಕೆ ಮತ್ತು ಹೋಗುವಿಕೆಯನ್ನು ಸತತವಾಗಿ ದಾಖಲಿಸಲಾಗುತ್ತಿದೆ.

ಕೇಂದ್ರ ಶಿಕ್ಷಣ ಸಚಿವಾಲಯ ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಜೂನ್ 21ರಂದು ನಡೆಸಲಿರುವ ಮರುಪರೀಕ್ಷೆಗಾಗಿ ಸಿದ್ಧಪಡಿಸಿರುವ ಬಹುಸ್ತರದ ಭದ್ರತಾ ಕೋಟೆಯ ಮೊದಲ ಹಂತವೇ ಈ ‘ಲಾಕ್‌ಡೌನ್’ ಆಗಿದೆ. ಈ ಮರುಪರೀಕ್ಷೆಯು ಭಾರತದ 551 ನಗರಗಳು ಹಾಗೂ ವಿದೇಶದ 14 ನಗರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15 ರವರೆಗೆ ಪೆನ್ ಮತ್ತು ಪೇಪರ್ ಮಾದರಿಯಲ್ಲಿ ನಡೆಯಲಿದೆ.

ಪ್ರಶ್ನೆ ಪತ್ರಿಕೆಯ ಅಭಿವೃದ್ಧಿ, ಅನುವಾದ, ಮಾಡರೇಶನ್, ಪ್ರಿಂಟಿಂಗ್, ಪ್ಯಾಕೇಜಿಂಗ್, ಸಂಗ್ರಹಣೆ, ಸಾಗಣೆ ಮತ್ತು ವಿತರಣೆಯವರೆಗಿನ ಪ್ರತಿಯೊಂದು ಹಂತವನ್ನೂ ಈಗ ತೀವ್ರ ಕಣ್ಗಾವಲಿಗೆ ಒಳಪಡಿಸಲಾಗಿದೆ. ಯಾವುದೇ ಒಬ್ಬ ವ್ಯಕ್ತಿ ಅಥವಾ ಗುಂಪಿಗೆ ಇಡೀ ಪರೀಕ್ಷಾ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಸಿಗದಂತೆ ಪ್ರತಿಯೊಂದು ಹಂತವನ್ನೂ ಪ್ರತ್ಯೇಕಿಸಲಾಗಿದೆ.

ಇದನ್ನೂ ಓದಿ: ಕೈ ತಪ್ಪಿದ ಸಚಿವ ಸ್ಥಾನ; ಹಿರಿಯ ನಾಯಕರಲ್ಲಿ ಹೆಚ್ಚಿದ ಅಸಮಾಧಾನ!

ಪರೀಕ್ಷಾ ಸಾಮಗ್ರಿಗಳ ಸುರಕ್ಷಿತ ಸಾಗಣೆಗೆ ಸರ್ಕಾರವು ಈ ಬಾರಿ ವಿಶೇಷ ಗಮನ ಹರಿಸಿದ್ದು, ದೇಶದಾದ್ಯಂತ ಪ್ರಶ್ನೆ ಪತ್ರಿಕೆಗಳನ್ನು ಸುರಕ್ಷಿತವಾಗಿ ತಲುಪಿಸಲು ಭಾರತೀಯ ವಾಯುಪಡೆಯ (IAF) ವಿಮಾನಗಳನ್ನು ಬಳಸಿಕೊಳ್ಳುವ ಸಾಧ್ಯತೆಗಳನ್ನೂ ಪರಿಶೀಲಿಸಿದೆ.

ಡಿಜಿಟಲ್ ವಲಯದಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯಲು ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳು, ಮೆಸೇಜಿಂಗ್ ಆ್ಯಪ್‌ಗಳು ಹಾಗೂ ಆನ್‌ಲೈನ್ ಫೋರಮ್‌ಗಳ ಮೇಲೆ 24 ಗಂಟೆಯೂ ನಿಗಾ ಇರಿಸಿದ್ದಾರೆ. ನಕಲಿ ಪ್ರಶ್ನೆ ಪತ್ರಿಕೆಗಳ ಹರಡುವಿಕೆ, ತಪ್ಪು ಮಾಹಿತಿ ಹರಡುವ ಅಭಿಯಾನಗಳು ಮತ್ತು ಅನುಮಾನಾಸ್ಪದ ಚಟುವಟಿಕೆಗಳನ್ನು ಗುರುತಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಕಳೆದ ಪರೀಕ್ಷಾ ವೇಳೆಯಲ್ಲಿ ಕಂಡುಬಂದಿದ್ದ ಪ್ರತಿಯೊಂದು ಲೋಪದೋಷಗಳನ್ನೂ ಈ ಬಾರಿ ಅತ್ಯಂತ ಸಮಗ್ರವಾಗಿ ಸರಿಪಡಿಸುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಕ್ಷಾಂತರ ಪರ್ವ: ಮೋದಿ ಸರ್ಕಾರದ ಅಧಿಕಾರದ ಆಸೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳ ಬಲಿ

ಭಾರತದಲ್ಲಿ 2022 ಮತ್ತು 2026ರ ನಡುವಿನ ಅವಧಿಯಲ್ಲಿ ರಾಜಕೀಯ ಕ್ಷೇತ್ರದಲ್ಲಿ ಬಹುದೊಡ್ಡ...

ಯುಪಿ | ಮತದಾರರ ಪಟ್ಟಿಯಲ್ಲಿ ಭಾರೀ ಅಕ್ರಮ ಆರೋಪ; 16 ಸಾವಿರಕ್ಕೂ ಹೆಚ್ಚು ಹೆಸರುಗಳ ಪರಿಶೀಲನೆಗೆ EC ಆದೇಶ

ಉತ್ತರ ಪ್ರದೇಶದ ಪಿಲಿಭಿತ್ ಸದರ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ...

ಅಭಿವೃದ್ಧಿ ಹೆಸರಲ್ಲಿ 23 ಲಕ್ಷ ಮರಗಳಿಗೆ ಕುತ್ತು; ಅರುಣಾಚಲದ ಜಲವಿದ್ಯುತ್‌ ಯೋಜನೆ ಅನುಮತಿ ಕೋರಿದ NHPC

ಅರುಣಾಚಲ ಪ್ರದೇಶದಲ್ಲಿ 1,720 ಮೆಗಾವ್ಯಾಟ್ ಸಾಮರ್ಥ್ಯದ ಕಮಲಾ ಜಲವಿದ್ಯುತ್ ಯೋಜನೆ ಅನುಷ್ಠಾನಗೊಳಿಸಲು...

ಸೋನಿಯಾ ಗಾಂಧಿ ಇನ್‌ಸ್ಟಾಗ್ರಾಮ್‌ಗೆ ಪದಾರ್ಪಣೆ: ‘ಬಿಲಾಂಗಿಂಗ್’ ಆತ್ಮಕಥೆಯ ಮೊದಲ ನೋಟ ಬಿಡುಗಡೆ

ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಾಮಾಜಿಕ ಜಾಲತಾಣ...