ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ: ನೀಟ್ ಅಕ್ರಮಕ್ಕೆ ಇನ್ನೆಷ್ಟು ಬಲಿ?

Date:

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳು ಬೆಳಕಿಗೆ ಬಂದಿದ್ದರಿಂದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮೇ 3ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ. ಜೂನ್ 21ರಂದು ಮರುಪರೀಕ್ಷೆ ನಡೆಯಲಿದೆ. ಆದರೆ ಪರೀಕ್ಷೆ ರದ್ದಾದ ಬಳಿಕ ಮಾನಸಿಕವಾಗಿ ನೊಂದ ನೀಟ್ ಆಕಾಂಕ್ಷಿಗಳ ಸರಣಿ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿವೆ.

- Advertisement -

ಬುಧವಾರ ತಮಿಳುನಾಡಿನ ಕೊಯಮತ್ತೂರು ನಗರದಲ್ಲಿ 19 ವರ್ಷದ ವಿದ್ಯಾರ್ಥಿನಿ ಅನುಕೀರ್ತನಾ ಆತ್ಮಹತ್ಯೆ ಮಾಡಿಕೊಂಡಿದ್ದು, ನೀಟ್ ಪರೀಕ್ಷೆ ರದ್ದಾದ ಬಳಿಕ ಈವರೆಗೆ 10 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುವ ಇಂತಹ ದಂಧೆಗಳಿಗೆ ಹಾಗೂ ಸರ್ಕಾರದ ಬೇಜವಾಬ್ದಾರಿತನಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಓದಿದ್ದೀರಾ? ‘ನಾನು ಹೊರೆಯಾಗಿದ್ದೇನೆ, ಕ್ಷಮಿಸಿ’; ಟಾಪರ್‌ ಆಗಿದ್ದ ನೀಟ್‌ ಆಕಾಂಕ್ಷಿ ಆತ್ಮಹತ್ಯೆ

ವರದಿಗಳ ಪ್ರಕಾರ ಮಧ್ಯಪ್ರದೇಶ, ಉತ್ತರಪ್ರದೇಶ, ರಾಜಸ್ಥಾನ, ದೆಹಲಿ, ಕರ್ನಾಟಕ, ಜಾರ್ಖಂಡ್, ಮಹಾರಾಷ್ಟ್ರ ಮತ್ತು ಒಡಿಶಾಗಳಲ್ಲಿ ಒಟ್ಟು ಹತ್ತು ವಿದ್ಯಾರ್ಥಿಗಳು ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ.

ಈವರೆಗೆ ಹತ್ತು ವಿದ್ಯಾರ್ಥಿಗಳು ಆತ್ಮಹತ್ಯೆ

ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಮೂಲದ ಆಕಾಂಕ್ಷಾ ಚತುರ್ವೇದಿ ಎಂಬ ವಿದ್ಯಾರ್ಥಿನಿ ನಾಗ್ಪುರದಲ್ಲಿ ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಅತ್ಯಂತ ಕಡುಬಡತನದ ಹಿನ್ನೆಲೆಯಿಂದ ಬಂದ ಆಕಾಂಕ್ಷಾ, ಶಿಕ್ಷಣದ ಮೂಲಕ ಕುಟುಂಬವನ್ನು ಮೇಲಕ್ಕೆತ್ತಬೇಕೆಂಬ ಕನಸು ಕಂಡಿದ್ದರು. ಆದರೆ ಪರೀಕ್ಷೆ ರದ್ದಾದ ಸುದ್ದಿ ಮತ್ತು ಅಕ್ರಮಗಳ ವರದಿ ಕೇಳಿ ತೀವ್ರ ಖಿನ್ನತೆಗೆ ಒಳಗಾಗಿ ನಾಗ್ಪುರದಲ್ಲಿ ಆತ್ಮಹತ್ಯೆ ಮಾಡಿಕೊಂಡರು.

ಇನ್ನು ಕೋಚಿಂಗ್ ಸೆಂಟರ್‌ಗಳ ಹಬ್ ರಾಜಸ್ಥಾನದ ಕೋಟಾದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀಟ್ ಮರುಪರೀಕ್ಷೆಯ ಒತ್ತಡ ಮತ್ತು ಗೊಂದಲ ತಡೆಯಲಾರದೆ ಇಬ್ಬರು ಆಕಾಂಕ್ಷಿಗಳು ತಮ್ಮ ಹಾಸ್ಟೆಲ್ ಕೊಠಡಿಗಳಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ ತಲಾ ಒಬ್ಬೊಬ್ಬರು ವಿದ್ಯಾರ್ಥಿಗಳು ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆ ಕಳೆದುಕೊಂಡು ಮತ್ತು ಜೂನ್ 21ರಂದು ಮರುಪರೀಕ್ಷೆ ಬರೆಯುವಷ್ಟು ಮಾನಸಿಕ ಶಕ್ತಿ ಇಲ್ಲ ಎಂದು ಸಾವಿನ ಹಾದಿ ಹಿಡಿದಿದ್ದಾರೆ.

ಕರ್ನಾಟಕ ಮತ್ತು ಪೂರ್ವದ ಒಡಿಶಾದಲ್ಲೂ ನೀಟ್ ರದ್ದತಿ ಹಾಗೂ ಪ್ರಶ್ನೆಪತ್ರಿಕೆ ದಂಧೆಯ ವರದಿಗಳಿಂದ ಬೇಸತ್ತ ತಲಾ ಒಬ್ಬರು ವಿದ್ಯಾರ್ಥಿಗಳು ತೀವ್ರ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಾರ್ಖಂಡ್ ಮತ್ತು ಮಹಾರಾಷ್ಟ್ರದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೀಗ ತಮಿಳುನಾಡಿನ ಕೊಯಮತ್ತೂರು ನಗರದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನು ಓದಿದ್ದೀರಾ? ಪೇಪರ್ ಲೀಕ್: ಕೋಚಿಂಗ್ ರಾಜಧಾನಿ ಕೋಟಾದಲ್ಲಿ ರಾಹುಲ್ ರ‍್ಯಾಲಿ; ಹಳಿ ತಪ್ಪಿಸಲು ಬಿಜೆಪಿ ತಂತ್ರ

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳು, ಪೇಪರ್ ಲೀಕ್ ದಂಧೆಗಳು ಮತ್ತು ಕೋರ್ಟ್ ಮೆಟ್ಟಿಲೇರಿರುವ ಪ್ರಕರಣಗಳಿಂದಾಗಿ ಹಗಲಿರುಳು ಕಷ್ಟಪಟ್ಟು ಓದಿದ ಪ್ರಾಮಾಣಿಕ ವಿದ್ಯಾರ್ಥಿಗಳು ತೀವ್ರ ನಿರಾಶೆಗೆ ಒಳಗಾಗಿದ್ದಾರೆ. ದೇಶದ ಹಲವೆಡೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೋಷಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ #NEET_Paper_Leak ಮತ್ತು #JusticeForNEETAspirants ಎಂಬ ಹ್ಯಾಶ್‌ಟ್ಯಾಗ್‌ಗಳು ವ್ಯಾಪಕವಾಗಿ ಟ್ರೆಂಡ್ ಆಗುತ್ತಿವೆ.

ಸದ್ಯ ಪ್ರಶ್ನೆಪತ್ರಿಕೆ ಸೋರಿಕೆಯ ಜಾಲದ ಕುರಿತು ಸಿಬಿಐ ಮತ್ತು ರಾಜ್ಯಗಳ ವಿಶೇಷ ತನಿಖಾ ತಂಡಗಳು (ಎಸ್‌ಐಟಿ) ತೀವ್ರ ತನಿಖೆ ನಡೆಸುತ್ತಿವೆ. ಬಿಹಾರ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ದಂಧೆಯ ಹಿಂದಿರುವ ಪ್ರಮುಖ ಆರೋಪಿಗಳನ್ನು ಹಾಗೂ ಮಧ್ಯವರ್ತಿಗಳನ್ನು ಬಂಧಿಸಲಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಸೌದಿ ಮೇಲೆ ಹೌತಿ ದಾಳಿ ತೀವ್ರ: ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ

ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ಸೇರಿದಂತೆ ಪ್ರಮುಖ ನಗರಗಳ ಮೇಲೆ ಯೆಮೆನ್‌ನ...

ರಷ್ಯಾದಲ್ಲಿ ಪುತಿನ್ ಪಕ್ಷ ಮತ್ತೊಂದು ಗೆಲುವಿನ ಹೊಸ್ತಿಲಲ್ಲಿ…

ರಷ್ಯಾದಲ್ಲಿ ನಡೆಯುತ್ತಿರುವ 2026ರ 'ಸ್ಟೇಟ್ ಡೂಮಾ' (ಸಂಸತ್) ಚುನಾವಣೆಯಲ್ಲಿ ಅಧ್ಯಕ್ಷ ವ್ಲಾಡಿಮಿರ್...