ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಎಲ್ಲಾ 14 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಪಡಿಸಿದ ದೆಹಲಿ ನ್ಯಾಯಾಲಯ

Date:

ದೇಶಾದ್ಯಂತ ವೈದ್ಯಕೀಯ ಆಕಾಂಕ್ಷಿಗಳಲ್ಲಿ ಭಾರಿ ಆತಂಕ ಮೂಡಿಸಿದ್ದ 2026ರ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಿರ್ಣಾಯಕ ಹಂತಕ್ಕೆ ತಲುಪಿದೆ. ಪ್ರಕರಣದ ಎಲ್ಲಾ 14 ಆರೋಪಿಗಳ ವಿರುದ್ಧ ದೆಹಲಿಯ ರೌಸ್ ಅವೆನ್ಯೂ ವಿಶೇಷ ತ್ವರಿತ ನ್ಯಾಯಾಲಯವು ಶನಿವಾರ (ನವೆಂಬರ್ 21) ಔಪಚಾರಿಕವಾಗಿ ದೋಷಾರೋಪ ನಿಗದಿಪಡಿಸಿದೆ.

- Advertisement -

ನ್ಯಾಯಾಂಗ ಬಂಧನದಲ್ಲಿದ್ದ ಎಲ್ಲಾ 14 ಆರೋಪಿಗಳನ್ನು ವಿಶೇಷ ಸಿಬಿಐ ನ್ಯಾಯಾಧೀಶರಾದ ಅಜಯ್ ಗುಪ್ತಾ ಅವರ ಮುಂದೆ ಖುದ್ದಾಗಿ ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಗಳ ವಿರುದ್ಧದ ಆರೋಪಗಳನ್ನು ಓದಿ ಹೇಳಿದಾಗ, ಎಲ್ಲರೂ ತಾವು ನಿರ್ದೋಷಿಗಳು ಎಂದು ವಾದಿಸಿದ್ದು, ವಿಚಾರಣೆಯನ್ನು ಎದುರಿಸಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಪ್ರಕರಣದ ಸಾಕ್ಷ್ಯಗಳ ದಾಖಲಾತಿ ಮತ್ತು ದೈನಂದಿನ ವಿಚಾರಣೆಯನ್ನು ನವೆಂಬರ್ 25ರಿಂದ ಆರಂಭಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯದ ಮಾರ್ಗಗಳ ತಡೆಗಟ್ಟುವಿಕೆ) ಕಾಯ್ದೆ-2024, ಭ್ರಷ್ಟಾಚಾರ ತಡೆ ಕಾಯ್ದೆ, ಹಕ್ಕುಸ್ವಾಮ್ಯ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ (BNS) ಅಡಿಯಲ್ಲಿ ಬರುವ ಕ್ರಿಮಿನಲ್ ಪಿತೂರಿ, ವಂಚನೆ, ನಂಬಿಕೆ ದ್ರೋಹ ಮತ್ತು ಸಾಕ್ಷ್ಯ ನಾಶ ಆರೋಪಗಳ ಅಡಿಯಲ್ಲಿ ನ್ಯಾಯಾಲಯ ದೋಷಾರೋಪ ನಿಗದಿಪಡಿಸಿದೆ.

ಇದನ್ನೂ ಓದಿ: ಸಿಜೆಪಿ ಪ್ರತಿಭಟನೆ : ಪೊಲೀಸ್ ಮಾರುವೇಷದಲ್ಲಿ ಗೂಂಡಾಗಳನ್ನು ಕಳಿಸಿದವರು ಯಾರು?

ಸಿಬಿಐ ಸಲ್ಲಿಸಿದ್ದ ಮುಖ್ಯ ಮತ್ತು ಪೂರಕ ದೋಷಾರೋಪ ಪಟ್ಟಿಗಳಲ್ಲಿ ಒಟ್ಟು 14 ಮಂದಿಯನ್ನು ಹೆಸರಿಸಲಾಗಿತ್ತು. ಇದರಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯೊಂದಿಗೆ (ಎನ್‌ಟಿಎ) ಗುರುತಿಸಿಕೊಂಡಿದ್ದ ಮೂವರು ವಿಷಯ ತಜ್ಞರಾದ ಮನೀಶಾ ಗುರುನಾಥ್ ಮಾಂಧರೆ (ಜೀವಶಾಸ್ತ್ರ), ಪ್ರಹ್ಲಾದ್ ವಿಠ್ಠಲರಾವ್ ಕುಲಕರ್ಣಿ (ರಸಾಯನಶಾಸ್ತ್ರ) ಮತ್ತು ಮನೀಶಾ ಸಂಜಯ್ ಹವಾಲ್ದಾರ್ (ಭೌತಶಾಸ್ತ್ರ) ಪ್ರಮುಖ ಆರೋಪಿಗಳಾಗಿದ್ದಾರೆ.

ಉಳಿದಂತೆ ಕೋಚಿಂಗ್ ಸಂಸ್ಥೆಗಳಿಗೆ ಸಂಬಂಧಿಸಿದವರು, ಮಧ್ಯವರ್ತಿಗಳು ಮತ್ತು ಮಹಾರಾಷ್ಟ್ರದ ಚಹಾ ವ್ಯಾಪಾರಿ ಶೇಷರಾವ್ ಬಜರಂಗ್ ಸೂರ್ಯವಂಶಿ (ರಾಜ್ ಸೂರ್ಯವಂಶಿ) ಸೇರಿದಂತೆ ಒಟ್ಟು 11 ಖಾಸಗಿ ವ್ಯಕ್ತಿಗಳು ಆರೋಪಿಗಳ ಪಟ್ಟಿಯಲ್ಲಿದ್ದಾರೆ. ಎನ್‌ಟಿಎಯ ಯಾವುದೇ ಉನ್ನತ ಅಧಿಕಾರಿಗಳನ್ನು ಸಿಬಿಐ ಇದುವರೆಗೆ ಆರೋಪಿಗಳನ್ನಾಗಿ ಹೆಸರಿಸಿಲ್ಲ.

2026ರ ಮೇ 3ರಂದು ಸುಮಾರು 22 ಲಕ್ಷ ವಿದ್ಯಾರ್ಥಿಗಳು ನೀಟ್-ಯುಜಿ ಪರೀಕ್ಷೆ ಬರೆದಿದ್ದರು. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯಾದ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎನ್‌ಟಿಎ ಮೇ 12ರಂದು ಪರೀಕ್ಷೆಯನ್ನು ರದ್ದುಗೊಳಿಸಿ, ಜೂನ್ 21ರಂದು ಮರುಪರೀಕ್ಷೆ ನಡೆಸಿತ್ತು. ತನಿಖೆ ಕೈಗೆತ್ತಿಕೊಂಡಿದ್ದ ಸಿಬಿಐ ಸುಮಾರು 20,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದು, ಪ್ರಕರಣವನ್ನು ಸಾಬೀತುಪಡಿಸಲು 360 ಸಾಕ್ಷಿಗಳು, 422 ದಾಖಲೆಗಳು ಮತ್ತು 43 ವಸ್ತುಗಳನ್ನು ನ್ಯಾಯಾಲಯದ ಮುಂದೆ ಇರಿಸಿದೆ.

ಪರೀಕ್ಷೆ ರದ್ದಾದ ಕಾರಣ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು

ಎನ್‌ಟಿಎ ಪರೀಕ್ಷೆಯನ್ನು ರದ್ದುಗೊಳಿಸಿ, ಜೂನ್ 21ರಂದು ಮರುಪರೀಕ್ಷೆ ಘೋಷಿಸಿದ್ದು ಲಕ್ಷಾಂತರ ವೈದ್ಯಕೀಯ ಆಕಾಂಕ್ಷಿಗಳಲ್ಲಿ ತೀವ್ರ ಮಾನಸಿಕ ಒತ್ತಡ, ಅನಿಶ್ಚಿತತೆ ಮತ್ತು ಹತಾಶೆಯನ್ನುಂಟುಮಾಡಿತ್ತು. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಮರುಪರೀಕ್ಷೆಯ ಒತ್ತಡದಿಂದಾಗಿ ದೇಶಾದ್ಯಂತ ಕನಿಷ್ಠ 20 ರಿಂದ 21 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಎಲ್ಲ ಪ್ರಮಾದದ ಹೊಣೆ ಹೊತ್ತು ಆಗಿನ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಜೂನ್ ಮತ್ತು ಜುಲೈ ತಿಂಗಳಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ದೀರ್ಘ ಹೋರಾಟ ನಡೆಸಿತ್ತು.

ಇದನ್ನೂ ಓದಿ: ಸಿಜೆಪಿ ಪ್ರತಿಭಟನೆಯಲ್ಲಿ ವ್ಯಕ್ತಿಯ ತಲೆಬುರುಡೆ ಒಡೆದ ಸ್ವತಂತ್ರ ಭಾರದ್ವಾಜ್‌ ಬಂಧನ

ಪ್ರತಿಭಟನೆಯ 22ನೇ ದಿನದಂದು (ಜುಲೈ 20) ಹತ್ತಾರು ಸಾವಿರ ವಿದ್ಯಾರ್ಥಿಗಳು ಸಂಸತ್ತಿನತ್ತ ಮೆರವಣಿಗೆ ಹೊರಟಾಗ ದೆಹಲಿ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತೀವ್ರ ಘರ್ಷಣೆ ಉಂಟಾಗಿ ಅಶ್ರುವಾಯು ಹಾಗೂ ಲಾಠಿಚಾರ್ಜ್ ನಡೆಸಲಾಗಿತ್ತು. ಘಟನೆಯಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡರು. ಪೊಲೀಸ್ ದೌರ್ಜನ್ಯದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೂ ದಾಖಲಾಗಿದೆ.

ತೀವ್ರಗೊಂಡ ಯುವಜನರ ಆಕ್ರೋಶ ಮತ್ತು 26 ದಿನಗಳ ಸತತ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ, ಜುಲೈ 25ರಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಪಡೆಯಿತು. ಅಲ್ಲದೆ, ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಗರಿಷ್ಠ ಪರಿಹಾರ ನೀಡುವುದು, ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಎಫ್‌ಐಆರ್ ಹಿಂಪಡೆಯುವುದು ಮತ್ತು ಪರೀಕ್ಷಾ ಅಕ್ರಮ ತಡೆ ಕಾಯ್ದೆಗೆ ತಿದ್ದುಪಡಿ ತರುವುದಾಗಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಅವರು ಲಿಖಿತ ಭರವಸೆ ನೀಡಿದ ಬಳಿಕ ಸಿಜೆಪಿ ತನ್ನ ಪ್ರತಿಭಟನೆಯನ್ನು ಹಿಂಪಡೆಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಶಿಥಿಲ ಶಾಲಾ ಕಟ್ಟಡ ತೆರವಿಗೆ ಉಪ ಲೋಕಾಯುಕ್ತರ ಸೂಚನೆ

ನಗರದ ನಂ.24ರ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಸಕರ ಮಾದರಿ ಪ್ರಾಥಮಿಕ...

ಮಂಗಳೂರು | ಬುಧವಾರದಿಂದ ವಿಮಾನ ನಿಲ್ದಾಣಕ್ಕೆ ಟ್ಯಾಕ್ಸಿ ಸೇವೆ ಬಂದ್!

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದಾನಿ ಸಂಸ್ಥೆಯ ಲೂಟಿ ವಿರುದ್ಧ ಟ್ಯಾಕ್ಸಿ/ಕ್ಯಾಬ್...

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ ಮುರಿದ ಶಸ್ತ್ರ ಚಿಕಿತ್ಸೆ!

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’ ಯಾರು?

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು'...