ನೀಟ್ ಪರೀಕ್ಷೆಯ ಪಾವಿತ್ರ್ಯತೆಗೆ ಧಕ್ಕೆಯಾಗಿದೆ, ಉತ್ತರ ನೀಡಿ: ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಸುಪ್ರೀಂ ನೋಟಿಸ್

Date:

ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ 2024ರ ಸ್ನಾತಕಪೂರ್ವ ಪದವಿ ಅರ್ಹತಾ ಪರೀಕ್ಷೆ(ನೀಟ್‌ ಯುಜಿ) ಫಲಿತಾಂಶಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್‌ಟಿಎ)ಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

- Advertisement -

ರಜಾಕಾಲದ ನ್ಯಾಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಅಸಾನುದ್ದೀನ್‌ ಅಮಾನುಲ್ಲಾ ನೇತೃತ್ವದ ದ್ವಿಸದಸ್ಯ ಪೀಠವು ಫಲಿತಾಂಶಕ್ಕೆ ಸಂಬಂಧಿಸಿದಂತೆ ಜುಲೈ 8ರೊಳಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್‌ನಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ನೀವು ಪರೀಕ್ಷೆ ನಡೆಸಿರುವುದರಿಂದ ಇದು ಸಾಮಾನ್ಯವಲ್ಲ, ಇದು ಪಾವಿತ್ರ್ಯತೆಯಾಗಿದೆ. ಪರೀಕ್ಷೆ ಪಾವಿತ್ರ್ಯತೆಗೆ ಧಕ್ಕೆಯಾಗಿದೆ, ಹಾಗಾಗಿ ನಮಗೆ ಉತ್ತರ ಅಗತ್ಯವಾಗಿದೆ. ನಿಮಗೆ ಎಷ್ಟು ಸಮಯ ಬೇಕು. ತಕ್ಷಣ ಮರು ಪ್ರಕ್ರಿಯೆ ಆರಂಭಿಸುತ್ತೀರಾ? ಇಲ್ಲದಿದ್ದರೆ ಕೌನ್ಸಲಿಂಗ್‌ ಶುರುವಾಗುತ್ತದೆ. ನಾನು ಕೌನ್ಸಲಿಂಗ್ಅನ್ನು ನಿಲ್ಲಿಸುವುದಿಲ್ಲ” ಎಂದು ಎನ್‌ಟಿಎ ಪರ ಹಾಜರಿದ್ದ ವಕೀಲರಿಗೆ ನ್ಯಾಯಮೂರ್ತಿಗಳಾದ ಅಮಾನುಲ್ಲಾ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರನೇ ಬಾರಿಗೆ ಪ್ರಧಾನಿಯಾದ ಮೋದಿ, ಹೊಸ ಮನುಷ್ಯರಾಗುವರೇ?

“ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ ವಂಚನೆ ಚಟುವಟಿಕೆಗಳನ್ನು ಕೈಗೊಂಡು ಅನುಕೂಲ ಮಾಡಿಕೊಟ್ಟಿರುವುದು ಅಸಮಾನತೆಯನ್ನು ಶಾಶ್ವತಗೊಳಿಸುತ್ತದೆ. ಹೆಚ್ಚು ವ್ಯಾಸಂಗ ಹಾಗೂ ಮೆರಿಟ್‌ ಮೇಲೆ ಯಶಸ್ಸುಗಳಿಸುವವರಿಗೆ ಅನಾನುಕೂಲವಾಗುತ್ತದೆ ಹಾಗೂ ಇದು ಸಮಾಜದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತದೆ” ಎಂದು ಅರ್ಜಿದಾರರು ನ್ಯಾಯಾಧೀಶರಿಗೆ ಮನವರಿಕೆ ಮಾಡಿದರು.

ವೈಜ್ಞಾನಿಕ ಹಾಗೂ ವೈದ್ಯಕೀಯದಲ್ಲಿ ಆಳವಾದ ತಿಳುವಳಿಕೆಯಿರಬೇಕೆಂದು ಈ ಕ್ಷೇತ್ರವು ಬಯಸುತ್ತದೆ. ವಂಚನೆ ಹಾಗೂ ಅನ್ಯಾಯದ ಮೂಲಕ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಸಾಮರ್ಥ್ಯದ ಕೊರತೆ ಎದುರಾಗಬಹುದು ಹಾಗೂ ರೋಗಿಗಳ ಜೀವಕ್ಕೆ ಅಪಾಯವಾಗಬಹುದು ಎಂದು ಅರ್ಜಿದಾರರ ವಕೀಲರು ಕೋರ್ಟ್‌ಗೆ ಮಾಹಿತಿ ನೀಡಿದರು.

ಈ ನಡುವೆ ಎನ್‌ಟಿಎ ಈಗಾಗಲೇ ನೀಟ್‌ 2024ರ ಪರೀಕ್ಷೆಗೆ ಹಾಜರಾಗಿರುವ 1600 ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ವಿಮರ್ಶಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ನಿರ್ಧರಿಸಿದೆ.

1536 ವಿದ್ಯಾರ್ಥಿಗಳಿಗೆ ಹೆಚ್ಚು ಅಂಕಗಳನ್ನು ನೀಡಿ ರ್ಯಾಂಕ್‌ ಬರಲು ಕಾರಣವಾದ ಎನ್‌ಟಿಎ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೇ 5 ರಂದು ನಡೆದ ಹಮ್ಮಿಕೊಳ್ಳಲಾಗಿದ್ದ ನೀಟ್‌ ಪರೀಕ್ಷೆಯಲ್ಲಿ ದೇಶಾದ್ಯಂತ 571 ಕೇಂದ್ರಗಳಲ್ಲಿ 24 ಲಕ್ಷಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...