ನೀಟ್ ಯುಜಿ ಮರುಪರೀಕ್ಷೆ ಫಲಿತಾಂಶ ಜು.20ಕ್ಕೂ ಮುನ್ನ ಪ್ರಕಟ: NTA

Date:

ನೀಟ್ ಯುಜಿ (NEET UG 2026) ಮರುಪರೀಕ್ಷೆಯ ಫಲಿತಾಂಶವನ್ನು ಜುಲೈ 20ರೊಳಗೆ ಪ್ರಕಟಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಅಧಿಕೃತವಾಗಿ ಖಚಿತಪಡಿಸಿದೆ.

- Advertisement -

ಮೇ 3ರಂದು ನಡೆದಿದ್ದ ಪರೀಕ್ಷೆಯು ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣ ರದ್ದಾಗಿದ್ದು, ಜೂನ್ 21ರಂದು ದೇಶಾದ್ಯಂತ ಮರುಪರೀಕ್ಷೆ ನಡೆಸಲಾಗಿತ್ತು. ಇದರ ಮೌಲ್ಯಮಾಪನ ಪ್ರಕ್ರಿಯೆಗಳು ಸದ್ಯ ಯುದ್ಧೋಪಾದಿಯಲ್ಲಿ ನಡೆಯುತ್ತಿದ್ದು, ಜುಲೈ 20ರ ಒಳಗಾಗಿ ಅಂತಿಮ ಫಲಿತಾಂಶ ಹೊರಬೀಳಲಿದೆ ಎಂದು ಎನ್‌ಟಿಎ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿ: ನೀಟ್‌ ಮರುಪರೀಕ್ಷೆಗೆ ಜೂನ್ 20ರಂದು ದೇಶಾದ್ಯಂತ ಎನ್‌ಟಿಎಯಿಂದ ‘ಅಣಕು ಕಾರ್ಯಾಚರಣೆ’

ಹಾಗೆಯೇ ಮರುಪರೀಕ್ಷೆಯಿಂದಾಗಿ ವೈದ್ಯಕೀಯ ಕೋರ್ಸ್‌ಗಳ (MBBS) ಪ್ರವೇಶಾತಿ ಪ್ರಕ್ರಿಯೆ ಅಥವಾ ಶೈಕ್ಷಣಿಕ ಸಾಲು ಆರಂಭವಾಗುವುದು ತಡವಾಗುವುದಿಲ್ಲ ಎಂದೂ ಎನ್‌ಟಿಎ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

“ನಾವು ಸದ್ಯ ಯಾವುದೇ ನಿರ್ದಿಷ್ಟ ದಿನಾಂಕವನ್ನು ಘೋಷಿಸಲ್ಲ. ಆದರೆ ಜುಲೈ 20ರೊಳಗೆ ಫಲಿತಾಂಶ ಹೊರಬೀಳುತ್ತದೆ. ಸಾಮಾನ್ಯವಾಗಿ, ಪರೀಕ್ಷೆಯ 45 ದಿನಗಳ ಒಳಗೆ ಫಲಿತಾಂಶಗಳನ್ನು ಪ್ರಕಟಿಸಲಾಗುತ್ತದೆ. ಆದರೆ ಈ ಬಾರಿ, ನಾವು 37 ದಿನಗಳಲ್ಲಿ ಪರೀಕ್ಷೆಯನ್ನು ನಡೆಸಿರುವುದರಿಂದ, ನಾವು ಫಲಿತಾಂಶಗಳನ್ನು ಶೀಘ್ರವೇ ಪ್ರಕಟಿಸಬೇಕಾಗುತ್ತದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಜೂನ್ 25ರಂದು ಬಿಡುಗಡೆಯಾಗಿದ್ದ ತಾತ್ಕಾಲಿಕ ಉತ್ತರ ಪತ್ರಿಕೆಗೆ (Provisional Answer Key) ಅಭ್ಯರ್ಥಿಗಳಿಂದ ಸುಮಾರು 10,000 ಆಕ್ಷೇಪಣೆಗಳು ಬಂದಿದ್ದು, ಇವುಗಳ ಪರಿಶೀಲನೆ ನಡೆಯುತ್ತಿದೆ. ಫಲಿತಾಂಶ ಪ್ರಕಟವಾಗುವುದಕ್ಕಿಂತ 1-2 ದಿನಗಳ ಮುಂಚಿತವಾಗಿ ಅಂತಿಮ ಉತ್ತರ ಪತ್ರಿಕೆಯನ್ನು (Final Answer Key) ಬಿಡುಗಡೆ ಮಾಡಲಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...