ದಂಪತಿಯೊಂದು ನೆರೆಮನೆಯ ನಾಲ್ಕು ವರ್ಷದ ಬಾಲಕನ ಜನನಾಂಗವನ್ನು ಕತ್ತರಿಸಿದ ಘಟನೆ ಬಿಹಾರದ ಪಟನಾದ ಗೌರಿಚಕ್ ಪ್ರದೇಶದಲ್ಲಿ ನಡೆದಿದೆ. ಬಾಲಕನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪೊಲೀಸ್ ಅಧಿಕಾರಿ ರಂಜನ್ ಕುಮಾರ್, “ಕ್ಷುಲ್ಲಕ ಕಾರಣಕ್ಕೆ ದಂಪತಿಯು ಬಾಲಕನ ಜನನಾಂಗವನ್ನು ಕತ್ತರಿಸಿದೆ ಎಂದು ಬಾಲಕನ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ” ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದ ರಾಜಕಾರಣಿಯ ಜನನಾಂಗ ಕತ್ತರಿಸಿದ ವೈದ್ಯೆ
“ಬಾಲಕನ ಸ್ಥಿತಿ ಗಂಭೀರವಾಗಿದ್ದು, ಸದ್ಯ ಪಟನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ. ಆರೋಪಿ ದಂಪತಿಗಳು ಪರಾರಿಯಾಗಿದ್ದು, ಅವರ ಪತ್ತೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
