ಉತ್ತರ ಪ್ರದೇಶ | ಹಿಂದೂ ಹುಡುಗಿಯನ್ನು ಪ್ರೀತಿಸಿದ ಯುವಕ; ಯುವತಿ ಕುಟುಂಬದಿಂದ ಮುಸ್ಲಿಂ ಪೋಷಕರ ಹತ್ಯೆ

Date:

ಮುಸ್ಲಿಂ ಸಮುದಾಯದ ಯುವಕನೊಬ್ಬ ಹಿಂದೂ ಹುಡುಗಿಯನ್ನು ಪ್ರೀತಿಸಿ ಓಡಿ ಹೋಗಿದ್ದಕ್ಕೆ ಯುವಕನ ತಂದೆ-ತಾಯಿಯನ್ನು ಯುವತಿ ಕುಟುಂಬದವರು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ.  

ಶುಕ್ರವಾರ (ಆಗಸ್ಟ್ 19) ನಡೆದ ದಾಳಿಯಲ್ಲಿ ದಂಪತಿಗಳಾದ ಅಬ್ಬಾಸ್ ಮತ್ತು ಅವರ ಪತ್ನಿ ಕಮರುಲ್ ನಿಶಾ ಸ್ಥಳದಲ್ಲೇ ಮೃತಪಟ್ಟಿದ್ದು, ಆರೋಪಿಗಳೆಲ್ಲರೂ ಸ್ಥಳದಿಂದ ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ.

ಕೆಲವು ವರ್ಷಗಳ ಹಿಂದೆ ಅಬ್ಬಾಸ್ ಅವರ ಮಗ ಪಕ್ಕದ ಮನೆಯ ಹಿಂದು ಸಮುದಾಯದ ಹುಡುಗಿಯೊಂದಿಗೆ ಓಡಿಹೋಗಿದ್ದ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಅಬ್ಬಾಸ್ ಅವರ ಪುತ್ರನನ್ನು ಜೈಲಿಗೆ ಕಳುಹಿಸಲಾಗಿತ್ತು ಎಂದು ಸೀತಾಪುರ ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಲಡಾಕ್‌ನಲ್ಲಿ 130 ಕಿಮೀ ಬೈಕ್‌ ಸವಾರಿ ಮಾಡಿದ ರಾಹುಲ್‌ ಗಾಂಧಿ; ಈ ವಾರ ಕಾರ್ಗಿಲ್‌ಗೆ ಭೇಟಿ

ಕೆಲವು ದಿನಗಳ ಹಿಂದೆ ಅಬ್ಬಾಸ್ ಅವರ ಮಗ ಜೈಲಿನಿಂದ ಹೊರಬಂದಾಗ, ಕುಟುಂಬದ ಕೆಲವು ಸದಸ್ಯರು ದಂಪತಿ ಮೇಲೆ ದಾಳಿ ನಡೆಸಲು ಯೋಜಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಸ್ಥರ ಪ್ರಕಾರ ಮೃತ ದಂಪತಿಯ ಪುತ್ರ ಹಾಗೂ ಶೌಕತ್ ರಾಂಪಾಲ್ ಅವರ ಪುತ್ರಿ ರೂಬಿ ನಡುವೆ ಪ್ರೇಮ ಸಂಬಂಧವಿತ್ತು. ಶೌಕತ್ 2020 ರಲ್ಲಿ ರೂಬಿಯನ್ನು ಅಪಹರಿಸಿದ್ದರು. ಆಗ ರೂಬಿ ಅಪ್ರಾಪ್ತ ವಯಸ್ಸಿನವಳಾಗಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ಶೌಕತ್ ನನ್ನು ಜೈಲಿಗೆ ಕಳುಹಿಸಿದ್ದರು. ಇದಾದ ನಂತರ ಮತ್ತೆ ಜೂನ್‌ನಲ್ಲಿ ರೂಬಿಯನ್ನು ಅಪಹರಿಸಿ ಮದುವೆಯಾದರು ಎಂದು ಚಕ್ರೇಶ್ ಮಿಶ್ರಾ ಹೇಳಿದ್ದಾರೆ.

ಈ ಕುರಿತು ತನಿಖೆ ನಡೆಯುತ್ತಿದ್ದು, ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನಿಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ...

ಮೊದಲ ಬಾರಿಗೆ ಮತ ಚಲಾಯಿಸಿದ ಹಣಕಾಸು ಆಯೋಗದ ಮುಖ್ಯಸ್ಥ ಅರವಿಂದ್ ಪನಗಾರಿಯಾ

ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...

ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 6 ನವಜಾತ ಶಿಶುಗಳು ಸಾವು

ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 6 ನವಜಾತ...