ಅಮೆರಿಕ ಜೊತೆ ವ್ಯಾಪಾರ ಒಪ್ಪಂದದ ಕುರಿತು ಯಾವುದೇ ಮಾತುಕತೆ ನಡೆದಿಲ್ಲ: ಕೇಂದ್ರ

Date:

Advertisements

ಮಿಲಿಟರಿ ಕಾರ್ಯಾಚರಣೆಗಳ ಕುರಿತು ಅಮೆರಿಕದ ಅಧಿಕಾರಿಗಳೊಂದಿಗೆ ಮಾತ್ರ ಮಾತನಾಡಲಾಗಿತ್ತು. ವ್ಯಾಪಾರ ಒಪ್ಪಂದದ ಕುರಿತು ಯಾವುದೇ ಮಾತುಕತೆ ನಡೆದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೇ 7 ರಂದು ಆಪರೇಷನ್ ಸಿಂಧೂರ್ ಪ್ರಾರಂಭವಾದಾಗಿನಿಂದ ಮೇ 10ರ ಕದನ ವಿರಾಮದವರೆಗೆ, ಸೇನಾ ಕಾರ್ಯಾಚರಣೆ ಕುರಿತು ಭಾರತ ಮತ್ತು ಅಮೆರಿಕದ ನಾಯಕರ ನಡುವೆ ಸಂಭಾಷಣೆಗಳು ನಡೆದವು. ಈ ಚರ್ಚೆಗಳಲ್ಲಿ ಯಾವುದೇ ವ್ಯಾಪಾರದ ವಿಷಯವು ಬರಲಿಲ್ಲ” ಎಂದು ಅವರು ಹೇಳಿದರು.

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕುರಿತು ಮಾಹಿತಿ ನೀಡಿದ ಅವರು, ಕೈಗಾರಿಕೆಯನ್ನು ಬೆಳೆಸಿದಂತೆ ಭಾರೀ ಪ್ರಮಾಣದಲ್ಲಿ ಭಯೋತ್ಪಾದನೆಯನ್ನು ಪೋಷಿಸಿರುವ ಪಾಕಿಸ್ತಾನವು, ಅದರ ಪರಿಣಾಮಗಳಿಂದ ತಪ್ಪಿಸಿಕೊಳ್ಳಬಹುದು ಎಂದು ಭಾವಿಸಿದ್ದರೆ ಅದು ಮೂರ್ಖತನ. ಈಗ ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಪ್ರದೇಶವನ್ನು ಬಿಟ್ಟುಕೊಡುವುದ ಮಾತ್ರ ನಮ್ಮ ಮುಂದಿರುವ ಏಕೈಕ ವಿಷಯ ಎಂದರು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸಬರಿಗೆ ಅವಕಾಶದ ಬಾಗಿಲು ತೆರೆದ ವಿರಾಟ್ ಕೊಹ್ಲಿ ವಿದಾಯ

ಈ ಹಿಂದೆ ಹೇಳಿದಂತೆ, ಅವರ ಡಿಜಿಎಂಒ ಮತ್ತು ಡಿಜಿಎಂಒ ನಡುವೆ ಮಾತುಕತೆ ನಡೆದಿದೆ. ಕದನ ವಿರಾಮ ಮಾತುಕತೆಗಳನ್ನು ಯಾರು ಪ್ರಾರಂಭಿಸಿದರು ಎಂಬುದನ್ನು ನಾವು ಈಗಾಗಲೇ ಸ್ಪಷ್ಟಪಡಿಸಿದ್ದೇವೆ ಎಂದು ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದರು.

ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸುವವರೆಗೆ ಸಿಂಧೂ ಜಲ ಒಪ್ಪಂದವನ್ನು ತಡೆಹಿಡಿಯಲಾಗುವುದು ಎಂದು ಇದೇ ಸಂದರ್ಭದಲ್ಲಿ ರಣಧೀರ್ ಜೈಸ್ವಾಲ್ ತಿಳಿಸಿದರು.

ಭಾರತೀಯ ಸಶಸ್ತ್ರ ಪಡೆಗಳು ಮತ್ತು ಭಾರತೀಯ ವಾಯುಪಡೆ ಪಾಕಿಸ್ತಾನಿ ವಾಯುನೆಲೆಗಳನ್ನು ಅತ್ಯಂತ ಪರಿಣಾಮಕಾರಿ ಕ್ರಮದಿಂದ ನಿಷ್ಕ್ರಿಯಗೊಳಿಸಿವೆ. ಭಾರತೀಯ ಸಶಸ್ತ್ರ ಪಡೆಗಳ ಬಲದ ಹಿನ್ನೆಲೆಯಲ್ಲಿ ಪಾಕಿಸ್ತಾನವು ಕದನ ವಿರಾಮಕ್ಕೆ ಮುಂದಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X