ಶೀಘ್ರದಲ್ಲೇ ಪ್ರಧಾನಿ ಬದಲು, ಡಿ.19ಕ್ಕೆ ದೇಶದಲ್ಲಿ ರಾಜಕೀಯ ಬಿರುಗಾಳಿ: ಕಾಂಗ್ರೆಸ್‌ ನಾಯಕ ಪೃಥ್ವಿರಾಜ್‌ ಚೌಹಾಣ್

Date:

ಶೀಘ್ರವೇ ದೇಶದಲ್ಲಿ ಪ್ರಧಾನಿ ಬದಲಾಗಬಹುದು, ನೂತನ ಪ್ರಧಾನಿ ಮಹಾರಾಷ್ಟ್ರದವರು ಆಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಪೃಥ್ವಿರಾಜ್‌ ಚೌಹಾಣ್‌ ಹೇಳಿದ್ದಾರೆ.

- Advertisement -

ಅವರ ಈ ಹೇಳಿಕೆಯು ಜಾಗತಿಕ ಮಟ್ಟದಲ್ಲಿನ ರಾಜಕೀಯ ಬದಲಾವಣೆಗೆ ಸಂಬಂಧಿಸಿದ್ದು, ಅದರಲ್ಲೂ ಡಿ.19ರಂದು ಬಿಡುಗಡೆಯಾಗಲಿರುವ ಅಮೆರಿಕದ ಲೈಂಗಿಕ ಹಗರಣಗಳ ಎಪ್‌ಸ್ಟೀನ್‌ ದಾಖಲೆಗಳಿಗೆ ಸಂಬಂಧಿಸಿದೆ ಎಂದು ಚೌಹಾಣ್‌ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಅಪರಾಧಿಯೊಬ್ಬನಿಗೆ ಸಂಬಂಧಿಸಿದ ಈ ದಾಖಲೆಯಲ್ಲಿ ವಿಶ್ವದ ಹಲವು ನಾಯಕರ ಹೆಸರಿದೆ ಎನ್ನಲಾಗಿದೆ. ಇತ್ತೀಚೆಗೆ ಚೌಹಾಣ್‌ ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ್ದ ಪೋಸ್ಟ್‌ನಲ್ಲಿ ಮರಾಠಿಗರು ಪ್ರಧಾನಿಯಾಗುವ ಸಾಧ್ಯತೆ ಬರೆದಿದ್ದರು.

ಎಪ್‌ಸ್ಟೀನ್‌ ಅಮೆರಿಕದಲ್ಲಿ ಲೈಂಗಿಕ ದೌರ್ಜನ್ಯ ಆರೋಪಗಳನ್ನು ಹೊತ್ತ ಶ್ರೀಮಂತ ವ್ಯಕ್ತಿ. 2019ರಲ್ಲಿ ಜೈಲಿನಲ್ಲಿ ಸಾವನ್ನಪ್ಪಿದ್ದ ಅವರ ಸಂಬಂಧಿತ ದಾಖಲೆಗಳು ಈಗ ಬಿಡುಗಡೆಯಾಗುತ್ತಿವೆ. ಡಿಸೆಂಬರ್ 19ಕ್ಕೆ ಈ ಫೈಲ್ಸ್ ಸಾರ್ವಜನಿಕಗೊಳ್ಳಲಿವೆ. ಇದರಲ್ಲಿ ವಿಶ್ವದ ಪ್ರಮುಖ ನಾಯಕರು, ರಾಜಕಾರಣಿಗಳ ಹೆಸರುಗಳು ಬರಬಹುದು ಎಂಬ ಚರ್ಚೆಯಿದೆ. ಭಾರತದ ಕೆಲವು ದೊಡ್ಡ ರಾಜಕಾರಣಿಗಳ ಹೆಸರು ಬಂದರೆ, ದೇಶದಲ್ಲಿ ದೊಡ್ಡ ರಾಜಕೀಯ ತೊಂದರೆ ಉಂಟಾಗಬಹುದು. ಅದರಿಂದ ಶೀಘ್ರದಲ್ಲೇ ಭಾರತಕ್ಕೆ ಹೊಸ ಪ್ರಧಾನಮಂತ್ರಿ ಬರಬಹುದು ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸ್ತಿ ಅಖಾಡಕ್ಕೆ ಮರಳುವ ವಿನೇಶ್‌ ಫೋಗಟ್‌ ನಿರ್ಧಾರಕ್ಕೆ ಸ್ವಾಗತ!

ಬಿಜೆಪಿ ವಲಯದಿಂದ ಈ ಹೇಳಿಕೆಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಇದು ಕಾಂಗ್ರೆಸ್‌ನ ರಾಜಕೀಯ ಆಟವಷ್ಟೇ ಎಂದು ಅವರು ಆರೋಪಿಸಿದ್ದಾರೆ. ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಭಾರತೀಯ ನಾಯಕರ ಹೆಸರುಗಳು ಬಂದರೆ ಮಾತ್ರ ರಾಜಕೀಯ ಬಿರುಗಾಳಿ ಸಾಧ್ಯ. ಆದರೆ ಇದುವರೆಗೆ ಬಿಡುಗಡೆಯಾದ ದಾಖಲೆಗಳಲ್ಲಿ ಗಂಭೀರ ಆರೋಪಗಳಿಲ್ಲ.

ಡಿಸೆಂಬರ್ 19ರ ಬಿಡುಗಡೆಯ ನಂತರವೇ ಸತ್ಯಾಂಶ ತಿಳಿಯಲಿದೆ. ಇದು ಭಾರತೀಯ ರಾಜಕಾರಣಕ್ಕೆ ದೊಡ್ಡ ತಿರುವು ನೀಡಬಹುದೇ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಿಕ್ಸ್‌ ಗೈರುಹಾಜರಿಗೆ ಬಾಂಗ್ಲಾದ ಅದಾನಿ ವಿದ್ಯುತ್‌ ಸ್ಥಾವರ ಸ್ಥಗಿತ; ಬಿಎನ್‌ಪಿ ಗಂಭೀರ ಆರೋಪ

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶದ ಪ್ರಧಾನಿ ತಾರಿಖ್...

ಇಪಿಎಫ್‌ಒ ವೇತನ ಮಿತಿ 25,000 ರೂಪಾಯಿಗೆ ಏರಿಕೆ: ಕೇಂದ್ರ ಸಂಪುಟ ಒಪ್ಪಿಗೆ

ಸಂಘಟಿತ ವಲಯದ ಲಕ್ಷಾಂತರ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಭಾರಿ ಸಿಹಿ ಸುದ್ದಿ...

ಸಿಜೆಪಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ: ಸೆ.17ರಿಂದ ಶಾಲೆಗಳ ಪರಿಶೀಲನೆ

ದೇಶದ ಅರಣ್ಯ ಮತ್ತು ಮೂಲನಿವಾಸಿ ಪ್ರದೇಶಗಳ ಶಾಲೆಗಳಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮತ್ತು...