ಹೊಸ ತೆರಿಗೆ, ಸೆಸ್ ಜಾರಿ: ಫೆ.1ರಿಂದ ಸಿಗರೇಟ್, ಬೀಡಿ, ಪಾನ್ ಮಸಾಲ ದುಬಾರಿ!

Date:

ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್ ಮಸಾಲದ ಮೇಲೆ ಹೊಸ ಸೆಸ್ ವಿಧಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹೊಸ ತೆರಿಗೆ ಮತ್ತು ಸೆಸ್‌ಗಳು ಫೆಬ್ರವರಿ 1ರಿಂದ ಜಾರಿಗೆ ಬರಲಿದ್ದು, ಸಿಗರೇಟ್, ಬೀಡಿ, ಪಾನ್ ಮಸಾಲಗಳ ಬೆಲೆಯೂ ಏರಿಕೆಯಾಗಲಿದೆ.

- Advertisement -

ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆ ಪ್ರಕಾರ, ತಂಬಾಕು ಮತ್ತು ಪಾನ್ ಮಸಾಲದ ಮೇಲಿನ ಹೊಸ ಸುಂಕಗಳು ಜಿಎಸ್‌ಟಿ ದರಕ್ಕಿಂತ ಹೆಚ್ಚಿರುತ್ತವೆ. ಪ್ರಸ್ತುತ, ಈ ಮಾದಕ ಸರಕುಗಳ ಮೇಲೆ ವಿಧಿಸಲಾಗುತ್ತಿರುವ ಪರಿಹಾರ ಸೆಸ್ ಹೆಚ್ಚಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಫೆಬ್ರವರಿ 1ರಿಂದ ಪಾನ್ ಮಸಾಲ, ಸಿಗರೇಟ್, ತಂಬಾಕು ಮತ್ತು ಅಂತಹ ಮಾದಕ ಉತ್ಪನ್ನಗಳ ಮೇಲೆ 40%ರಷ್ಟು ಜಿಎಸ್‌ಟಿ ವಿಧಿಸಲಾಗುತ್ತದೆ. ಜೊತೆಗೆ, ಪಾನ್ ಮಸಾಲದ ಮೇಲೆ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ವಿಧಿಸಲಾಗುತ್ತದೆ. ಇನ್ನು, ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳು ಹೆಚ್ಚುವರಿ ಅಬಕಾರಿ ಸುಂಕವನ್ನು ಹೇರಲಾಗುತ್ತದೆ ಎಂದು ಅಧಿಸೂಚನೆ ಹೇಳಿದೆ.

ಡಿಸೆಂಬರ್‌ನಲ್ಲಿ ನಡೆದ ಸಂಸತ್‌ ಅಧಿವೇಶನದಲ್ಲಿ ಹಣಕಾಸು ಸಚಿವಾಲಯವು ಚೂಯಿಂಗ್ ತಂಬಾಕು, ಜರ್ದಾಯುಕ್ತ ತಂಬಾಕು ಹಾಗೂ ಗುಟ್ಕಾ ಪ್ಯಾಕಿಂಗ್ ಯಂತ್ರಗಳು (ಸಾಮರ್ಥ್ಯ ನಿರ್ಣಯ ಮತ್ತು ಸುಂಕ ಸಂಗ್ರಹ) ನಿಯಮಗಳು-2026 ಮಸೂದೆಯನ್ನು ಮಂಡಿಸಿತ್ತು. ಈ ಮಸೂದೆಯು ಪಾನ್ ಮಸಾಲಾ ತಯಾರಿಕೆ ಮತ್ತು ತಂಬಾಕಿನ ಮೇಲಿನ ಅಬಕಾರಿ ಸುಂಕದ ಜೊತೆಗೆ, ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ವಿಧಿಸಲು ಅವಕಾಶ ನೀಡುತ್ತದೆ. ಈ ಸಮೂದೆಯು ಸಂಸತ್‌ನಲ್ಲಿ ಅಂಗೀಕಾರಕೊಂಡಿದ್ದು, ಫೆಬ್ರವರಿ 1ರಿಂದ ಜಾರಿಗೆ ಬರಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...