ಯುಪಿ ಚುನಾವಣೆಗೆ ಹೊಸ ತಿರುವು: ಓವೈಸಿ- ಚಂದ್ರಶೇಖರ್ ಮೈತ್ರಿ ಘೋಷಣೆ; ಆಜಾದ್ ಸಿಎಂ ಅಭ್ಯರ್ಥಿ

Date:

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಆಜಾದ್ ಸಮಾಜ ಪಕ್ಷದ (ಕಾನ್ಶಿರಾಮ್) ಅಧ್ಯಕ್ಷ ಹಾಗೂ ನಗೀನಾ ಸಂಸದ ಚಂದ್ರಶೇಖರ್ ಆಜಾದ್ ಅವರು ಚುನಾವಣಾ ಪೂರ್ವ ಮೈತ್ರಿಯನ್ನು ಗುರುವಾರ ಅಧಿಕೃತವಾಗಿ ಘೋಷಿಸಿದ್ದಾರೆ.

- Advertisement -

ಲಕ್ನೋದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಭಯ ನಾಯಕರು, ತಮ್ಮ ನೂತನ ಮೈತ್ರಿಕೂಟಕ್ಕೆ ‘ಸಾಮಾಜಿಕ ಪರಿವರ್ತನಾ ಮೋರ್ಚಾ’ ( SPM) ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ. ರಾಜ್ಯದ ಎಲ್ಲಾ 403 ವಿಧಾನಸಭಾ ಕ್ಷೇತ್ರಗಳಲ್ಲೂ ಈ ಮೈತ್ರಿಕೂಟ ಸ್ಪರ್ಧಿಸಲಿದ್ದು, ಚಂದ್ರಶೇಖರ್ ಆಜಾದ್ ಅವರು ಮೈತ್ರಿಕೂಟದ ಮುಖ್ಯಮಂತ್ರಿ (CM) ಅಭ್ಯರ್ಥಿಯಾಗಿರಲಿದ್ದಾರೆ ಎಂದು ಓವೈಸಿ ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಇದನ್ನೂ ಓದಿ: ಯೋಗಿ ನಾಯಕತ್ವದಲ್ಲೇ 2027ರ ಯುಪಿ ಚುನಾವಣೆ: ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್

Advertisements

ಉತ್ತರ ಪ್ರದೇಶದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವುದನ್ನು ತಡೆಯುವುದು ಮತ್ತು ರಾಜ್ಯದಲ್ಲಿ ಬಲಿಷ್ಠ ಹಾಗೂ ವಿಶ್ವಾಸಾರ್ಹ ಪರ್ಯಾಯ ಶಕ್ತಿಯಾಗಿ ಹೊರಹೊಮ್ಮುವುದು ತಮ್ಮ ಮುಖ್ಯ ಗುರಿಯಾಗಿದೆ ಎಂದು ಓವೈಸಿ ಹೇಳಿದ್ದಾರೆ.

ವರದಿಗಳ ಪ್ರಕಾರ, ಉತ್ತರ ಪ್ರದೇಶದ ಒಟ್ಟು ಜನಸಂಖ್ಯೆಯಲ್ಲಿ ಮುಸ್ಲಿಮರು ಸುಮಾರು 19-20% ಮತ್ತು ದಲಿತರು (ಪರಿಶಿಷ್ಟ ಜಾತಿ) ಸುಮಾರು 21% ರಷ್ಟಿದ್ದಾರೆ. ಒಟ್ಟಾರೆ 40% ರಷ್ಟಿರುವ ಈ ಎರಡು ಸಮುದಾಯಗಳ ಮತಗಳನ್ನು ಕ್ರೋಢೀಕರಿಸುವ ಗುರಿಯನ್ನು ಈ ಮೈತ್ರಿ ಹೊಂದಿದೆ. ಇಲ್ಲಿಯವರೆಗೆ ಇತರ ರಾಜಕೀಯ ಪಕ್ಷಗಳು ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳನ್ನು ಕೇವಲ ಮತಬ್ಯಾಂಕ್ ಆಗಿ ಮಾತ್ರ ಬಳಸಿಕೊಂಡಿವೆ ಎಂದು ಓವೈಸಿ ಆರೋಪಿಸಿದ್ದಾರೆ.

ಶಿಕ್ಷಣದ ಗುಣಮಟ್ಟ ಕುಸಿತ, ಯುವಕರ ನಿರುದ್ಯೋಗ, ರೈತರ ಸಮಸ್ಯೆಗಳು, ಮಹಿಳೆಯರ ಸುರಕ್ಷತೆ ಹಾಗೂ ದಲಿತರು ಮತ್ತು ಶೋಷಿತ ವರ್ಗಗಳ ಮೇಲಿನ ದೌರ್ಜನ್ಯಗಳ ವಿರುದ್ಧ ಈ ರಂಗ ಹೋರಾಟ ನಡೆಸಲಿದೆ ಎಂದು ನಾಯಕರು ತಿಳಿಸಿದ್ದಾರೆ. ಸಾಮಾಜಿಕ ಬದಲಾವಣೆಯ ಆಂದೋಲನಕ್ಕೆ ಅಧಿಕೃತ ಚಾಲನೆ ನೀಡುವ ಸಲುವಾಗಿ ಇದೇ ನವೆಂಬರ್ 26ರಂದು ಬೃಹತ್ ಸಾರ್ವಜನಿಕ ರ‍್ಯಾಲಿಯನ್ನು ಆಯೋಜಿಸಿರುವುದಾಗಿ ಉಭಯ ನಾಯಕರು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆಗೆ ಮುನ್ನ ಬಿಎಸ್‌ಪಿ ಚುರುಕು: ಬೃಹತ್ ರ‍್ಯಾಲಿಗೆ ಮಾಯಾವತಿ ಸಜ್ಜು

ಬಿಜೆಪಿಯನ್ನು ಸೋಲಿಸುವ ಉದ್ದೇಶ ಹೊಂದಿರುವ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ಸೇರಿದಂತೆ ಇತರ ವಿರೋಧ ಪಕ್ಷಗಳು ಬಯಸಿದರೆ ಈ ಮೈತ್ರಿಕೂಟವನ್ನು ಸೇರಬಹುದು ಎಂದು ಚಂದ್ರಶೇಖರ್ ಆಜಾದ್ ಹೇಳಿದ್ದಾರೆ.

ಮತ್ತೊಂದೆಡೆ, ಈ ಹೊಸ ಮೈತ್ರಿಯ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕರು, ಇಂಡಿಯಾ ಮೈತ್ರಿಕೂಟವನ್ನು ಸೇರುವ ಬದಲು ಪ್ರತ್ಯೇಕ ರಂಗ ರಚಿಸುತ್ತಿರುವುದು ಬಿಜೆಪಿಗೆ ಪರೋಕ್ಷವಾಗಿ ನೆರವಾಗುವ (ಬಿ-ಟೀಮ್) ತಂತ್ರದಂತೆ ಕಾಣುತ್ತಿದೆ ಎಂದು ಟೀಕಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಚಂದ್ರಶೇಖರ್ ಆಜಾದ್, “ಪ್ರತ್ಯೇಕವಾಗಿ ಚುನಾವಣೆಗೆ ಸ್ಪರ್ಧಿಸುವುದೇ ಬಿಜೆಪಿಯ ಬಿ-ಟೀಮ್ ಎನ್ನುವುದಾದರೆ, ಮಧ್ಯಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ ಮತ್ತು ದೆಹಲಿಯಲ್ಲಿ ಕಾಂಗ್ರೆಸ್, ಎಸ್‌ಪಿ, ಟಿಎಂಸಿ ಮತ್ತು ಆಪ್ ಪಕ್ಷಗಳು ಪರಸ್ಪರ ವಿರುದ್ಧವಾಗಿ ಸ್ಪರ್ಧಿಸಿದ್ದೇಕೆ?” ಎಂದು ಪ್ರಶ್ನಿಸಿದ್ದಾರೆ.

ಈ ನೂತನ ಮೈತ್ರಿಯು 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರಮುಖ ವಿರೋಧ ಪಕ್ಷಗಳಾದ ಎಸ್‌ಪಿ, ಬಿಎಸ್‌ಪಿ ಹಾಗೂ ಕಾಂಗ್ರೆಸ್‌ನ ಚುನಾವಣಾ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೈದಿಗಳ ಕುಟುಂಬದ ಕತೆ: ವೃದ್ಧಾಪ್ಯ ಎಂದರೆ ಭಯ, ಸಾಲ, ನಿರ್ಲಕ್ಷ್ಯದ ಬದುಕು

“ವಿಚಾರಣಾಧೀನ ಕೈದಿಗಳ ಕುಟುಂಬಗಳಲ್ಲಿರುವ ಹಿರಿಯ ನಾಗರಿಕರು” ಎಂಬ ವಿಷಯದ ಕುರಿತು ಬೆಂಗಳೂರು...

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ WDI ಅರ್ಜಿ: ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ

ಭಾರತದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ ಮಹಿಳಾ ಘೋಷಣೆ ಅಂತಾರಾಷ್ಟ್ರೀಯ ಸಂಸ್ಥೆ...

ನ್ಯಾಯಾಧೀಶರ ಪುತ್ರನ ಕಾರು ಅಪಘಾತ: ಬಾಲಕನ ಜಾಮೀನು ರದ್ದು ಕೋರಿ ಕೇರಳ ಹೈಕೋರ್ಟ್‌ಗೆ ಸಂತ್ರಸ್ತ ಕುಟುಂಬ ಅರ್ಜಿ

ಕೊಚ್ಚಿಯ ಚೇರಾನಲ್ಲೂರ್‌ನಲ್ಲಿ ನಡೆದ ಮರ್ಸಿಡಿಸ್ ಬೆಂಝ್ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ...

ಬಾಗಲಕೋಟೆ |6 ಪಟ್ಟಣ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ದಾಳಿ

ಇ-ಸ್ವತ್ತು, ಎನ್‌ಓಸಿ, ಕಟ್ಟಡ ಪರವಾನಗಿ ಸೇರಿದಂತೆ ವಿವಿಧ ಅಕ್ರಮಗಳ ಆರೋಪ, 41...